Janataa24 NEWS DESK
Madhugiri: ಬ್ರಹ್ಮದೇವರಹಳ್ಳಿ ಗ್ರಾಮದಲ್ಲಿ ಅದ್ದೂರಿ ಅಂಬೇಡ್ಕರ್ ರವರ 134ನೇ ಜಯಂತೋತ್ಸವ.
ಮಧುಗಿರಿ: ತಾಲ್ಲೂಕಿನ ಮಿಡಿಗೇಶಿ ಹೋಬಳಿ ಚಿನ್ನೇನಹಳ್ಳಿ ಪಂಚಾಯಿತಿ ವ್ಯಾಪ್ತಿಯ ಬ್ರಹ್ಮದೇವರಹಳ್ಳಿ ಗ್ರಾಮದಲ್ಲಿ ಅದ್ದೂರಿ ಅಂಬೇಡ್ಕರ್ ಜಯಂತಿ ಆಚರಣೆ ಮಾಡಲಾಯಿತು.
ಬ್ರಹ್ಮದೇವರಹಳ್ಳಿ ಗ್ರಾಮದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ ಹಿನ್ನಲೆ ಗ್ರಾಮದ ಕಾಲೋನಿಯ ಮುಖ್ಯ ರಸ್ತೆಯಲ್ಲಿ ನೀಲಿ ಬಣ್ಣದ ತೋರಣದಿಂದ ರಸ್ತೆ ಸಿಂಗರಿಸಿ ಬೃಹತ್ತಾದ ಅಂಬೇಡ್ಕರ್ ಭಾವಚಿತ್ರವಿರುವ ಪ್ಲೇಸ್ಕ್ ಗೆ ಪುಷ್ಪಾರ್ಚನೆ ಮಾಡಿ ಮಾಲೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಇದೇ ದಿನ ಗ್ರಾಮದಲ್ಲಿ ಪ್ರತಿ ವರ್ಷ ನಡೆಯುವ ಕೊಲ್ಲಾಪುರಿ ಮಹಾಲಕ್ಷ್ಮಿ ಜಾತ್ರ ಮಹೋತ್ಸವದ ಹಿನ್ನೆಲೆ ಆರತಿ ಉತ್ಸವ ಏರ್ಪಡಿಸಲಾಗಿತ್ತು. ಆರತಿ ಮೆರವಣಿಗೆಯಲ್ಲಿ ನೀಲಿ ರಸ್ತೆಯುದ್ದಕ್ಕೂ ತಮಟೆ ಸದ್ದಿಗೆ ಹೆಜ್ಜೆ ಹಾಕುವ ಮೂಲಕ ನೀಲಿ ಬಾವುಟಗಳನ್ನು ಹಾರಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಎಲ್ಲಾ ದಲಿತ ಮುಖಂಡರು ಯುವಕರು ಗ್ರಾ.ಪಂ ಸದಸ್ಯರು,ತಮಟೆ ಕಲಾವಿದರು ಹಾಗೂ ಊರಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.
ವರದಿ: ಹರೀಶ್ ಬಾಬು ಮಧುಗಿರಿ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/iasipskas-who-stood-as-the-godfather-of-the/
https://www.janataa24.com/miscreants-uprooted-40-coconut-trees-turuvekere/
Mandya: ಪತ್ನಿ ನೇಣಿಗೆ ಶರಣಾದದನ್ನು ಕಂಡು ಕೆರೆಗೆ ಹಾರಿ ಪ್ರಾಣ ಬಿಟ್ಟ ಪತಿ.