Accident: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ-  ಬೈಕ್ ಸವಾರ ಸ್ಥಳದಲ್ಲೇ ಸಾವು.

Janataa24 NEWS DESK 

Accident: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ- ಬಿದ್ದ  ಬೈಕ್ ಸವಾರ ಸ್ಥಳದಲ್ಲೇ ಸಾವು.

Accident: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ- ಬಿದ್ದ  ಬೈಕ್ ಸವಾರ ಸ್ಥಳದಲ್ಲೇ ಸಾವು.
ಶಿವಮೊಗ್ಗ: ಹಗಲು ರಾತ್ರಿ ಎನ್ನದೆ ಬಿಟ್ಟು ಬಿಡದೆ ಸುರಿಯುತ್ತಿರುವ ಮಹಾ ಮಳೆಗೆ ಯುವಕ ಬಲಿಯಾದ ದುರ್ಘಟನೆ ನಡೆದಿದೆ. ಚಲಿಸುತ್ತಿದ್ದ ಬೈಕ್ ಮೇಲೆ ಅಕೇಶಿಯಾ ಮರ ಬಿದ್ದು ಯುವಕ ಸಾವನ್ನಪ್ಪಿದ್ದಾನೆ.

 

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಾದಿಗಲ್ಲು ಗ್ರಾಮ ಪಂಚಾಯತ್​ನ ಮೀನ್ಮನೆಕೊಪ್ಪ ಎಂಬಲ್ಲಿ ಘಟನೆ ನಡೆದಿದೆ. ರಾಮಪ್ಪ (26) ಎಂಬ ಯುವಕ ಸಾವನ್ನಪ್ಪಿದ್ದಾನೆ

ರಾಮಪ್ಪ ಕೋಣಂದೂರಿಗೆ ಕೆಲಸದ ನಿಮಿತ್ತ ತೆರಳಿದ್ದನು. ಕೋಣದೂರಿನಿಂದ ಮನೆಗೆ ಹಿಂದಿರುಗುವಾಗ ಘಟನೆ ನಡೆದಿದೆ. ಈ ವೇಳೆ ಬೈಕ್ ಮೇಲೆ ಅಕೇಶಿಯಾ ಮರಬಿದ್ದು ರಾಮಪ್ಪ ಕೊನೆಯುಸಿರೆಳೆದಿದ್ದಾನೆ.

 

ಚಲಿಸುತ್ತಿರುವಾಗಲೇ ಬೈಕ್ ಮೇಲೆ ಅಕೇಶಿಯಾ ಮರ ಬಿದ್ದಿದೆ. ರಾಮಪ್ಪ ಮನೆಗೆ ಬಾರದ ಹಿನ್ನೆಲೆ ಗಮನಿಸಿದ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

https://youtube.com/@janataa24?si=XsFcych2GMH0O6Gv

https://www.instagram.com/janataa24?igsh=aXM0Ym9zb2Y2YTRn

https://www.janataa24.com/pavagada-nss-students-can-learn-rural-values/

Leave a Reply

Your email address will not be published. Required fields are marked *