Document

Murudeshwara: ಮುರುಡೇಶ್ವರ ಸಮುದ್ರದಲ್ಲಿ ಈಜಲು ಹೋಗಿ ನಾಲ್ವರು ವಿದ್ಯಾರ್ಥಿನಿಯರು ಸಾವು.

Janataa24 NEWS DESK 

Murudeshwara: ಮುರುಡೇಶ್ವರ ಸಮುದ್ರದಲ್ಲಿ ಈಜಲು ಹೋಗಿ ನಾಲ್ವರು ವಿದ್ಯಾರ್ಥಿನಿಯರು ಸಾವು.

Murudeshwara: ಮುರುಡೇಶ್ವರ ಸಮುದ್ರದಲ್ಲಿ ಈಜಲು ಹೋಗಿ ನಾಲ್ವರು ವಿದ್ಯಾರ್ಥಿನಿಯರು ಸಾವು.

ಮುರುಡೇಶ್ವರ: ಕಡಲ ತೀರದಲ್ಲಿ  ಘೋರ ಅನಾಹುತವೊಂದು ಸಂಭವಿಸಿದೆ. ಪ್ರವಾಸಕ್ಕೆ ಹೋಗಿದ್ದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯರು ದುರಂತಕ್ಕೆ ತುತ್ತಾಗಿದ್ದಾರೆ. ಶಿಕ್ಷಕರು, ಸಹಪಾಠಿಗಳ ಜೊತೆ ಪ್ರವಾಸಕ್ಕೆ ಹೋದವರು ಸಮುದ್ರದ ಅಲೆಗೆ ಸಿಲುಕಿ ನಾಪತ್ತೆಯಾಗಿದ್ದರು. ನಿನ್ನೆ ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿನಿಯರ ಶವ ಇಂದು ತೇಲಿ ಬಂದಿದೆ.

 

ಕೋಲಾರದ ಜಿಲ್ಲೆಯ ಮುಳುಬಾಗಿಲು ತಾಲ್ಲೂಕು ಕೊತ್ತೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವತಿಯಿಂದ ಶಾಲಾ ಪ್ರವಾಸ ಆಯೋಜನೆ ಮಾಡಲಾಗಿತ್ತು. ವಿದ್ಯಾರ್ಥಿಗಳು & ಶಿಕ್ಷಕರು ಸೇರಿ 57 ಮಂದಿ ಪ್ರವಾಸಕ್ಕೆ ಮುರುಡೇಶ್ವರಕ್ಕೆ ಬಂದಿದ್ದರು.

 

ನಿನ್ನೆ ಮುರುಡೇಶ್ವರ ಬೀಚ್​ನಲ್ಲಿ ಆಟವಾಡುವಾಗ 7 ಮಂದಿ ನಾಪತ್ತೆಯಾಗಿದ್ದರು. ಸಮುದ್ರದ ಅಲೆಗಳ ಹೊಡೆತಕ್ಕೆ ಕೊಚ್ಚಿ ಹೋಗಿದ್ದ 7 ವಿದ್ಯಾರ್ಥಿನಿಯರ ಪೈಕಿ ನಿನ್ನೆಯೇ ಮೂವರನ್ನ ರಕ್ಷಣೆ ಮಾಡಲಾಗಿತ್ತು. ನಿನ್ನೆ ಸಂಜೆ ಓರ್ವ ವಿದ್ಯಾರ್ಥಿನಿ ಮೃತದೇಹವನ್ನು ಲೈಫ್ ಗಾರ್ಡ್ ಸಿಬ್ಬಂದಿ ಪತ್ತೆ ಹಚ್ಚಿದ್ದರು. ಇಂದು ಉಳಿದ ಮೂವರ ಮೃತದೇಹ ಬೇರೆ, ಬೇರೆ ಭಾಗದಲ್ಲಿ ಪತ್ತೆಯಾಗಿದೆ.

 

ದೀಕ್ಷಾ (15), ಲಾವಣ್ಯ (15), ವಂದನಾ (15), ಶ್ರಾವಂತಿ (15) ಮೃತ ಶಾಲಾ ವಿದ್ಯಾರ್ಥಿನಿಯರು. ಮೃತದೇಹಗಳನ್ನು ಆಂಬ್ಯುಲೆನ್ಸ್ ಮೂಲಕ ಭಟ್ಕಳ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಪೋಸ್ಟ್ ಮಾರ್ಟಮ್ ಮಾಡಿದ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತಿದೆ.

ಮುರುಡೇಶ್ವರದಲ್ಲಿ ಸಮುದ್ರ ಪಾಲಾಗಿದ್ದ ನಾಲ್ವರು ವಿದ್ಯಾರ್ಥಿನಿಯರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಈ ಕುರಿತು ಸಿಎಂ ತಮ್ಮ ಎಕ್ಸ್ (X) ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯರಾದ ದೀಕ್ಷಾ, ಲಾವಣ್ಯ, ವಂದನಾ ಹಾಗೂ ಶ್ರಾವಂತಿ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿ, ಸಂತಾಪ ಸೂಚಿಸಿದ್ದಾರೆ.

 

 

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

https://youtube.com/@janataa24?si=XsFcych2GMH0O6Gv

https://www.janataa24.com/iasipskas-who-stood-as-the-godfather-of-the/

https://www.janataa24.com/miscreants-uprooted-40-coconut-trees-turuvekere/

Mandya: ಪತ್ನಿ ನೇಣಿಗೆ ಶರಣಾದದನ್ನು ಕಂಡು ಕೆರೆಗೆ ಹಾರಿ ಪ್ರಾಣ ಬಿಟ್ಟ ಪತಿ.

Document

Leave a Reply

Your email address will not be published. Required fields are marked *