Document

Gubbi: ಮಾರಶೆಟ್ಟಿಹಳ್ಳಿ ಗ್ರಾ. ಪಂ. ಅಧ್ಯಕ್ಷರಾಗಿ ಗಂಗಮ್ಮನಾಗೇಶ್ ಅವಿರೋಧ ಆಯ್ಕೆ.

Janataa24 NEWS DESK

 

Gubbi: ಮಾರಶೆಟ್ಟಿಹಳ್ಳಿ ಗ್ರಾ. ಪಂ. ಅಧ್ಯಕ್ಷರಾಗಿ ಗಂಗಮ್ಮನಾಗೇಶ್ ಅವಿರೋಧ ಆಯ್ಕೆ.
IMG 20250514 WA0008

 

ಗುಬ್ಬಿ : ತಾಲ್ಲೂಕಿನ ಕಡಬಾ ಹೋಬಳಿ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಗಂಗಮ್ಮ ನಾಗೇಶ್ ಒಬ್ಬರಿ ನಾಮಪತ್ರ ಸಲ್ಲಿಸಿದ್ದು ಸರ್ವ ಸದಸ್ಯರ ಬೆಂಬಲದಿಂದ ಅವಿರೋಧವಾಗಿ ಆಯ್ಕೆಯಾದರು.

 

ನೂತನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಂಗಮ್ಮ ನಾಗೇಶ್ ಮಾತನಾಡಿ ಸರ್ವ ಸದಸ್ಯರ ಸಹಕಾರದಿಂದ ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ಎಲ್ಲಾ ಸದಸ್ಯರ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಹಳ್ಳಿಗಳಿಗೆ ಕುಡಿಯುವ ನೀರು, ಚರಂಡಿ ಸ್ವಚ್ಛತೆ, ರಸ್ತೆ ನಿರ್ಮಾಣ, ಬೀದಿದೀಪ ಸೇರಿದಂತೆ ಗ್ರಾಮ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತೇನೆ. ಇನ್ನೂ ಬೇಸಿಗೆ ಇರುವುದರಿಂದ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುವುದು.

 

ಮನರೇಗಾ(MGNREGS) ಕಾಮಗಾರಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ತಾಲ್ಲೂಕಿನಲ್ಲಿ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ಮಾಡುತ್ತೇನೆ ಎಂದು ತಿಳಿಸಿದರು .

 

ಉಪಾಧ್ಯಕ್ಷೆ ಅನುಸೂಯಾದೇವಿ ಮಾತನಾಡಿ ನಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಿಲ್ಲ ಸರ್ವ ಸದಸ್ಯರ ಸಹಕಾರದಿಂದ ಅಧಿಕಾರಇರುವ ಕೆಲವು ತಿಂಗಳಲ್ಲಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತಿವೆ ಎಂದು ತಿಳಿಸಿದರು.

 

ಇದೇ ಸಂದರ್ಭದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಚುನಾವಣಾ ಅಧಿಕಾರಿಯಾಗಿ ಇಓ ಶಿವಪ್ರಕಾಶ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.

 

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ವಿಜಯ ಗಂಗಾಧರ್, ಸಿದ್ದರಾಮೇಗೌಡ, ಶಿವಸ್ವಾಮಿ ಎ,ಬಿ. ರಾಧಾ ನಟರಾಜು, ಚಂದ್ರಯ್ಯ, ನಯನ ಉಮೇಶ್, ಮಮತಾ, ತಿಮ್ಮಯ್ಯ, ಮೋಹನ್ ಕುಮಾರ್, ಬಸವರಾಜು, ವನಿತಾ, ಪಿಡಿಒ ತನುಜಾ ಬೆನಕಟ್ಟೆ.

ಮುಖಂಡರಾದ ಕುಂದರನಹಳ್ಳಿ ಸಿದ್ದಲಿಂಗಯ್ಯ, ಶಶಿಧರ್, ಕುಂದರನಹಳ್ಳಿ ನಟರಾಜು , ಶಿವಶಂಕರ್ ಬಾಬು, ಪಣೀಂದ್ರ ಮುನಿ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

 

ವರದಿ: ಶ್ರೀಕಾಂತ್ ಗುಬ್ಬಿ.

 

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *