Document

ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್ ಪಾರ್ಥಿವ ಶರೀರ ಬೆಂಗಳೂರಿಗೆ ಆಗಮನ; ಸಿಎಂ ಗೌರವ ನಮನ; 50 ಲಕ್ಷ ರೂ. ಪರಿಹಾರ ಘೋಷಣೆ

Janataa24 NEWS DESK

vvv 10 105481856

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಹುತಾತ್ಮನಾದ ಕ್ಯಾಪ್ಟನ್ ಎಂ ವಿ ಪ್ರಾಂಜಲ್ ಅವರು ಹುತಾತ್ಮರಾಗಿದ್ದು, ಈ ನಡುವಲ್ಲೇ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ನಂದನವನದಲ್ಲಿರುವ ಅವರ ನಿವಾಸದಲ್ಲಿ ನೀರವ ಮೌನ ಆವರಿಸಿದೆ.

ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದಿದ್ದ ಗುಂಡಿನ ಚಕಮಕಿಯಲ್ಲಿ 66RR ಬೆಟಾಲಿಯನ್ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರು ಹುತಾತ್ಮರಾಗಿದ್ದಾರೆ.

ಪುತ್ರನ ಸಾವಿನಿಂದಾಗಿ ಮನೆಯಲ್ಲಿ ಮಗನನ್ನು ಕಳೆದುಕೊಂಡು ತಂದೆ ವೆಂಕಟೇಶ್ ಮತ್ತು ತಾಯಿ ಅನುರಾಧ ನೋವಿನಲ್ಲಿದ್ದು, ಅವರನ್ನು ಸಂಬಂಧಿಗಳು ಸಂತೈಸುತ್ತಿದ್ದಾರೆ.

images 2 3

ಮೈಸೂರು ಮೂಲದ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಅವರ ತಂದೆ ವೆಂಕಟೇಶ್ ಅವರು ಮಂಗಳೂರಿನ MRPL ಸಂಸ್ಥೆಯಲ್ಲಿ ಎಂಡಿ ಆಗಿದ್ದರು. ಹೀಗಾಗಿ ಮಂಗಳೂರು ಹೊರವಲಯದ ಕಾಟಿಪಳ್ಳದಲ್ಲಿ ಕುಟುಂಬ ಸಹಿತ ವೆಂಕಟೇಶ್ ವಾಸವಿದ್ದರು.

ಮಂಗಳೂರು, ಬೆಂಗಳೂರಿನಲ್ಲಿ ಶಿಕ್ಷಣ ಪೂರೈಸಿದ ಪ್ರಾಂಜಲ್ ಭಾರತೀಯ ಸೇನೆಗೆ ಸೇರಿದ್ದರು. ಅಲ್ಲದೆ, 63 ರಾಷ್ಟ್ರೀಯ ರೈಫಲ್ಸ್ ಅನ್ನು ಲೀಡ್ ಮಾಡುತ್ತಿದ್ದರು. ಇತ್ತೀಚೆಗೆ ವೆಂಕಟೇಶ್ ಅವರು ಬೆಂಗಳೂರಿಗೆ ವರ್ಗಾವಣೆಗೊಂಡಿದ್ದರಿಂದ ನಂದನವನದಲ್ಲಿ ನೆಲೆಸಿದ್ದರು.

ಈ ಸಂದರ್ಭದಲ್ಲಿ ಹುತಾತ್ಮ ಯೋಧನ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂತಾಪ ನುಡಿಗಳನ್ನಾಡಿರು. ಯೋಧನ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ನಮನ‌ ಸಲ್ಲಿಸಿ ಮಾಧ್ಯಮಗಳಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನವೆಂಬರ್ 22 ರಂದು ಕಾಶ್ಮೀರದ ರಜೌರಿಯ ಕಾವಿಕೋಟ್ ಎಂಬಲ್ಲಿ ಇಬ್ಬರು ಉಗ್ರರು ಅಡಗಿದ್ದರು.
ಕ್ಯಾಪ್ಟನ್ ಪ್ರಾಂಜಲ್‌ ಅವರು ತಮ್ಮ ತಂಡದೊಂದಿಗೆ ಕಾರ್ಯಾಚರಣೆ ನಡೆಸಿದ್ದರು. ನಾಗರಿಕರ ಜೊತೆ ಸಮಾಲೋಚನೆ ನಡೆಸುತ್ತಿರುವ ಸಂದರ್ಭದಲ್ಲಿ ಉಗ್ರರಿಂದ ತೀವ್ರವಾದ ದಾಳಿ ನಡೆಯಿತು. ಈ ಗುಂಡಿನ ದಾಳಿಯಲ್ಲಿ ಪ್ರಾಂಜಲ್‌ ಅವರು ನಾಗರಿಕರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗಿದ್ದರು. ಉಗ್ರರೊಂದಿಗೆ ಈ ವೇಳೆ ಗುಂಡಿನ ಚಕಮಕಿ ನಡೆಯಿತು. ಈ ದಾಳಿಯಲ್ಲಿ ಪ್ರಾಂಜಲ್‌ ಅವರು ತೀವ್ರವಾಗಿ ಗಾಯಗೊಂಡು ಹುತಾತ್ಮರಾದರು. ಆದರೆ ಪ್ರಾಂಜಲ್‌ ಅವರು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ನಾಗರಿಕರನ್ನು ರಕ್ಷಿಸಿದರು ಎಂದು ಸ್ಮರಿಸಿದರು.

ಈ ನಡುವೆ ಪ್ರಾಂಜಲ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್’ಡಿ.ಕುಮಾರಸ್ವಾಮಿಯವರು ಸಂತಾಪ ಸೂಚಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿರುವ ಅವರು, ಜಮ್ಮು ಕಾಶ್ಮೀರದ ರಜೌರಿಯಲ್ಲಿ ಭಯೋತ್ಪಾದಕರ ವಿರುದ್ಧ ನಡೆದ ಸೇನಾ ಕಾರ್ಯಾಚರಣೆಯ ವೇಳೆ ಹುತಾತ್ಮರಾದ ಹೆಮ್ಮೆಯ ಕನ್ನಡಿಗ, ವೀರಯೋಧ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ. ಪ್ರಾಂಜಲ್ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.

ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 50 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ.

Document

Leave a Reply

Your email address will not be published. Required fields are marked *