Document

AlluArjun: ನಟ ಅಲ್ಲು ಅರ್ಜುನ್ ಅರೆಸ್ಟ್.! ಕಾರಣ ಏನು ಗೂತ್ತಾ.?

Janataa24 NEWS DESK 

AlluArjun: ನಟ ಅಲ್ಲು ಅರ್ಜುನ್ ಅರೆಸ್ಟ್.! ಕಾರಣ ಏನು ಗೂತ್ತಾ.?

AlluArjun: ನಟ ಅಲ್ಲು ಅರ್ಜುನ್ ಅರೆಸ್ಟ್.! ಕಾರಣ ಏನು ಗೂತ್ತಾ.?

 

ಹೈದರಾಬಾದ್: ಸಂಧ್ಯಾ ಥಿಯೇಟರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಚೀಕಟಪಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಲ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ನಿಧನ ಹೊಂದಿದ್ದರು.

 

ಅವರ ಪುತ್ರ ತೀವ್ರವಾಗಿ ಗಾಯಗೊಂಡಿದ್ದರು. ಈ ಘಟನೆ ಕುರಿತಂತೆ ನಟ ಅಲ್ಲು ಅರ್ಜುನ್ ಹಾಗೂ ಇನ್ನೂ ಇತರರ ವಿರುದ್ಧ ದೂರು ದಾಖಲಾಗಿತ್ತು. ಇದೀಗ ನಟ ಅಲ್ಲು ಅರ್ಜುನ್ ಹಾಗೂ ಅವರ ಬಾಡಿಗಾರ್ಡ್​ ಇನ್ನಿತರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

ಪ್ರಕರಣ ಕುರಿತು ಈ ಮೊದಲೇ ಹೈದರಾಬಾದ್, ಚೀಕಟಪಲ್ಲಿ ಪೊಲೀಸರು ನೊಟೀಸ್ ನೀಡಿದ್ದರು. ಆದರೆ ನೊಟೀಸಿಗೆ ಅಲ್ಲು ಅರ್ಜುನ್ ಉತ್ತರ ನೀಡಿರಲಿಲ್ಲ ಎನ್ನಲಾಗಿದೆ. ಆದರೆ ಅಲ್ಲು ಅರ್ಜುನ್, ಪ್ರಕರಣವನ್ನು ರದ್ದು ಮಾಡುವಂತೆ ತೆಲಂಗಾಣ ಹೈಕೋರ್ಟ್​ ಗೆ ಮನವಿ ಸಲ್ಲಿಸಿದ್ದರು. ಆದರೆ ಅರ್ಜಿಯ ವಿಚಾರಣೆ ಇನ್ನೂ ನಡೆದಿಲ್ಲ.

AlluArjun: ಅಲ್ಲು ಅರ್ಜುನ್ ಬಂಧನಕ್ಕೆ ಅಸಲಿ ಕಾರಣ ಏನು.?

ಅಲ್ಲು ಅರ್ಜುನ್, ಡಿಸೆಂಬರ್ 04 ರಂದು ಪೊಲೀಸರಿಗೆ ಮಾಹಿತಿ ನೀಡದೆ ಸಂಧ್ಯಾ ಚಿತ್ರಮಂದಿರಕ್ಕೆ ತೆರಳಿದ್ದರು ಎನ್ನಲಾಗಿದೆ. ಅಲ್ಲದೆ ಅವರೊಟ್ಟಿಗೆ ಅಂದು ಸುಮಾರು 20 ಮಂದಿ ಬೌನ್ಸರ್​ಗಳು ಇದ್ದು, ಅವರು ಅತಿರೇಕದಿಂದ ವರ್ತಿಸಿದರು. ಜನರನ್ನು ತಳ್ಳಿ-ನೂಕಿದ ಕಾರಣಕ್ಕೆ ಕಾಲ್ತುಳಿತ ಉಂಟಾಗಿ, ಅದರಲ್ಲಿ ಮಹಿಳೆ ರೇವತಿ ನಿಧನ ಹೊಂದಿದ್ದಾರೆ ಎನ್ನಲಾಗಿದೆ.

