Document

Turuvekere: ರಾಹುಲ್ ಗಾಂಧಿಯವರು ಪ್ರಧಾನಮಂತ್ರಿಯಾಗುವಲ್ಲಿ ಯಾವುದೇ ಅನುಮಾನವಿಲ್ಲ: ಎ ಐ ಸಿ ಸಿ ಸದಸ್ಯ ಸುಬ್ರಮಣ್ಯ ಶ್ರೀಕಂಠೇಗೌಡ ಅಭಿಮತ

 

Turuvekere: ರಾಹುಲ್ ಗಾಂಧಿಯವರು ಪ್ರಧಾನಮಂತ್ರಿಯಾಗುವಲ್ಲಿ ಯಾವುದೇ ಅನುಮಾನವಿಲ್ಲ: ಎ ಐ ಸಿ ಸಿ ಸದಸ್ಯ ಸುಬ್ರಮಣ್ಯ ಶ್ರೀಕಂಠೇಗೌಡ ಅಭಿಮತ

ತುರುವೇಕೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಂದು ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು.ಎ ಐ ಸಿ ಸಿ ಯ ಅಧ್ಯಕ್ಷರಾಗಿ ಕರ್ನಾಟಕದಿಂದ ಆಯ್ಕೆಯಾದ ಶ್ರೀಯುತ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆಗಳು ಶ್ರೀಯುತರು ಎಐಸಿಸಿಯ ಅಧ್ಯಕ್ಷರಾಗಿರುವುದು ನಮಗೆಲ್ಲರಿಗೂ ಸಂತಸದಾಯಕ ವಿಚಾರವಾಗಿದೆ ಕರ್ನಾಟಕದಿಂದ ನಮ್ಮ ಮಾರ್ಗದರ್ಶಕರು ಹಾಗೂ ಹಿರಿಯರು ಆಗಿರುವುದಕ್ಕೆ ಕರ್ನಾಟಕದ ಜನತೆಯ ಹೆಮ್ಮೆಯ ವಿಚಾರವಾಗಿದೆ. ಇನ್ನು ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿಯವರು ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಭಾರತ ಐಕ್ಯತ ಯಾತ್ರೆಯಲ್ಲಿ ಪಾದಯಾತ್ರೆಯ ಮೂಲಕ ಸಂಚರಿಸಿರುವುದು ನಮ್ಮೆಲ್ಲರ ಪುಣ್ಯ ಬೃಹತ್ಪಾದಯಾತ್ರೆಯನ್ನು ಮಾಡಿರುವವರಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ಬಿಟ್ಟರೆ ಅತಿ ಹೆಚ್ಚು ಕಿಲೋ ಮೀಟರ್ ಗಳ ಪಾದಯಾತ್ರೆ ಕೈಗೊಂಡಿರುವ ರಾಹುಲ್ ಗಾಂಧಿ ಒಬ್ಬರೇ ಇದು ನಮಗೆ ಹೆಮ್ಮೆಯ ವಿಚಾರವಾಗಿದೆ ಈ ಪಾದಯಾತ್ರೆಯಲ್ಲಿ ನಮ್ಮ ಪಕ್ಕದ ಜಿಲ್ಲೆಗಳಾದ ಹಾಸನ , ಚಿಕ್ಕಮಗಳೂರು , ಬೆಂಗಳೂರು ಗ್ರಾಮಾಂತರ ನಮ್ಮ ಜಿಲ್ಲೆಯ ವಿವಿಧ ತಾಲೂಕುಗಳಿಂದಲೂ ಈ ಪಾದಯಾತ್ರೆಯಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದರು .. 2024ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿಯವರು ರಾಷ್ಟ್ರದ ಪ್ರಧಾನಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.ಈ ಸುದ್ದಿಗೋಷ್ಠಿಯಲ್ಲಿ ಬಡಗರಹಳ್ಳಿ ರಂಗಸ್ವಾಮಿ ,ಕರುನಾಡ ವಿಜಯ ಸೇನೆ ಸಂಘಟನೆಯ ತಾಲೂಕು ಅಧ್ಯಕ್ಷ ಸುರೇಶ್ , ಕಾಂಗ್ರೆಸ್ ಕಿಸಾನ್ ಸಂಘದ ಸ್ವರ್ಣ ಕುಮಾರ್, ಮಹೇಶ್, ತಮ್ಮಣ್ಣಗೌಡ, ಕೀರ್ತಿರಾಜ್, ಮುದ್ದಣ್ಣ ,ಶ್ರೀನಿವಾಸ್ ಮುಂತಾದವರು ಹಾಜರಿದ್ದರು.

Document

Leave a Reply

Your email address will not be published. Required fields are marked *