JANATAA24 NEWS DESK
>Bengaluru: ಪ್ರತಿಷ್ಠಿತ ಶಾಲೆಗಳಿಗೆ ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ.

ಬೆಂಗಳೂರು: ಕರ್ನಾಟಕ ಸರ್ಕಾರದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವತಿಯಿಂದ 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ವಿವಿಧ ಪ್ರತಿಷ್ಠಿತ ಶಾಲೆಗಳಲ್ಲಿ ಪರಿಶಿಷ್ಟ ಪಂಗಡ (ST) ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ.
ಸರ್ಕಾರದ ಆದೇಶದನ್ವಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅರ್ಹತಾ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಈ ಯೋಜನೆಯ ಮೂಲಕ ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯುವ ಅವಕಾಶ ಸಿಗಲಿದೆ.
ಪ್ರಮುಖ ದಿನಾಂಕಗಳು
ಅರ್ಜಿ ಆಹ್ವಾನ ಆರಂಭ: ಏಪ್ರಿಲ್ 15, 2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 4, 2026
ಅರ್ಜಿಗಳ ಪರಿಶೀಲನೆ: ಮೇ 6, 2026
ಪ್ರವೇಶ ಪರೀಕ್ಷೆ: ಮೇ 12, 2026
ಫಲಿತಾಂಶ ಪ್ರಕಟಣೆ: ಮೇ 15, 2026
ಕೌನ್ಸಿಲಿಂಗ್ ಮೂಲಕ ಆಯ್ಕೆ: ಮೇ 19, 2026
ದಾಖಲಾಗುವ ಕೊನೆಯ ದಿನಾಂಕ: ಮೇ 30, 2026
ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ ನಂತರ ಪ್ರವೇಶ ಪರೀಕ್ಷೆ ಎದುರಿಸಬೇಕಿದ್ದು, ಫಲಿತಾಂಶದ ಆಧಾರದ ಮೇಲೆ ಕೌನ್ಸಿಲಿಂಗ್ ಮೂಲಕ ಅಂತಿಮ ಆಯ್ಕೆ ನಡೆಯಲಿದೆ.
ಇಲಾಖೆಯ ಸೂಚನೆ
ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಸಂಬಂಧಿತ ಸಂಸ್ಥೆಗಳು ಈ ಯೋಜನೆಯ ಮಾಹಿತಿ ಸಾರ್ವಜನಿಕರಿಗೆ ತಲುಪಿಸುವಂತೆ ಸೂಚಿಸಲಾಗಿದೆ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಕಛೇರಿಗಳ ನೋಟಿಸ್ ಫಲಕಗಳಲ್ಲಿ ಪ್ರಕಟಣೆ ಅಳವಡಿಸುವುದರ ಜೊತೆಗೆ ಮಾಧ್ಯಮಗಳ ಮೂಲಕ ಜಾಗೃತಿ ಮೂಡಿಸಲು ಸೂಚಿಸಲಾಗಿದೆ.
ಈ ಯೋಜನೆ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಶಿಕ್ಷಣದ ಮಟ್ಟವನ್ನು ಹೆಚ್ಚಿಸಲು ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ.