Janataa24 NEWS DESK
Bengaluru: ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಕ್ರಮ- ಗೃಹ ಸಚಿವ ಪರಮೇಶ್ವರ.
-ಬೆಂಗಳೂರಿನಲ್ಲಿ 1194 ನೋ ಪಾರ್ಕಿಂಗ್ ರಸ್ತೆಗಳು

ಬೆಂಗಳೂರು: ಬೆಂಗಳೂರು ನಗರದಲ್ಲಿನ ಪಾರ್ಕಿಂಗ್ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸುವ ನಿಟ್ಟಿನಲ್ಲಿ ಬಿಬಿಎಂಪಿ ಮತ್ತು ಸಾರಿಗೆ ಇಲಾಖೆಯೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು.
ವಿಧಾನಸೌಧದಲ್ಲಿ ಪ್ರಶ್ನಾವಳಿ ಅವಧಿ ವೇಳೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರು ಪಾರ್ಕಿಂಗ್ ಸಮಸ್ಯೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು.
ನಗರದಲ್ಲಿ ಇನ್ಫ್ರಾಸ್ಟ್ರಕ್ಚರ್‌ಗಳಿಗೆ ನಿಯಮಗಳನ್ನು ರೂಪಿಸದಿರುವ ಹಿನ್ನೆಲೆಯಲ್ಲಿ ರಸ್ತೆ ಬದಿ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿದ್ದಾರೆ. ಇದನ್ನು ತಡೆಗಟ್ಟಲು ಬಿಬಿಎಂಪಿ, ಸಾರಿಗೆ ಇಲಾಖೆಯವರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು. ಮನೆಕಟ್ಟುವಾಗ ವಾಹನಗಳ ಪಾರ್ಕಿಂಗ್‌ಗೆ ಸ್ಥಳ ಇದ್ದರೆ ಮಾತ್ರ ಅನುಮತಿ ನೀಡಬೇಕು. ಇಂತಹ ನಿಯಮಗಳನ್ನು ತರಲು ಚರ್ಚೆ ಮಾಡಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಬೆಂಗಳೂರು ನಗರದಲ್ಲಿ 1194 ನೋ ಪಾರ್ಕಿಂಗ್ ರಸ್ತೆಗಳೆಂದು ಗುರುತಿಸಲಾಗಿದೆ. 2022ರಲ್ಲಿ 12,07,651 ಪ್ರಕರಣಗಳಲ್ಲಿ 20,84,56,000 ರೂ. ದಂಡ, 2023ರಲ್ಲಿ 11,30,855 ಪ್ರಕರಣಗಳಿಗೆ ರೂ 37,30,22,000, 2024 (ಜೂನ್ 3ರವರೆಗೆ) 5,21,326 ಪ್ರಕರಣಗಳನ್ನು ದಾಖಲಿಸಿ 5,97,00,200 ರೂ. ದಂಡ ಸಂಗ್ರಹಿಸಲಾಗಿದೆ ಎಂದು ಮಾಹಿತಿ ನೀಡಿದರು.
ಟ್ರಾಫಿಕ್ ಸಮಸ್ಯೆಯನ್ನು ನಿಯಂತ್ರಿಸಲು ಕೆಳಹಂತದ ಸಿಬ್ಬಂದಿಗಳು ಮಾತ್ರವಲ್ಲದೇ ಸಂಚಾರ ವಿಭಾಗದ ಡಿಸಿಪಿ, ಎಸಿಪಿಯವರು ಬೆಳಗ್ಗೆ ಮತ್ತು ಸಂಜೆ ವೇಳೆ ಕನಿಷ್ಟ ಎರಡು ತಾಸು ರಸ್ತೆಗಿಳಿದು ಕೆಲಸ ಮಾಡುವಂತೆ ಈಗಾಗಲೇ ನಿರ್ದೇಶಿಸಲಾಗಿದೆ ಎಂದು ತಿಳಿಸಿದರು.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/gubbi-pwd-officials-ban-dalit-vehicles/