Janataa24 NEWS DESK
SSLC ಯಲ್ಲಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಲ್ಯಾಪ್ಟಾಪ್ ವಿತರಿಸಿದ ಶಾಸಕರು.
ಪಾವಗಡ ತಾಲ್ಲೂಕಿನಲ್ಲಿ 2022-23 ಸಾಲಿನ ಹತ್ತನೇ ತರಗತಿಯಲ್ಲಿ ಅತೀ ಹೆಚ್ಚು ಅಂಕಗಳಿಸಿ ರ್‍ಯಾಂಕ್ ಗಳಿಸಿದ ಮೊದಲ ಮೂರು ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯ ವತಿಯಿಂದ ಲ್ಯಾಪ್ ಟಾಪ್ ವಿತರಣಾ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಈ ದಿನ ಹಮ್ಮಿಕೊಳ್ಳಲಾಗಿತ್ತು.
ಮಾನ್ಯ ಜನಪ್ರಿಯ ಶಾಸಕರಾದ ಹೆಚ್ ವಿ ವೆಂಕಟೇಶ್ ರವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಲ್ಯಾಪ್ ಟಾಪ್ ವಿತರಿಸಿ. ಈ ಬಾರಿ ಎಸ್ ಎಸ್ ಎಲ್ ಸಿ ಫಲಿತಾಂಶ ಬಹಳಷ್ಟು ಕುಗ್ಗಿದೆ ಮುಂದಿನ ದಿನಗಳಲ್ಲಿ ಶಿಕ್ಷಕರು ಶ್ರಮಿಸಬೇಕಾಗಿದೆ. ತಾಲೂಕು ಉತ್ತಮ ಫಲಿತಾಂಶ ತರಲು ಕ್ಷಮಿಸಿ ಎಂದರು. ವೈಯಕ್ತಿಕವಾಗಿ ಪ್ರೋತ್ಸಾಹ ಧನ ನೀಡಿ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಜೀವನಕ್ಕೆ ಶುಭ ಕೋರಿದರು..
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಣಮ್ಮ ನವರು,ಬ್ಲಾಕ್ ಕಾಂಗ್ರೆಸ್ ನಗರಾಧ್ಯಕ್ಷರಾದ ಸುದೇಶ್ ಬಾಬು ರವರು,ಮುಖಂಡ ಶಂಕರ್ ರೆಡ್ಡಿ ರವರು,BRC ವೆಂಕಟೇಶ್ ರವರು ಸೇರಿ ಹಲವು ಮುಖಂಡರು, ಸಿಬ್ಬಂದಿಯವರು ಉಪಸ್ಥಿತರಿದ್ದರು..
ವರದಿ: ಇಮ್ರಾನ್ ಉಲ್ಲಾ.ಪಾವಗಡ
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.instagram.com/janataa24?igsh=aXM0Ym9zb2Y2YTRn
https://www.janataa24.com/pavagada-nss-students-can-learn-rural-values/