ಕಲ್ಲಡ್ಕ ಪ್ರಭಾಕರ್ ಭಟ್ಟರನ್ನು ಬಂಧಿಸಿ. ಹಾಗೂ ಶ್ರೀ ಕಾಂತರಾಜ್ ವರದಿಯನ್ನು ಅಂಗೀಕರಿಸುವಂತೆ ಒತ್ತಾಯಿಸಿ ಡಿಸಿ ಕಚೇರಿ ಮುಂದೆ ಪ್ರತಿಭಟನೆ.

Janataa24 NEWS DESK

IMG 20240118 WA0007

ಕಲ್ಲಡ್ಕ ಪ್ರಭಾಕರ್ ಭಟ್ಟರನ್ನು ಬಂಧಿಸಿ. ಹಾಗೂ ಶ್ರೀ ಕಾಂತರಾಜ್ ವರದಿಯನ್ನು ಅಂಗೀಕರಿಸುವಂತೆ ಒತ್ತಾಯಿಸಿ ಡಿಸಿ ಕಚೇರಿ ಮುಂದೆ ಪ್ರತಿಭಟನೆ.



ತುರುವೇಕೆರೆ: ಪ್ರೊಫೆಸರ್ ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ, ಜಿಲ್ಲಾ ಸಂಘಟನಾ ಸಂಚಾಲಕರುಗಳಾದ ಕುಂದೂರು ತಿಮ್ಮಯ್ಯ , ಸಂಘಟನಾ ಸಂಚಾಲಕ ವಿರೂಪಾಕ್ಷ ಡ್ಯಾಗೇರಹಳ್ಳಿ, ನರಸೀಯಪ್ಪ ಲಕ್ಕೇನಹಳ್ಳಿ, ಕುಂದೂರು ಮುರಳಿ, ಇವರ ನೇತೃತ್ವದಲ್ಲಿ ತುಮಕೂರು ಡಿಸಿ ಕಚೇರಿ ಎದುರು ಪ್ರತಿಭಟಿಸಿ ಮನವಿ ಸಲ್ಲಿಸಿದರು.



ಇದೆ ವೇಳೆ ಕುಂದೂರು ತಿಮ್ಮಯ್ಯ ಮಾತನಾಡಿ, ಮುಸ್ಲಿಂ ಮಹಿಳೆಯರ ವಿರುದ್ಧ ಸಾರ್ವಜನಿಕವಾಗಿ ಅವಹೇಳನಕಾರಿಯಾಗಿ ಮಾತನಾಡಿದ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ ಎಸ್) ಪರಿವಾರದ ಪ್ರಮುಖ ಕಲ್ಲಡ್ಕ ಪ್ರಭಾಕರ್ ಭಟ್ಟರ ವಿರುದ್ಧ ಗೂಂಡಾ ಕಾಯ್ದೆಅಡಿ ಬಂಧಿಸಿ ಗಡಿಪಾರು ಮಾಡಬೇಕು, ಇದರ ಜೊತೆಗೆ ಸಾಮಾಜಿಕ ಶೈಕ್ಷಣಿಕ ಮತ್ತು ಜಾತಿ ಸಮೀಕ್ಷೆ ನಡೆಸಿರುವ ಶ್ರೀ ಕಾಂತರಾಜು ಜಾತಿಗಣತಿ ವರದಿಯನ್ನು ಜಾರಿಗೊಳಿಸಬೇಕು ಎಂದು ಹಕ್ಕೊತ್ತಾಯಿಸಿದರು.



ಇದೇ ವೇಳೆ ಜಿಲ್ಲಾ ಮಹಿಳಾ ಸಂಚಾಲಕಿ ಲಾವಣ್ಯ, ತುರುವೇಕೆರೆ ತಾಲೂಕು ಸಂಚಾಲಕ ಕೃಷ್ಣಸ್ವಾಮಿ,ಸಂಚಾಲಕಿ ನಂದಿನಿ, ನಗರ ಘಟಕ ಸಂಚಾಲಕ ಬಡಾವಣೆ ಶಿವರಾಜು, ಸಂಘಟನಾ ಸಂಚಾಲಕರಾದ ರೋಹಿತ್ ಕಲ್ಮನೆ, ಮುಖಂಡರಾದ ರಂಗಸ್ವಾಮಿ ಇನ್ನು ಅನೇಕ ವಿವಿಧ ತಾಲೂಕುಗಳಿಂದ ಆಗಮಿಸಿದ ಪ್ರೊಫೆಸರ್ ಬಿ ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಕಲ್ಲಡ್ಕ ಪ್ರಭಾಕರ್ ಭಟ್ಟರ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟಿಸಿದರು.

ವರದಿ

ತುರುವೇಕೆರೆ: ಮಂಜುನಾಥ್

Leave a Reply

Your email address will not be published. Required fields are marked *