Janataa24 NEWS DESK 
Accident: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ- ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಸಾವು.

ಶಿವಮೊಗ್ಗ: ಹಗಲು ರಾತ್ರಿ ಎನ್ನದೆ ಬಿಟ್ಟು ಬಿಡದೆ ಸುರಿಯುತ್ತಿರುವ ಮಹಾ ಮಳೆಗೆ ಯುವಕ ಬಲಿಯಾದ ದುರ್ಘಟನೆ ನಡೆದಿದೆ. ಚಲಿಸುತ್ತಿದ್ದ ಬೈಕ್ ಮೇಲೆ ಅಕೇಶಿಯಾ ಮರ ಬಿದ್ದು ಯುವಕ ಸಾವನ್ನಪ್ಪಿದ್ದಾನೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಾದಿಗಲ್ಲು ಗ್ರಾಮ ಪಂಚಾಯತ್ನ ಮೀನ್ಮನೆಕೊಪ್ಪ ಎಂಬಲ್ಲಿ ಘಟನೆ ನಡೆದಿದೆ. ರಾಮಪ್ಪ (26) ಎಂಬ ಯುವಕ ಸಾವನ್ನಪ್ಪಿದ್ದಾನೆ
ರಾಮಪ್ಪ ಕೋಣಂದೂರಿಗೆ ಕೆಲಸದ ನಿಮಿತ್ತ ತೆರಳಿದ್ದನು. ಕೋಣದೂರಿನಿಂದ ಮನೆಗೆ ಹಿಂದಿರುಗುವಾಗ ಘಟನೆ ನಡೆದಿದೆ. ಈ ವೇಳೆ ಬೈಕ್ ಮೇಲೆ ಅಕೇಶಿಯಾ ಮರಬಿದ್ದು ರಾಮಪ್ಪ ಕೊನೆಯುಸಿರೆಳೆದಿದ್ದಾನೆ.
ಚಲಿಸುತ್ತಿರುವಾಗಲೇ ಬೈಕ್ ಮೇಲೆ ಅಕೇಶಿಯಾ ಮರ ಬಿದ್ದಿದೆ. ರಾಮಪ್ಪ ಮನೆಗೆ ಬಾರದ ಹಿನ್ನೆಲೆ ಗಮನಿಸಿದ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.instagram.com/janataa24?igsh=aXM0Ym9zb2Y2YTRn
https://www.janataa24.com/pavagada-nss-students-can-learn-rural-values/