Document

Gubbi: ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಗೆ ನನ್ನ ವಿರೋಧವು ಇದೆ: ಶಾಸಕ ಎಸ್ ಆರ್ ಶ್ರೀನಿವಾಸ್. 

Gubbi: ಎಕ್ಸ್ ಪ್ರೆಸ್ ಲಿಂಕ್ ಕೆನಲ್ ಗೆ ನನ್ನ ವಿರೋಧವು ಇದೆ: ಶಾಸಕ ಎಸ್ ಆರ್ ಶ್ರೀನಿವಾಸ್.

Gubbi,

ಗುಬ್ಬಿ : ಹೇಮಾವತಿ ಎಕ್ಸಪ್ರಸ್ ಲಿಂಕ್ ಕೆನಾಲೆಗೆ ಸಂಪೂರ್ಣವಾಗಿ ನನ್ನ ವಿರೋಧವೂ ಸಹ ಇದೆ ಎಂದು ಶಾಸಕ ಎಸ್ ಆರ್ ಶ್ರೀನಿವಾಸ್ ತಿಳಿಸಿದರು.

 

 

ತಾಲೂಕಿನ ನಿಟ್ಟೂರು ಹೋಬಳಿಯ ತ್ಯಾಗಟೂರು ಗ್ರಾಮ ಪಂಚಾಯಿತಿಯಲ್ಲಿ ನೂತನ ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು.

 

 

ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆಗೆ ನಮ್ಮ ವಿರೋಧವಿದೆ. ಈಗಾಗಲೇ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರೊಂದಿಗೆ ಮಾತನಾಡಿ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿದೆ. ಸಧ್ಯದಲ್ಲೇ ಮುಖ್ಯಮಂತ್ರಿಗಳು ಸಭೆ ಕರೆದು ಮಾತನಾಡಲಿದ್ದಾರೆ ಅಲ್ಲಿಯವರೆಗೂ ಕಾಮಗಾರಿ ಸ್ಥಗಿತಗೊಳಿಸಲಾಗಿದೆ. ಎಕ್ಸ್ ಪ್ರೆಸ್ ಕೆನಾಲ್ ಯೋಜನೆಗೆ ನಮ್ಮ ಸಂಪೂರ್ಣ ವಿರೋಧವಿದೆ ಎಂದ ಅವರು

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಹಿನ್ನಡೆಯಾಗಿದೆ ಮತದಾರರ ತೀರ್ಪನ್ನು ನಾವು ಗೌರವಿಸುತ್ತೇವೆಎಂದ ಅವರು

ತ್ಯಾಗಟೂರು ಶಾಲೆಯಲ್ಲಿ ನೂತನ ಶಾಲಾ ಕಟ್ಟಡ ಉದ್ಘಾಟಿಸಿ ಇನ್ನೂ ಹೆಚ್ಚುವರಿ ನಾಲ್ಕು ಕಟ್ಟಡಗಳನ್ನು ಹಾಕಲಾಗಿದೆ.

ಸರ್ಕಾರಿ ಶಾಲೆಗಳಲ್ಲಿ ತರಬೇತಿ ಪಡೆದ ನುರಿತ ಶಿಕ್ಷಕರಿದ್ದಾರೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯಲಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಉನ್ನತ ಮಟ್ಟಕ್ಕೆ ಹೋಗಬೇಕು ಎಂದು ತಿಳಿಸಿದರು.

 

 

 

ಈ ಸಂದರ್ಭದಲ್ಲಿ ತಾ ಪಂ ಕಾರ್ಯನಿರ್ವಣಾಧಿಕಾರಿ ಪರಮೇಶ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಲೇಪಾಕ್ಷಫ್ಪ, ಗ್ರಾಪಂ ಅಧ್ಯಕ್ಷ ಕುಮಾರಸ್ವಾಮಿ, ಉಪಾಧ್ಯಕ್ಷೆ ವಸಂತ, ಪಿಡಿಒ ವನಜಾಕ್ಷಿ,ಹಾಗೂ ಗ್ರಾ ಪಂ ಸದಸ್ಯರಾದ ಲಕ್ಷ್ಮಿಪತಿ ಕೆ ಜೆ, ಬೈರಮ್ಮ ಈಶ್ವರಯ್ಯ, ನಳಿನ ಪ್ರಕಾಶ್, ಪಂಕಜ, ಭವ್ಯಪರಮೇಶ್, ಜಗದೀಶ್ ಶಿವನಂಜಯ್ಯ, ಓಂಕಾರ್ ಪ್ರಸಾದ್, ವಿದ್ಯಾಧರ, ಮುಖಂಡರಾದ ಅದಲಗೆರೆ ಈಶ್ವರಯ್ಯ ಹಾಗೂ ಶಾಲಾ ಶಿಕ್ಷಕರು ಮತ್ತು ಮಕ್ಕಳು ಹಾಜರಿದ್ದರು.

ವರದಿ: ಶ್ರೀಕಾಂತ್ ಗುಬ್ಬಿ

 

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

Document

Leave a Reply

Your email address will not be published. Required fields are marked *