Document

CN Halli: ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಬೇಜವಾಬ್ದಾರಿಯಿಂದ ರೋಗಿಗಳ ಪರದಾಟ

JANATAA24 NEWS DESK 

 

CN Halli: ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಬೇಜವಾಬ್ದಾರಿಯಿಂದ ರೋಗಿಗಳ ಪರದಾಟ

 

CN Halli

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಬೇಜವಾಬ್ದಾರಿ ಹಾಜರಿಯಿಂದ ರೋಗಿಗಳು ತೀವ್ರ ತೊಂದರೆ ಅನುಭವಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಸುಮಾರು ಎರಡು ಗಂಟೆಗಳ ಕಾಲ ವೈದ್ಯರು ಆಸ್ಪತ್ರೆಗೆ ಹಾಜರಾಗದೇ ಇರುವುದರಿಂದ ದೂರದ ಊರುಗಳಿಂದ ಬಂದ ವಯೋವೃದ್ಧರು, ಮಹಿಳೆಯರು ಮತ್ತು ಮಕ್ಕಳು ಚಿಕಿತ್ಸೆಗಾಗಿ ಕಾಯುತ್ತ ಪರದಾಡಿದ್ದಾರೆ.

ಸಾರ್ವಜನಿಕರು ಹೇಳುವಂತೆ, ವೈದ್ಯರು ಕಾಫಿ/ಟಿ ವಿರಾಮದ ಹೆಸರಿನಲ್ಲಿ ಗಂಟೆಗಳ ಕಾಲ ಆಸ್ಪತ್ರೆಗೆ ಹಾಜರಾಗದೇ, ತಮ್ಮ ಖಾಸಗಿ ಕ್ಲಿನಿಕ್‌ಗಳಲ್ಲಿ ಸೇವೆ ನೀಡುತ್ತಿರುವುದು ಸಾಮಾನ್ಯವಾಗಿದೆ. ವಿಶೇಷವಾಗಿ AMO ನಟರಾಜು ಅವರು ಖಾಸಗಿ “ಮಾರುತಿ ಕ್ಲಿನಿಕ್” ನಲ್ಲಿ ಹೆಚ್ಚು ಸಮಯ ಕಳೆಯುತಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಹೆಸರುಮಾತ್ರಕ್ಕೆ ಮಾತ್ರ ಸೇವೆ ಸಲ್ಲಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸರ್ಕಾರಿ ಆಸ್ಪತ್ರೆ ಎಂದರೆ ಬಡಜನರ ಜೀವಾಳ. ಆದರೆ ಇಲ್ಲಿ ಕರ್ತವ್ಯ ನಿರ್ವಹಣೆಯಲ್ಲಿನ ನಿರ್ಲಕ್ಷ್ಯದಿಂದ ಸಾರ್ವಜನಿಕರ ಆರೋಗ್ಯವೇ ಅಪಾಯಕ್ಕೊಳಗಾಗುತ್ತಿದೆ. ಈ ಹಿಂದೆ ಕೂಡ ಇದೇ ಆಸ್ಪತ್ರೆಯ ವಿರುದ್ಧ ಅನೇಕ ದೂರುಗಳು ದಾಖಲಾಗಿದ್ದು, ಲೋಕಾಯುಕ್ತರು ಭೇಟಿ ನೀಡಿದಾಗಲೂ ವೈದ್ಯರು ಹಾಗೂ ಸಿಬ್ಬಂದಿಗಳ ಕರ್ತವ್ಯ ಲೋಪದ ಬಗ್ಗೆ ಉಲ್ಲೇಖಿಸಿದ್ದರು. ಆದರೂ ಯಾವುದೇ ಬದಲಾವಣೆ ಕಂಡುಬಂದಿಲ್ಲವೆಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂತೋಷ ಎಂಬ ರೋಗಿಯ ಸಂಬಂಧಿಕರು ತಮ್ಮ ಹೆಂಡತಿಗೆ ಚಿಕಿತ್ಸೆ ಕೊಡಿಸಲು ಗಂಟೆಗಳ ಕಾಲ ಕಾಯಬೇಕಾಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದರು. ದಾಸಿಹಳ್ಳಿಯಿಂದ ಬಂದ ವಯೋವೃದ್ಧರೊಬ್ಬರು ಕೆಮ್ಮು, ಜ್ವರ, ಮೈಕೈ ನೋವಿನಿಂದ ಬಳಲುತ್ತಿದ್ದರೂ ವೈದ್ಯರಿಲ್ಲದೆ ಚಿಕಿತ್ಸೆ ಪಡೆಯಲು ಸಾಧ್ಯವಾಗದೆ ಕಾಯಬೇಕಾದ ಪರಿಸ್ಥಿತಿ ಎದುರಾಯಿತು.

ಲೋಕೇಶ್ ಎಂಬ ಪೋಷಕರು ತಮ್ಮ ಮಗ ತೀವ್ರ ಜ್ವರದಿಂದ ಬಳಲುತ್ತಿದ್ದಾಗ ಆಸ್ಪತ್ರೆಗೆ ಕರೆತಂದರೂ ಅರ್ಧ ಗಂಟೆಗೂ ಹೆಚ್ಚು ಸಮಯ ವೈದ್ಯರು ಲಭ್ಯವಾಗಲಿಲ್ಲ ಎಂದು ನೋವು ವ್ಯಕ್ತಪಡಿಸಿದರು. “ಪ್ರತಿದಿನವೂ ಇದೇ ಪರಿಸ್ಥಿತಿ” ಎಂದು ಅವರು ಹೇಳಿದರು.

ಸರ್ಕಾರ ಉಚಿತ ಆರೋಗ್ಯ ಸೇವೆಗಳನ್ನು ಸಾರ್ವಜನಿಕರಿಗೆ ತಲುಪಿಸಲು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದರೂ, ಇಂತಹ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅವುಗಳ ಪ್ರಯೋಜನ ಜನರಿಗೆ ಸಿಗುತ್ತಿಲ್ಲ ಎಂಬುದು ಸ್ಪಷ್ಟವಾಗುತ್ತಿದೆ.

ಕೂಡಲೇ ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ತಕ್ಷಣವೇ ಈ ಪ್ರಕರಣವನ್ನು ಪರಿಶೀಲಿಸಿ, ಕರ್ತವ್ಯ ಲೋಪ ಮಾಡುತ್ತಿರುವ ವೈದ್ಯರು ಮತ್ತು ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಆಸ್ಪತ್ರೆಯಲ್ಲಿ ನಿಯಮಿತವಾಗಿ ವೈದ್ಯರು ಲಭ್ಯವಿರುವಂತೆ ಕ್ರಮ ಕೈಗೊಳ್ಳಬೇಕಾಗಿದೆ.

ವರದಿ: ದೇವರಾಜ್ ಚಿಕ್ಕನಾಯಕನಹಳ್ಳಿ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *