Janataa24 NEWS DESK
Turuvekere: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಎಸ್ ಬಿ ಜಿ, ಪಿ ಯು ಕಾಲೇಜಿನಲ್ಲಿ ಹೆಣ್ಣುಮಕ್ಕಳೇ ಮೇಲುಗೈ.

ತುರುವೇಕೆರೆ: ತಾಲೂಕಿನ ಮಾಯಸಂದ್ರ ಟಿಬಿ ಕ್ರಾಸ್ ನಲ್ಲಿರುವ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಾಖ ಮಠದ ಎಸ್ ಬಿ ಜಿ ಪದವಿಪೂರ್ವ ಕಾಲೇಜು 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಶೇಕಡಾ 96.16 ರಷ್ಟು ಮತ್ತು ವಿಜ್ಞಾನ ವಿಭಾಗದಲ್ಲಿ ಒಟ್ಟು ಶೇಕಡಾ 86.4 ರಷ್ಟು ಫಲಿತಾಂಶವನ್ನು ಪಡೆದುಕೊಂಡಿದೆ. ವಾಣಿಜ್ಯ ವಿಭಾಗದಲ್ಲಿ .ಜಾನ್ಹವಿ ಎಮ್ ಬಿ 600 ಕ್ಕೆ 582 ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಹಾಗೂ ತಾಲ್ಲೂಕಿಗೆ ದ್ವೀತಿಯ ಸ್ಥಾನ ಪಡೆದಿದ್ದಾರೆ, ಭವ್ಯ ಡಿ ಜಿ, 600ಕ್ಕೆ 580 ಅಂಕಗಳನ್ನು ಪಡೆದು ಕಾಲೇಜಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಅದೇರೀತಿ ವಿಜ್ಞಾನ ವಿಭಾಗದಲ್ಲಿ .ಭವ್ಯ ಸಿ ಆರ್, 600ಕ್ಕೆ 571 ಅಂಕಗಳನ್ನು ಮತ್ತು ಭಾಗ್ಯಲಕ್ಷ್ಮಿ ವೈ ಎಲ್, 600ಕ್ಕೆ 564 ಅಂಕಗಳನ್ನು ಪಡೆದು ಕ್ರಮವಾಗಿ ಕಾಲೇಜಿನಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನಗಳನ್ನು ಪಡೆದಿದ್ದಾರೆ. ಕಾಲೇಜಿನ ಕೀರ್ತಿ ಪತಾಕೆ ಹಾರಿಸಿರುವ ವಿದ್ಯಾರ್ಥಿಗಳಿಗೆ ಶ್ರೀ ಆದಿಚುಂಚನಗಿರಿ ಮಠದ ಪ್ರಧಾನಕಾರ್ಯದರ್ಶಿಗಳಾದ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು, ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಹಾಗೂ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/iasipskas-who-stood-as-the-godfather-of-the/
https://www.janataa24.com/miscreants-uprooted-40-coconut-trees-turuvekere/
Mandya: ಪತ್ನಿ ನೇಣಿಗೆ ಶರಣಾದದನ್ನು ಕಂಡು ಕೆರೆಗೆ ಹಾರಿ ಪ್ರಾಣ ಬಿಟ್ಟ ಪತಿ.