 

ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆರೋಪಿಗಳ ಮೇಲೆ ಸೆಕ್ಷನ್ ಬಿಎನ್​ಎಸ್ 118, ಬಿಎನ್​ಎಸ್​ 105 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದಲ್ಲಿ ಅಲ್ಲು ಅರ್ಜುನ್ ಅನ್ನು ಎರಡನೇ ಆರೋಪಿಯನ್ನಾಗಿ ಮಾಡಲಾಗಿದೆ. ತಮ್ಮ ಮೇಲೆ ದಾಖಲಾಗಿರುವ ಈ ಪ್ರಕರಣವನ್ನು ರದ್ದು ಮಾಡಬೇಕೆಂದು ಅಲ್ಲು ಅರ್ಜುನ್, ತೆಲಂಗಾಣ ಹೈಕೋರ್ಟ್ ಮೊರೆ ಹೋಗಿದ್ದಾರೆ. ಆದರೆ ಅಲ್ಲಿ ಅರ್ಜಿ ವಿಚಾರಣೆ ಇನ್ನೂ ನಡೆದಿಲ್ಲ.

 

ಮಹಿಳೆ ರೇವತಿ ಸಾವಿನ ಬಳಿಕ ವಿಡಿಯೋ ಬಿಡುಗಡೆ ಮಾಡಿದ್ದ ಅಲ್ಲು ಅರ್ಜುನ್, ರೇವತಿ ಕುಟುಂಬಕ್ಕೆ 25 ಲಕ್ಷ ರೂಪಾಯಿ ಹಣ ಸಹಾಯ ನೀಡುವುದಾಗಿ ಹೇಳಿದ್ದರು. ಜೊತೆಗೆ ತೀವ್ರ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರ ಪುತ್ರನ ಎಲ್ಲ ಚಿಕಿತ್ಸೆಯ ಹೊರೆಯನ್ನು ತಾವೇ ಹೊರುವುದಾಗಿ ಹಾಗೂ ಅವರ ಕುಟುಂಬಕ್ಕೆ ಬೆನ್ನೆಲುಬಾಗಿ ಇರುವುದಾಗಿಯೂ ಅಲ್ಲು ಅರ್ಜುನ್ ಹೇಳಿಕೊಂಡಿದ್ದರು.

 

ಇದೀಗ ಅಲ್ಲು ಅರ್ಜುನ್ ಅನ್ನು ಬಂಧಿಸಿ ಚೀಕಡಪಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದ್ದು, ಪ್ರಾಥಮಿಕ ವಿಚಾರಣೆ ನಡೆಯಲಿದೆ. ಅಲ್ಲು ಅರ್ಜುನ್​ಗೆ ಸ್ಟೇಷನ್ ಬೇಲ್ ನೀಡಿ ಕಳಿಸಿಕೊಡಲಾಗುತ್ತದೆಯೋ ಅಥವಾ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುತ್ತದೆಯೋ ಎಂಬುದು ಕೆಲವೇ ಗಂಟೆಗಳಲ್ಲಿ ತಿಳಿದು ಬರಲಿದೆ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

https://youtube.com/@janataa24?si=XsFcych2GMH0O6Gv

https://www.janataa24.com/iasipskas-who-stood-as-the-godfather-of-the/

https://www.janataa24.com/miscreants-uprooted-40-coconut-trees-turuvekere/

Mandya: ಪತ್ನಿ ನೇಣಿಗೆ ಶರಣಾದದನ್ನು ಕಂಡು ಕೆರೆಗೆ ಹಾರಿ ಪ್ರಾಣ ಬಿಟ್ಟ ಪತಿ.

Document

Leave a Reply

Your email address will not be published. Required fields are marked *