Mysuru Dasara: ಅರಮನೆ ನಗರಿಗೆ ಬಂದ ಗಜ ಪಡೆಗೆ ಅದ್ದೂರಿ ಸ್ವಾಗತ.

Janataa24 NEWS DESK 

 

Mysuru Dasara: ಅರಮನೆ ನಗರಿಗೆ ಬಂದ ಗಜ-ಪಡೆಗೆ ಅದ್ದೂರಿ ಸ್ವಾಗತ.


ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಗಳನ್ನು ಅರಮನೆಗೆ ಬರಮಾಡಿಕೊಳ್ಳುವುದರ ಮೂಲಕ ವಿದ್ಯುಕ್ತವಾಗಿ ಸ್ವಾಗತ ಕೋರಿದರು.

 

ಮೈಸೂರು ಜಿಲ್ಲಾಡಳಿತ, ಅರಮನೆ ಮಂಡಳಿ ವತಿಯಿಂದ ಗಜಪಡೆಗೆ ಇಂದು ಏರ್ಪಡಿದಸಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ಬೆಳಗ್ಗೆ 10:10 ರಿಂದ 10:30 ರ ಶುಭಗಳಿಗೆಯಲ್ಲಿ ಅರಮನೆಗೆ ಗಜಪಡೆ ಆಗಮನವಾಯಿತು. ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಆನೆಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಅದ್ಧೂರಿ ಸ್ವಾಗತಿಸಲಾಯಿತು.

 

ಈ ಸಂದರ್ಭದಲ್ಲಿ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡ, ಕೃಷ್ಣ ರಾಜ ವಿಧಾನಸಭಾ ಶ್ರೀವತ್ಸಾ, ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ, ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎಂ.ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ ಪಿ.ಶಿವರಾಜು, ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕರಾದ ಎಂ.ಕೆ.ಸವಿತಾ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

https://youtube.com/@janataa24?si=XsFcych2GMH0O6Gv

https://www.janataa24.com/iasipskas-who-stood-as-the-godfather-of-the/

https://www.janataa24.com/miscreants-uprooted-40-coconut-trees-turuvekere/

Mandya: ಪತ್ನಿ ನೇಣಿಗೆ ಶರಣಾದದನ್ನು ಕಂಡು ಕೆರೆಗೆ ಹಾರಿ ಪ್ರಾಣ ಬಿಟ್ಟ ಪತಿ.

Leave a Reply

Your email address will not be published. Required fields are marked *