Pavagada: ಸರ್ಕಾರಿ ಶಾಲೆಗಳಿಗಿಂತ ಖಾಸಗಿ ಶಾಲೆಗಳ ಮಕ್ಕಳಲ್ಲಿ ಶಿಸ್ತು ಉತ್ತಮವಾಗಿದೆ: ಶಾಸಕ ಹೆಚ್.ವಿ.ವೆಂಕಟೇಶ್

Janataa24 NEWS DESK 

 

Pavagada: ಸರ್ಕಾರಿ ಶಾಲೆಗಳಿಗಿಂತ ಖಾಸಗಿ ಶಾಲೆಗಳ ಮಕ್ಕಳಲ್ಲಿ ಶಿಸ್ತು ಉತ್ತಮವಾಗಿದೆ: ಶಾಸಕ ಹೆಚ್.ವಿ.ವೆಂಕಟೇಶ್
Pavagada: ಸರ್ಕಾರಿ ಶಾಲೆಗಳಿಗಿಂತ ಖಾಸಗಿ ಶಾಲೆಗಳ ಮಕ್ಕಳಲ್ಲಿ ಶಿಸ್ತು ಉತ್ತಮವಾಗಿದೆ: ಶಾಸಕ ಹೆಚ್.ವಿ.ವೆಂಕಟೇಶ್

 

 

ಪಾವಗಡ:  ತಾಲ್ಲೂಕು ಆಡಳಿತದ ವತಿಯಿಂದ ಪಟ್ಟಣದ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಏರ್ಪಡಿಸಲಾಗಿದ್ದ 78 ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

 

ಸರ್ಕಾರಿ ಶಾಲೆಯ ಶಿಕ್ಷಕರ ಮಕ್ಕಳು ಖಾಸಗಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿಸುತ್ತಿದ್ದಾರೆ ಅವರುಗಳ ಮಕ್ಕಳು ಸಹ ತಮ್ಮ ಸರ್ಕಾರಿ ಶಾಲೆಗಳಲ್ಲಿ ಸೇರಿಸಿಕೊಂಡು ಪಠ್ಯ ಕ್ರಮಗಳು ಕೈಗೊಳ್ಳುವುದರಿಂದ ಉತ್ತಮ ವಿದ್ಯಾಭ್ಯಾಸ ನೀಡಬಹುದು.

 

ಶಿಕ್ಷಕರು ಸಹ ಉತ್ತಮ ರೀತಿಯಲ್ಲಿ ಬೋಧಿಸಿ, ಮಕ್ಕಳನ್ನು ಸತ್ಪ್ರಜೆ ಗಳನ್ನಾಗಿ ರೂಪಿಸಲು ಮುಂದಾಗಬೇಕು ಎಂದು ಶಾಸಕರು ಕರೆ ನೀಡಿದರು

 

ಗ್ರಾಮೀಣ ಮಟ್ಟದಲ್ಲಿ ಖಾಸಗಿ ಶಾಲೆಗಳು ತಲೆ ಹಚ್ಚುತ್ತಿವೆ ಇದರಿಂದ ಸರ್ಕಾರಿ ಶಾಲೆಗಳ ಮಕ್ಕಳ ಅಂಕಿಯಲ್ಲಿ ಕುಂಟಿತಗೊಳ್ಳುತ್ತಿವೆ.

 

ಈಗಾಗಲೇ ಮುಂದಿನ ದಿನಗಳಲ್ಲಿ ಕೆಪಿಎಸ್ಸಿ ಶಾಲೆಗಳು ಹೋಬಳಿ ಮಟ್ಟದಲ್ಲಿ ಪ್ರಾರಂಭಿಸಲು ಸರ್ಕಾರ ಎಲ್ಲಾ ರೀತಿಯ ಸಿದ್ಧತೆ ಮಾಡುತ್ತಿದ್ದಾರೆ.

