Gubbi:ರೈತರು ಸಹಕಾರಿ ಸಂಸ್ಥೆಗಳಲ್ಲಿ ಸಾಲ ಪಡೆದು ಆರ್ಥಿಕವಾಗಿ ಸದೃಢರಾಗಿ- ಸಹಕಾರ ಸಚಿವ ಕೆ ಎನ್ ರಾಜಣ್ಣ.

Janataa24 NEWS DESK

Gubbi:ರೈತರು ಸಹಕಾರಿ ಸಂಸ್ಥೆಗಳಲ್ಲಿ ಸಾಲ ಪಡೆದು ಆರ್ಥಿಕವಾಗಿ ಸದೃಢರಾಗಿ- ಸಹಕಾರ ಸಚಿವ ಕೆ ಎನ್ ರಾಜಣ್ಣ.

ಗುಬ್ಬಿ: ರೈತರು ಸಹಕಾರಿ ಸಂಸ್ಥೆಗಳಲ್ಲಿ ಸಾಲ ಪಡೆದು ಕೃಷಿ ಕ್ಷೇತ್ರ, ಹೈನುಗಾರಿಕೆ ಸೇರಿದಂತೆ ಇತರ ಚಟುವಟಿಕೆಗಳಲ್ಲಿ ತೊಡಗಿಸಿ ಆರ್ಥಿಕವಾಗಿ ಸದೃಢರಾಗಬೇಕು ಹಾಗೂ ಸ್ವಾವಲಂಬನೆ ಜೀವನ ಸಾಗಿಸಬೇಕೆಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ತಿಳಿಸಿದರು.

 

 

ತಾಲ್ಲೂಕಿನ ಹಾಗಲವಾಡಿಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ತೆರದ ಪ್ರಧಾನಮಂತ್ರಿ ಭಾರತೀಯ ಜನನೌಷಧಿ ಕೇಂದ್ರ ಉದ್ಘಾಟಸಿ ಮಾತನಾಡಿದ ಅವರು

ಸಹಕಾರ ಬ್ಯಾಂಕುಗಳಲ್ಲಿ ಸಾಲ ಪಡೆಯುವುದು ರೈತರ ಹಕ್ಕಾಗಿದ್ದು ಅದೇ ರೀತಿ ಪಡೆದ ಸಾಲವನ್ನು ಸಕಾಲಕ್ಕೆ ಮರುಪಾವತಿ ಮಾಡುವ ಮೂಲಕ ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಕಾರಣರಾಗಬೇಕು. ಇನ್ನೂ ರೈತರ ಅಭಿವೃದ್ಧಿಗಾಗಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಾಲ ಸೌಲಭ್ಯಗಳನ್ನು ನೀಡಲಾಗುವುದು. ರೈತರು ಕೃಷಿಯ ಜೊತೆಗೆ ಉಪ ಕಸುಬುಗಳನ್ನು ಮಾಡುತ್ತಾ ಸ್ವಾವಲಂಬಿ ಜೀವನವನ್ನು ನಡೆಸುವುದರಿಂದ ಆರ್ಥಿಕವಾಗಿ ಸದೃಢರಾಗಬಹುದು ಹಾಗೂ
ಸ್ವತಂತ್ರ ಬಂದಾಗ ಭಾರತದ ಜನಸಂಖ್ಯೆ 30 ಕೋಟಿ ಇದ್ದು ಈಗ 140 ಕೋಟಿ ಇದೆ ಆದರೆ ಭೂಮಿಯ ವಿಸ್ತೀರ್ಣದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಹಾಗಾಗಿ ರೈತರು ತಮ್ಮ ಭೂ ದಾಖಲೆಗಳನ್ನು ಸರಿಪಡಿಸಿಕೊಂಡು ಯಾವುದೇ ಹಣದ ಆಮಿಷಕ್ಕೆ ಒಳಗಾಗದೆ ಮುಂದಿನ ಪೀಳಿಗೆಯ ಕೃಷಿ ಚಟುವಟಿಕೆಗೆ ಹೆಚ್ಚಿನ ಪ್ರಾಧಾನ್ಯತೆ ನೀಡಬೇಕು.

 

 

ಹಾಗಲವಾಡಿ ಗ್ರಾಮದ ಶಾಲೆಗಳಿಗೆ ಶುದ್ಧ ಕುಡಿಯುವ ನೀರನ ಘಟಕ ಹಾಕಲು ಈಗಾಗಲೇ ಸೂಚಿಸಿದ್ದೇನೆ. ಪೋಷಕರು ತಮ್ಮ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಕೊಡಿಸಬೇಕು. ಹಾಗೂ ಮಕ್ಕಳ ಆರೋಗ್ಯದ ಮೇಲು ಕಾಳಜಿ ವಹಿಸಿ ತಮ್ಮ ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಬೇಕು ಎಂದು ತಿಳಿಸಿದರು.

 

 

ಈ ಸಂದರ್ಭದಲ್ಲಿ ,
ಡಿಸಿಸಿ ಬ್ಯಾಂಕ್ ಜಿಲ್ಲಾ ಉಪಾಧ್ಯಕ್ಷ ಜಿ ಜೆ ರಾಜಣ್ಮ,
ಡಿಸಿಸಿ ಬ್ಯಾಂಕ್ ನಿರ್ದೇಶಕ ಪ್ರಭಾಕರ್,
ವಿಎಸ್ಎಸ್ಎನ್ ಅಧ್ಯಕ್ಷ, ಜಯಪ್ರಕಾಶ್
ಉಪಾಧ್ಯಕ್ಷ ಯರ್ರಯ್ಯ, ಹಾಗೂ ನಿರ್ದೇಶಕರು ಸೆರಿದಂತೆ
ಗುರುರೇಣುಕಾರಧ್ಯ, ಸುರೇಶ್ ಗೌಡ ಉಪಸ್ಥಿತರಿದ್ದರು.

 

 

 

ವರದಿ: ಶ್ರೀಕಾಂತ್ ಗುಬ್ಬಿ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

https://youtube.com/@janataa24?si=XsFcych2GMH0O6Gv

https://www.janataa24.com/tumkur-we-do-not-allow-water-to-be-carried/

 

Leave a Reply

Your email address will not be published. Required fields are marked *