JANATAA24 NEWS DESK
Lokayukta: ವಿದ್ಯಾರ್ಥಿನಿ ಪೋಷಕರ ಬಳಿ 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು ಲೋಕಾಯುಕ್ತ ಬಲೆಗೆ ಬಿದ್ದ ಪ್ರಾಂಶುಪಾಲ.

ಶಿವಮೊಗ್ಗ: ಭದ್ರಾವತಿಯಲ್ಲಿ (Bhadravathi) ವಸತಿ ಶಾಲೆಗೆ ದಾಖಲಿಸಿಕೊಳ್ಳಲು ವಿದ್ಯಾರ್ಥಿನಿಯ (Student) ಪೋಷಕರ ಬಳಿ ಲಂಚಕ್ಕೆ ಕೈಯೊಡ್ಡಿದ ಪ್ರಿನ್ಸಿಪಾಲ್ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾನೆ.
ಹುಣಸೆಕಟ್ಟೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ (Kittur Rani Channamma Residential School) ಪ್ರಿನ್ಸಿಪಾಲ್ ನಾಮದೇವ ಲೋಕಾಯುಕ್ತ ಬಲೆಗೆ ಬಿದ್ದ ಪ್ರಿನ್ಸಿಪಾಲ್. ವಿದ್ಯಾರ್ಥಿನಿಯನ್ನು 7ನೇ ತರಗತಿಗೆ ದಾಖಲಿಸಿಕೊಳ್ಳಲು ನಾಮದೇವ 20 ಸಾವಿರ ರೂ. ಲಂಚ ಕೇಳಿದ್ದ. ಶಾಲೆಗೆ ಡ್ರಮ್ ಸೆಟ್ ಬೇಕು ಎಂಬ ನೆಪದಲ್ಲಿ ಲಂಚ ಕೇಳಿದ್ದ.
ಈ ಸಂಬಂಧ ವಿದ್ಯಾರ್ಥಿನಿಯ ಪೋಷಕರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರುಇಂದು (ಜು.20) 10 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗ ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.ಲೋಕಾಯುಕ್ತ ಡಿವೈಎಸ್ಪಿ ಬಿ.ಪಿ.ಚಂದ್ರಶೇಖರ್, ಇನ್ಸ್‌ಪೆಕ್ಟರ್ ರುದ್ರೇಶ್ ನೇತೃತ್ವದ ತಂಡದಿಂದ ದಾಳಿ ನಡೆದಿತ್ತು.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
https://www.janataa24.com/iasipskas-who-stood-as-the-godfather-of-the/
https://www.janataa24.com/miscreants-uprooted-40-coconut-trees-turuvekere/
https://www.janataa24.com/operation-sindor-pok-9-terrorist/