Janataa24 NEWS DESK
ಗುಬ್ಬಿ: ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು, ಪೋಷಕರು ತಪ್ಪದೆ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಬೇಕೇಂದು ಮುಖ್ಯೋಪಾಧ್ಯಾಯರಾದ ಶಿವಕುಮಾರ್ ತಿಳಿಸಿದರು.

ಗುಬ್ಬಿ ತಾಲ್ಲೂಕಿನ ಹಾಗಲವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಶೈಕ್ಷಣಿಕ ವರ್ಷ ಪ್ರಾರಂಭೋತ್ಸವದಲ್ಲಿ ಮಾತನಾಡಿದ ಅವರು ಹಾಗಲವಾಡಿ ಸರ್ಕಾರಿ ಶಾಲೆಯಲ್ಲಿ ನೂತನ ಶೈಕ್ಷಣಿಕ ವರ್ಷದಿಂದ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿ ಆರಂಬಿಸಿದ್ಧು ಸರ್ಕಾರಿ ಶಾಲೆಯು ಯಾವ ಖಾಸಗಿ ಶಾಲೆಗಳಿಗೂ ಕಡಿಮೆ ಇಲ್ಲದಂತೆ ಅಭಿವೃದ್ಧಿಯತ್ತ ಸಾಗುತ್ತಿದೆ.
ಹಾಗೆಯೇ ಒಂದನೇ ತರಗತಿಯಿಂದಲೇ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ನೀಡಲಾಗುತ್ತಿದೆ.
ಈ ವರ್ಷದಿಂದ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿ ಆರಂಭವಾದ ಹೆನ್ನೆಲೆ ಯಿಂದಾಗಿ ಪೋಷಕರು 4 ರಿಂದ 5 ವರ್ಷದ ಮಕ್ಕಳನ್ನು ಶಾಲೆಗೆ ದಾಖಲಿಸಬೇಕು ಮನವಿ ಮಾಡಿದರು .
ಈ ಸಂದರ್ಭದಲ್ಲಿ
ಹೋಬಳಿಯ ಸಂಪನ್ಮೂಲ ಅಧಿಕಾರಿ ರವಿಕುಮಾರ್, ಪೊಲೀಸ್ ಇಲಾಖೆಯ ಶಾಹಿದ್, ಗ್ರಾಪಂ ಅಭಿವೃದ್ಧಿ ಅಧಿಕಾರಿ ಶಿವಕುಮಾರ್, ಶಾಲಾ ಶಿಕ್ಷಕ ವೃಂದದವರು ಹಾಜರಿದ್ದರು.
ವರದಿ
ಗುಬ್ಬಿ: ಶ್ರೀಕಾಂತ್