Document

Pavagada: ಮಾಜಿ ಸಚಿವ ವೆಂಕಟರಮಣಪ್ಪ ಹೃದಯಾಘಾತದಿಂದ ನಿಧನ-ಹಿರಿಯ ರಾಜಕೀಯ ಕೊಂಡಿ ಕಳಚಿ ಹೋಗಿದೆ.

JANATAA24 NEWS DESK 

 

Pavagada: ಮಾಜಿ ಸಚಿವ ವೆಂಕಟರಮಣಪ್ಪ ಹೃದಯಾಘಾತದಿಂದ ನಿಧನ-ಹಿರಿಯ ರಾಜಕೀಯ ಕೊಂಡಿ ಕಳಚಿ ಹೋಗಿದೆ.

 

Pavagada
ತಾಲೂಕಿನಲ್ಲಿ ಎಲ್ಲರಿಗೂ ಪೆದ್ದಯ್ಯ (ದೊಡ್ಡಪ್ಪ)ಎಂಬುದಾಗಿ ಚಿರಪರಿಚಿತವಾಗಿದ್ದರು.

 

ಪಾವಗಡ: ತಾಲೂಕಿನ ಹನುಮಂತನಹಳ್ಳಿ ಗ್ರಾಮದ ಹಿರಿಯ ರಾಜಕೀಯ ನಾಯಕ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ (80) ಹೃದಯಾಘಾತದಿಂದ ನಿಧನರಾಗಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಹಲವು ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದ ಅವರು, ಸರಳತೆ ಮತ್ತು ಜನಸೇವೆಯ ಮೂಲಕ ವಿಶೇಷ ಗುರುತಿಸಿಕೊಂಡಿದ್ದರು.

ವೆಂಕಟರಮಣಪ್ಪ ಅವರು ಪತ್ನಿ ಶಾರದಮ್ಮರನ್ನು ಆರು ವರ್ಷಗಳ ಹಿಂದೆ ಅನಾರೋಗ್ಯದಿಂದ ಕಳೆದುಕೊಂಡಿದ್ದರು. ಅವರಿಗೆ ಇಬ್ಬರು ಗಂಡು ಮಕ್ಕಳು ಹಾಗೂ ಒಬ್ಬ ಪುತ್ರಿ ಇದ್ದಾರೆ. ಹಿರಿಯ ಪುತ್ರ ಕುಮಾರಸ್ವಾಮಿ ಕುಟುಂಬದ ವಿದ್ಯಾಸಂಸ್ಥೆಗಳ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದು, ಕಿರಿಯ ಪುತ್ರ ಹೆಚ್.ವಿ. ವೆಂಕಟೇಶ್ ಪ್ರಸ್ತುತ ಪಾವಗಡ ಕ್ಷೇತ್ರದ ಶಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ರಾಜಕೀಯ ಜೀವನವನ್ನು ಗ್ರಾಮ ಮಟ್ಟದಿಂದ ಆರಂಭಿಸಿದ್ದ ವೆಂಕಟರಮಣಪ್ಪ ಅವರು 1980-81ರಲ್ಲಿ ಪೊನ್ನಸಮುದ್ರ ಗ್ರಾಮದಿಂದ ಮಂಡಲ್ ಪಂಚಾಯತ್ ಸದಸ್ಯರಾಗಿ ಮೊದಲ ಬಾರಿಗೆ ಆಯ್ಕೆಯಾಗಿದ್ದರು. ಬಳಿಕ ಅವರ ರಾಜಕೀಯ ಪಯಣ ನಿರಂತರವಾಗಿ ಬೆಳೆಯುತ್ತಾ, ವಿರೇಂದ್ರ ಪಾಟೀಲ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 1989ರಲ್ಲಿ ಕಾಂಗ್ರೆಸ್ ಪಕ್ಷದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದರು.

ನಂತರ ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 1999ರಲ್ಲಿ ಮತ್ತೊಮ್ಮೆ ಶಾಸಕರಾಗಿ ಗೆಲುವು ಸಾಧಿಸಿದರು. 2008ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ ಅವರು, ಆಗಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಂಪುಟದಲ್ಲಿ ಸಣ್ಣ ಕೈಗಾರಿಕೆ ಹಾಗೂ ರೇಷ್ಮೆ ಸಚಿವರಾಗಿ ಕಾರ್ಯನಿರ್ವಹಿಸಿದರು.

2018ರಲ್ಲಿ ಕಾಂಗ್ರೆಸ್ ಪಕ್ಷದಿಂದ ಮತ್ತೆ ಶಾಸಕರಾಗಿ ಆಯ್ಕೆಯಾದ ವೆಂಕಟರಮಣಪ್ಪ ಅವರು, ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದಲ್ಲಿ ಸುಮಾರು 14 ತಿಂಗಳ ಕಾಲ ಕಾರ್ಮಿಕ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಗ್ರಾಮೀಣ ರಾಜಕೀಯದಿಂದ ಸಚಿವ ಸ್ಥಾನವರೆಗೆ ಏರಿದ ಅವರ ಬದುಕು ಅನೇಕ ಯುವ ರಾಜಕೀಯ ನಾಯಕರಿಗೆ ಮಾದರಿಯಾಗಿತ್ತು. ಅವರ ನಿಧನದಿಂದ ಪಾವಗಡ ಭಾಗವು ಅನುಭವಸಂಪನ್ನ ನಾಯಕನನ್ನು ಕಳೆದುಕೊಂಡಂತಾಗಿದೆ.

ಮಾಜಿ ಸಚಿವರ ಪಾರ್ಥಿವ ಶರೀರವನ್ನು ಪಟ್ಟಣದ ಗುರುಭವನ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು ಹಾಗೂ ವಿವಿಧ ರಾಜಕೀಯ ಮುಖಂಡರು, ಸಾರ್ವಜನಿಕರು ಹಾಗೂ ಅಭಿಮಾನಿಗಳು ಅಂತಿಮ ನಮನ ಸಲ್ಲಿಸಲು ಎಲ್ಲಾ ರೀತಿಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಿಪಿಐ ಕೆ.ಸುರೇಶ್ ಮಾದ್ಯಮ ತಿಳಿಸಿದ್ದಾರೆ.

 

ವರದಿ: ಇಮ್ರಾನ್ ಉಲ್ಲಾ .ಪಾವಗಡ

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *