ಹೆದ್ದಾರಿಯಲ್ಲಿ ವಸೂಲಿ ಮಾಡುತ್ತಿದ್ದ ಪೊಲೀಸರು ಅಮಾನತು: ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್ ವಾಡ್

Janataa24 NEWS DESK

ಕಳ್ಳಂಬೆಳ್ಳ ಠಾಣೆಯ ಎಎಸ್ಐ ಚಿದಾನಂದ ಸ್ವಾಮಿ ಹಾಗೂ ಪೊಲೀಸ್ ಜೀಪ್ ಚಾಲಕ ಚಿಕ್ಕಹನುಮಯ್ಯರನ್ನು ಅಮಾನತು ಮಾಡಿ ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್ ವಾಡ್ ಅವರು ಆದೇಶ ಹೊರಡಿಸಿದ್ದಾರೆ.

VideoCapture 20230609 165430

ತುಮಕೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದ ಆರೋಪ ಮೇಲೆ ಓರ್ವ ಎಎಸ್ಐ ಸೇರಿ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ತುಮಕೂರು ಮತ್ತು ಶಿರಾ ನಡುವೆ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ, ಲಾರಿಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದರು. ಪ್ರತಿ ಲಾರಿಯಿಂದ 200, 300 ರೂಪಾಯಿ ವಸೂಲಿ ಮಾಡುತ್ತಿದ್ದರು. ಲಾರಿ ಚಾಲಕರಿಂದ ಹಣ ಪಡೆಯುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿತ್ತು. ಬಳಿಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪೊಲೀಸರ ಲಂಚಬಾಕತನವನ್ನು ನೋಡಿ ನೆಟ್ಟಿಗರು ಆಕ್ರೋಶ ಹೊರಹಾಕಿದ್ದರು.

Leave a Reply

Your email address will not be published. Required fields are marked *