Janataa24 NEWS DESK
ಗೃಹಜ್ಯೋತಿ ಯೋಜನೆಗೆ ಎರಡನೇ ದಿನವೂ ಭರ್ಜರಿ ಪ್ರತಿಕ್ರಿಯೆ: ಒಂದು ಲಕ್ಷಕ್ಕೂ ಅಧಿಕ ಗ್ರಾಹಕರಿಂದ ನೋಂದಣಿ!
ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಚುನಾವಣಾ ಪೂರ್ವ ಐದು ಗ್ಯಾರಂಟಿಗಳ ಪೈಕಿ ಒಂದಾದ ಗೃಹಜ್ಯೋತಿ ಯೋಜನೆಯ ನೋಂದಣಿ ಕಾರ್ಯಕ್ಕೆ ಜೂನ್ 18ರಂದು ಅಧಿಕೃತವಾಗಿ ಚಾಲನೆ ನೀಡಲಾಗಿತ್ತು. ಮೊದಲ ದಿನ 55 ಸಾವಿರಕ್ಕೂ ಹೆಚ್ಚು ಮಂದಿ ಗ್ರಾಹಕರು ಅರ್ಜಿ ಸಲ್ಲಿಸಿದ್ದರೆ, ಎರಡನೇ ದಿನ ಈ ಸಂಖ್ಯೆ ದುಪ್ಪಟ್ಟಾಗಿದೆ.

ಬೆಂಗಳೂರು: ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಚುನಾವಣಾ ಪೂರ್ವ ಐದು ಗ್ಯಾರಂಟಿಗಳ ಪೈಕಿ ಒಂದಾದ ಗೃಹಜ್ಯೋತಿ ಯೋಜನೆಯ ನೋಂದಣಿ ಕಾರ್ಯಕ್ಕೆ ಜೂನ್ 18ರಂದು ಅಧಿಕೃತವಾಗಿ ಚಾಲನೆ ನೀಡಲಾಗಿತ್ತು. ಮೊದಲ ದಿನ 55 ಸಾವಿರಕ್ಕೂ ಹೆಚ್ಚು ಮಂದಿ ಗ್ರಾಹಕರು ಅರ್ಜಿ ಸಲ್ಲಿಸಿದ್ದರೆ, ಎರಡನೇ ದಿನ ಈ ಸಂಖ್ಯೆ ದುಪ್ಪಟ್ಟಾಗಿದೆ.
ಗೃಹ ಜ್ಯೋತಿ ಯೋಜನೆಗೆ ನೋಂದಣಿಗಳು ಎರಡನೇ ದಿನದಲ್ಲಿ ಗಣನೀಯವಾಗಿ ಹೆಚ್ಚಿದ್ದು, ಸುಮಾರು 1,06,958 ಜನರು ಅರ್ಜಿ ಸಲ್ಲಿಸಿದ್ದಾರೆ
ಗೃಹಜ್ಯೋತಿ ಸೌಲಭ್ಯ ಸಿಗುತ್ತೋ ಇಲ್ಲವೋ ಎಂದು ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಕಾಂಗ್ರೆಸ್ ಪಕ್ಷವು ಕೊಟ್ಟ ಮಾತನ್ನು ಉಳಿಸಿಕೊಳ್ಳಲಿದೆ. ಯೋಜನೆಯನ್ನು ಜಾರಿಗೆ ತಂದೇ ತರುತ್ತೇವೆ. ಅರ್ಜಿ ಸಲ್ಲಿಸಲು ನೂಕು ನುಗ್ಗಲಿನಲ್ಲಿ ತೆರಳುವ ಅವಶ್ಯಕತೆಯಿಲ್ಲ. ಮುಂದಿನ ತಿಂಗಳಿನಿಂದ ನಿಮಗೆ ವಿದ್ಯುತ್ ಬಿಲ್ ಬರುವುದಿಲ್ಲ. ಆದರೆ, ನೀವು ಕಡ್ಡಾಯವಾಗಿ ಅರ್ಜಿ ಸಲ್ಲಿಸಬೇಕು. ಈಗಾಗಲೇ ನಮ್ಮ ಇಂಧನ ಸಚಿವರು ತಮಗೆ ಎಲ್ಲಾ ಮಾಹಿತಿ ನೀಡಿದ್ದಾರೆ. ತಪ್ಪದೇ ಅರ್ಜಿ ಸಲ್ಲಿಸಿ, ಆತಂಕ ಪಡಬೇಡಿ ಎಂದಿದ್ದಾರೆ.
ಗ್ರಾಹಕರ ಬಳಕೆಯ ಆಧಾರದ ಮೇಲೆ 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ಒದಗಿಸುವ ಯೋಜನೆಯು ಜುಲೈ ಬಳಕೆಗೆ ಅನ್ವಯಿಸುತ್ತದೆ