 

ಖಾಸಗಿ ಶಾಲೆಗಳಲ್ಲಿ ಅವರಿಗೆ ಇಷ್ಟ ಬಂದಂತೆ ಡೊನೇಷನ್ ಹಾಗೂ ಫ್ರೀಸ್ ಗಳು ವಸೂಲಿ ಮಾಡುತ್ತಿದ್ದಾರೆ ಇದಕ್ಕೆ ಕಡಿವಾಣ ಹಾಕಲು ಸರ್ಕಾರದ ಮಾನದಂಡಗಳು ಬಗ್ಗೆ ಸ್ಥಳೀಯ ಶಿಕ್ಷಣಾಧಿಕಾರಿಗಳು ಗಮನಿಸಬೇಕಾಗಿದೆ ಎಂದರು.

ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಮುಖ್ಯಮಂತ್ರಿ ಸೇರಿದಂತೆ ಎಲ್ಲಾ ಇಲಾಖೆಗಳ ಸಚಿವರೊಂದಿಗೆ ಮಾತುಕತೆ ನಡೆಸಿ ಹೆಚ್ಚಿನ ಅನುದಾನಕ್ಕೆ ಮನವಿ ಮಾಡಲಾಗಿದೆ,

 

ಸರ್ಕಾರಿ ಶಾಲೆಗಳ ಮಕ್ಕಳಿಗೆ ದೈಹಿಕ ಶಿಕ್ಷಕರು ಹೆಚ್ಚಿನ ಶಿಸ್ತನ್ನು ಕಲಿಸಿಕೊಡಬೇಕು, ಖಾಸಗಿ ಶಾಲೆಗಳ ಮಕ್ಕಳಿಗೆ ಹೋಲಿಸಿಕೊಂಡರೆ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಲ್ಲಿ ಕಡಿಮೆ ಶಿಸ್ತು ಕಂಡುಬರುತ್ತಿದೆ, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆದವರು ಉತ್ತಮ ಅಧಿಕಾರಿಗಳಾಗಿ ಆಯ್ಕೆಯಾಗಿ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ, ಇಂದಿನ ವಿದ್ಯಾರ್ಥಿಗಳೂ ಸಹ ಚೆನ್ನಾಗಿ ಓದಿ ಒಳ್ಳೆಯ ಉದ್ಯೋಗ ಪಡೆಯಬಹುದು ಎಂದು ತಿಳಿಸಿದರು.

 

ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆ ಹಾಗೂ ತಾಲೂಕು ಆಡಳಿತ ಹೆಚ್ಚಿನ ಆದ್ಯತೆ ವೇದಿಕೆಗೆ ಮೀಸಲಿಟ್ಟ ಹಿನ್ನೆಲೆಯಲ್ಲಿ ವೇದಿಕೆ ಮುಂದಿದ್ದ ಮಕ್ಕಳಲ್ಲಿ ಗೊಂದಲಕ್ಕೆ ಎಡೆ ಮಾಡಿಕೊಟ್ಟಂಗಿತ್ತು.

 

ಪಟ್ಟಣದಲ್ಲಿರುವ ವಿವಿಧ ಶಾಲೆಗಳ ವಿದ್ಯಾರ್ಥಿಗಳು ನಡೆಸಿದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿದರು.

 

ತಹಸೀಲ್ದಾರ್ ವರದರಾಜು ಪ್ರಾಸ್ತಾವಿಕವಾಗಿ ಮಾತನಾಡಿದರು

 

ಈ ಸಂದರ್ಭದಲ್ಲಿ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

 

ವರದಿ: ಇಮ್ರಾನ್ ಉಲ್ಲಾ ಪಾವಗಡ

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

https://youtube.com/@janataa24?si=XsFcych2GMH0O6Gv

https://www.janataa24.com/iasipskas-who-stood-as-the-godfather-of-the/

https://www.janataa24.com/miscreants-uprooted-40-coconut-trees-turuvekere/

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

Leave a Reply

Your email address will not be published. Required fields are marked *