Janataa24 NEWS DESK
RTC ಗೆ ಆಧಾರ್ ಜೋಡಣೆ ಕಡ್ಡಾಯ.

ಬೆಂಗಳೂರು: ಭೂ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದ್ದು, ಆರ್‌ಟಿಸಿಗೆ ಆಧಾರ್ ಜೋಡಿಸುವ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಿದೆ.
ವಿಕಾಸಸೌಧದಲ್ಲಿ ಸೋಮವಾರ ಸಂಜೆ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಅಮಾಯಕರ ಜಮೀನುಗಳನ್ನು ವ್ಯವಸ್ಥಿತವಾಗಿ ದೋಚುವ ಕೆಲಸವಾಗುತ್ತಿದೆ. ಕೆಲವು ಪ್ರಕರಣಗಳಲ್ಲಿ ಸತ್ತವರ ಜಮೀನುಗಳನ್ನೂ ಸಹ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಿರುವ ಕುರಿತು ರಾಜ್ಯದ ಮೂಲೆ ಮೂಲೆಯಿಂದ ದೂರುಗಳು ಕೇಳಿ ಬರುತ್ತಿವೆ. ಇದರಿಂದ ವಂಚನೆಗೊಳಗಾದವರು ಹಲವು ವರ್ಷಗಳಿಂದ ಕೋರ್ಟ್ ಕಚೇರಿಗೆ ಅಲೆಯುವಂತಾಗಿದೆ. ಇಂತಹ ಪ್ರಕರಣಗಳನ್ನು ತಡೆಯುವ ಹಾಗೂ ಜನಸಾಮಾನ್ಯರ ಪಾಲಿಗೆ ಅವರ ಜಮೀನಿನ ಹಕ್ಕನ್ನು ರಕ್ಷಿಸಿ ಅಧಿಕೃತಗೊಳಿಸುವ ಉದ್ದೇಶದಿಂದ ಆಧಾರ್ ಜೋಡಣೆ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.
ಯ
RTC: ಭೂ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸಜ್ಜು.
ನಕಲಿ ದಾಖಲೆ ಸೃಷ್ಟಿಸಿ ಜಮೀನನ್ನು ದೋಚುವವರ ಕೃತ್ಯಕ್ಕೆ ಕಡಿವಾಣ ಹಾಕಬೇಕು ಎಂಬ ಒತ್ತಾಯ ಹಲವು ಜನರಿಂದ ಕೇಳಿಬಂದಿತ್ತು. ಇತ್ತೀಚೆಗೆ ಹಲವು ಶಾಸಕರು, ಸಚಿವರು ಹಾಗೂ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಗ್ಗೆ ಕಠಿಣ ಕ್ರಮ ಜರುಗಿಸುವಂತೆ ಸೂಚಿಸಿದ್ದರು. ಇದೇ ಕಾರಣಕ್ಕೆ ಆಧಾರ್ ಜೋಡಣೆ ಅಭಿಯಾನಕ್ಕೆ ಮೂರು ತಾಲೂಕುಗಳಲ್ಲಿ ಒಂದು ತಿಂಗಳ ಕಾಲ ಪ್ರಾಯೋಗಿಕವಾಗಿ ಚಾಲನೆ ನೀಡಲಾಗಿತ್ತು.
ಆ ಪ್ರಾಯೋಗ ಯಶಸ್ವಿಯಾಗಿದ್ದು ಇಂದಿನಿಂದಲೇ ರಾಜ್ಯಾದ್ಯಂತ ಆಧಾರ್ ಜೋಡಣೆ ಅಭಿಯಾನವನ್ನು ವಿಸ್ತರಿಸಲಾಗಿದೆ. “ಜನ ಸಾಮಾನ್ಯರು ಇದನ್ನು ಅನಾನುಕೂಲ ಎಂದು ಭಾವಿಸದೆ ಜಮೀನಿನ ಮಾಲೀಕತ್ವದ ಸುರಕ್ಷತೆಯ ದೃಷ್ಟಿಯಿಂದ ಹಾಗೂ ವಂಚನೆ ಪ್ರಕರಣಗಳನ್ನು ತಪ್ಪಿಸುವ ಉದ್ದೇಶದಿಂದ ನೋಂದಣಿ ಸಮಯದಲ್ಲಿ ಆಧಾರ್ ಜೋಡಣೆಗೆ ಸಕಾರಾತ್ಮಕವಾಗಿ ಸಹಕಾರ ನೀಡಬೇಕು ಎಂದು ಮನವಿ ಮಾಡಿಕೊಂಡರು.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/iasipskas-who-stood-as-the-godfather-of-the/
https://www.janataa24.com/miscreants-uprooted-40-coconut-trees-turuvekere/
Mandya: ಪತ್ನಿ ನೇಣಿಗೆ ಶರಣಾದದನ್ನು ಕಂಡು ಕೆರೆಗೆ ಹಾರಿ ಪ್ರಾಣ ಬಿಟ್ಟ ಪತಿ.