Janataa24 NEWS DESK
Bengaluru: ಡ್ರಗ್ಸ್ ವಿರುದ್ಧ ಕಾರ್ಯಾಚರಣೆ 23.84 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡ ಬೆಂಗಳೂರು ಪೊಲೀಸರು.
ಬೆಂಗಳೂರು: ಪರಪ್ಪನ ಅಗ್ರಹಾರ, ಕೆ.ಜಿ.ನಗರ ಹಾಗೂ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಡ್ರಗ್ಸ್ ವಿರುದ್ಧದ ಕಾರ್ಯಾಚರಣೆಯಲ್ಲಿ ಇಬ್ಬರು ವಿದೇಶಿ ಪೆಡ್ಲರ್ಗಳು ಸೇರಿ ಆರು ಮಂದಿಯನ್ನು ಬಂಧಿಸಿದ್ದಾರೆ.
ಬಂಧಿತರಿಂದ ವಿವಿಧ ಮಾದರಿಯ ₹23.84 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಸೀಮಾಂತ್ಕುಮಾರ್ ಸಿಂಗ್ ಅವರು ಪತ್ರಿಕಾಗೋಷ್ಠಿಯಲ್ಲಿ ಬುಧವಾರ ತಿಳಿಸಿದರು.
ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಸಿಬ್ಬಂದಿ ದಾಳಿ ನಡೆಸಿ, ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ತನ್ನ ಸಂಬಂಧಿಯ ನೆರವು ಪಡೆದು ಡ್ರಗ್ಸ್ ಮಾರಾಟ ಮಾಡುತ್ತಿದ್ದ. ಬಂಧಿತನಿಂದ ಎಂಡಿಎಂಎ ಕ್ರಿಸ್ಟಲ್ ಹಾಗೂ ಅಫೀಮು ಜಪ್ತಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಕೆ.ಜಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿದೇಶಿ ಅಂಚೆ ಕಚೇರಿಯಲ್ಲಿ ಅನುಮಾನಾಸ್ಪದ ಬಾಕ್ಸ್ಗಳು ಬಂದಿರುವ ಮಾಹಿತಿ ಬಂದಿತ್ತು. ಶ್ವಾನದಳದ ಜತೆಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಬಾಕ್ಸ್ಗಳಲ್ಲಿ ₹4 ಕೋಟಿ ಮೊತ್ತದ ಹೈಡ್ರೊ ಗಾಂಜಾ ಪತ್ತೆಯಾಗಿದೆ. ಸಾಕುಪ್ರಾಣಿಗಳಿಗೆ ನೀಡುವ ಆಹಾರವೆಂದು ವಿದೇಶದಿಂದ ಡ್ರಗ್ಸ್ ಅನ್ನು ಆರೋಪಿಗಳು ತರಿಸಿಕೊಳ್ಳುತ್ತಿದ್ದರು. ಈ ಪ್ರಕರಣದಲ್ಲಿ ಆರೋಪಿಗಳ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ಮತ್ತೊಂದು ಪ್ರಕರಣದಲ್ಲಿ ಕೆ.ಜಿ ನಗರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ, ನಜೀರ್ ಮೊಹಮ್ಮದ್ ಹಾಗೂ ರಶೀದ್ ಎಂಬುವರನ್ನು ಬಂಧಿಸಿದ್ದಾರೆ.
ಆರೋಪಿಗಳು ಥಾಯ್ಲೆಂಡ್ ಹಾಗೂ ಜರ್ಮನಿಯಿಂದ ನಕಲಿ ಹೆಸರಿನಲ್ಲಿ ಕ್ರಿಪ್ಟೊ ಕರೆನ್ಸಿ ಮೂಲಕ ಹೈಡ್ರೊ ಗಾಂಜಾ ಖರೀದಿಸಿ ನಗರದಲ್ಲಿ ಮಾರಾಟ ಮಾಡುತ್ತಿದ್ದರು. ಡ್ರಗ್ಸ್ ಆರ್ಡರ್ ಮಾಡಿದ್ದ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಕೊತ್ತನೂರು ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಡ್ರಗ್ಸ್ ಪೆಡ್ಲರ್ಗಳಾದ ಸುಡಾನ್ ದೇಶದ ಜಾರ್ಗುವಾನ್ ಸಲ್ಲಾಹೆಲ್ದಿನ್ ಅಬುರೈ ಇಲಾಸನ್ ಹಾಗೂ ಮಾರ್ವ ಇಸಮ್ ಒಸ್ಮಾನ್ ವೀಡಾ ಎಂಬ ಮಹಿಳಾ ಪೆಡ್ಲರ್ಗಳನ್ನು ಬಂಧಿಸಲಾಗಿದೆ.
ಬಾತ್ಮೀದಾರರು ನೀಡಿದ ಖಚಿತ ಮಾಹಿತಿ ಆಧರಿಸಿ ಎನ್ಜಿ ಗೊಲ್ಲಹಳ್ಳಿಯ ಅಪಾರ್ಟ್ಮೆಂಟ್ನಲ್ಲಿ ನೆಲಸಿರುವ ಸುಡಾನ್ ದೇಶದ ಮಹಿಳೆಯರಿಬ್ಬರು ಡ್ರಗ್ಸ್ ಪೆಡ್ಲಿಂಗ್ ನಡೆಸುತ್ತಿರುವ ಮಾಹಿತಿ ಬಂದಿತ್ತು. ಇದನ್ನು ಆಧರಿಸಿ ಕಾರ್ಯಾಚರಣೆ ನಡೆಸಿದಾಗ ಫ್ಲ್ಯಾಟ್ನಲ್ಲಿ 4 ಕೆ.ಜಿ. ಎಂಡಿಎಂಎ ಕ್ರಿಸ್ಟಲ್ ಪತ್ತೆಯಾಗಿತ್ತು. ಅದನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.
ಬೆಂಗಳೂರು ನಗರ ಪೊಲೀಸ್ನ ಸಿಸಿಬಿ, ದಕ್ಷಿಣ ವಿಭಾಗ ಮತ್ತು ಈಶಾನ್ಯ ವಿಭಾಗದ ವಿಭಾಗಗಳು, ಶ್ವಾನ ದಳ ಮತ್ತು SOCO ತಂಡಗಳ ಸಂಯೋಜಿತ ಪ್ರಯತ್ನದಿಂದ ನಗರದಾದ್ಯಂತ ಹಲವು ಸ್ಥಳಗಳಲ್ಲಿ ದಾಳಿಗಳು ನಡೆದವು.
ಈ ಕಾರ್ಯಾಚರಣೆಯನ್ನು ಡಿಸಿಪಿ ಕಾಸಿಂ ರಾಜಾ ನೇತೃತ್ವದಲ್ಲಿ, ಪೊಲೀಸ್ ಆಯುಕ್ತರಾದ ಶ್ರೀ ಸೀಮಂತ್ ಕುಮಾರ್ ಸಿಂಗ್, ಐಪಿಎಸ್ ಮತ್ತು ಜಂಟಿ ಪೊಲೀಸ್ ಆಯುಕ್ತ (ಕ್ರೈಂ) ಶ್ರೀ ಅಜಯ್ ಹಿಲೋರಿ, ಐಪಿಎಸ್ ಅವರ ಸೂಚನೆಯಂತೆ ನಡೆಸಲಾಯಿತು.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.