Janataa24 NEWS DESK
Gubbi: ಎಂ ಎನ್ ಕೋಟೆ ಗ್ರಾ.ಪಂ.ಅಧ್ಯಕ್ಷ ಉಪಾಧ್ಯಕ್ಷರ ಅವಿರೋಧ ಆಯ್ಕೆ.

ಗುಬ್ಬಿ: ತಾಲ್ಲೂಕಿನ ನಿಟ್ಟೂರು ಹೋಬಳಿಯ ಎಂಎನ್ ಕೋಟೆ ಗ್ರಾಮ ಪಂಚಾಯತಿಯ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನರಸಯ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಭಾಗ್ಯಮ್ಮ ಅವಿರೋಧವಾಗಿ ಆಯ್ಕೆಯಾದರೂ.
ನೂತನ ಅಧ್ಯಕ್ಷ ನರಸಯ್ಯ ಮಾತನಾಡಿ ಗ್ರಾಮ ಪಂಚಾಯಿತಿಯ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸುತ್ತೇನೆ ಹಾಗೂ ಕುಡಿಯುವ ನೀರು, ಚರಂಡಿ ಸ್ವಚ್ಚತೆ, ಹಾಗೂ ಗ್ರಾಮ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಸರ್ವ ಸದಸ್ಯರ ಒಮ್ಮತದಿಂದ ಗ್ರಾಮ ಪಂಚಾಯತಿ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ತಿಳಿಸಿದರು.
ತಾಲೂಕಿನಲ್ಲಿ ಮಾದರಿ ಗ್ರಾಮ ಪಂಚಾಯಿತಿ ಯನ್ನಾಗಿ ಮಾಡಲಾಗುವುದು ಎಂದು ತಿಳಿಸಿದರು.
ಉಪಾಧ್ಯಕ್ಷೆ ಭಾಗ್ಯಮ್ಮ ಮಾತನಾಡಿ
ಇತ್ತೀಚಿಗೆ ಡೆಂಗ್ಯೂ ಜ್ವರದಿಂದ ಜನರು ಭಯಬೀತರಾಗಿದ್ದಾರೆ ಡೆಂಗ್ಯೂ ಜ್ವರವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ನರೇಗಾ ಕಾಮಗಾರಿಯೊಂದಿಗೆ ಗ್ರಾಮಗಳ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.
ಈ ವೇಳೆ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಕಲ ವಾದ್ಯಗೋಷ್ಠಿಗಳೊಂದಿಗೆ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಗ್ರಾ ಪಂ,ಸದಸ್ಯರಾದ ಸಿದ್ದರಾಮಯ್ಯ, ಶೈಲಜ, ದಿಲೀಪ, ಸಿದ್ದಗಂಗಮ್ಮ,ಕಾಂತರಾಜು, ಶಶಿಕಲಾ,ಲೋಕೇಶ್, ಸಿದ್ದಗಂಗಯ್ಯ, ಉಮಾ ರವೀಶ್,ಭವ್ಯ,ಕವಿತಾ, ಬಸವರಾಜು,ಶಿವಮೂರ್ತಿ,ರುಕ್ಮಿಣಿ, ಯಶೋಧ,ದಿವ್ಯ, ಮುಖಂಡರಾದ ಹಾರನಹಳ್ಳಿ ಪ್ರಬಣ್ಣ, ಹಾಗೂ ತಾಲೂಕಿನ ದಲಿತ ಮುಖಂಡರು ಮತ್ತು ಗ್ರಾಮಸ್ಥರು ಹಾಜರಿದ್ದರು.
ವರದಿ: ಶ್ರೀಕಾಂತ್ ಗುಬ್ಬಿ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/iasipskas-who-stood-as-the-godfather-of-the/
https://www.janataa24.com/miscreants-uprooted-40-coconut-trees-turuvekere/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.