Document

Bengaluru: ಇನ್ಮುಂದೆ ಹೊರಗುತ್ತಿಗೆ ನೌಕರರಿಗೂ ಸಿಗಲಿದೆ 5 ಲಕ್ಷದ ವರೆಗೆ ಉಚಿತ ಆರೋಗ್ಯ ಚಿಕಿತ್ಸೆ ಸೌಲಭ್ಯ..!

Janataa24 NEWS DESK

Bengaluru: ಇನ್ಮುಂದೆ ಹೊರಗುತ್ತಿಗೆ ನೌಕರರಿಗೂ ಸಿಗಲಿದೆ 5 ಲಕ್ಷದ ವರೆಗೆ ಉಚಿತ ಆರೋಗ್ಯ ಚಿಕಿತ್ಸೆ ಸೌಲಭ್ಯ..!

Bengaluru,

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳ ನೌಕರರು, ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಆರೋಗ್ಯ ಭದ್ರತೆ, 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸಾ ಸೌಲಭ್ಯ ಕಲ್ಪಿಸುವ ಐತಿಹಾಸಿಕ ನಿರ್ಣಯಕ್ಕೆ ಕ್ಯಾಬಿನೆಟ್‌ ಒಪ್ಪಿಗೆ ಸೂಚಿಸಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ (Dinesh Gundu Rao) ತಿಳಿಸಿದ್ದಾರೆ.

https://x.com/dineshgrao/status/1935710290550956522?t=VZW8dNchzbzjYfxdjUwQIQ&s=19

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ರಾಜ್ಯದ ಯಾವುದೇ ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನದ ಆಧಾರದ ಮೇಲೆ ಕೆಲಸ ಮಾಡುವ 3 ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ 5 ಲಕ್ಷ ರೂ. ವರೆಗೆ ನಗದು ರಹಿತ ಚಿಕಿತ್ಸೆಯನ್ನು ಒದಗಿಸುವ ಸಲುವಾಗಿ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ- ಖಾಯಂ ಅಲ್ಲದ ಸಿಬ್ಬಂದಿಗೆ (KASS-NPE)’ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಈ ಯೋಜನೆಯು ESIC, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ (AB-ArK), ಯಶಸ್ವಿನಿ ಮುಂತಾದ ಯಾವುದೇ ಸರ್ಕಾರಿ ಪ್ರಾಯೋಜಿತ ಆರೋಗ್ಯ ವಿಮಾ ಯೋಜನೆಗಳಲ್ಲಿ ಒಳಗೊಳ್ಳದ ಸಿಬ್ಬಂದಿ ಹಾಗೂ ಅವರ ಅವಲಂಬಿತರನ್ನು ಒಳಗೊಳ್ಳಲಿದೆ. ಈ ಯೋಜನೆಗಾಗಿ ಪ್ರತಿ ತಿಂಗಳು ಸಿಬ್ಬಂದಿ 100 ರೂಪಾಯಿ ಭರಿಸಿದರೆ, ರಾಜ್ಯ ಸರ್ಕಾರವೂ ಸಹ 100 ರೂಪಾಯಿ ಭರಿಸಲಿದೆ. ರಾಜ್ಯ ಸರ್ಕಾರವು ಈ ಯೋಜನೆಗಾಗಿ 36 ಕೋಟಿ ವೆಚ್ಚ ಮಾಡಲಿದೆ ಎಂದು ಮಾಹಿತಿ ನೀಡಿದ್ದಾರೆ.

ಯಾವುದೇ ಆರೋಗ್ಯ ಯೋಜನೆಗಳ ಲಾಭ ದೊರಕದ ಕೆಳ ಮಧ್ಯಮ ವರ್ಗಕ್ಕೆ ಆರೋಗ್ಯದ ಭದ್ರತೆ ನೀಡುವ ದೃಷ್ಟಿಯಿಂದ ಕಳೆದ ಬಜೆಟ್‌ನಲ್ಲಿ ಘೋಷಿಸಿದಂತೆ ರಾಜ್ಯ ಸರ್ಕಾರವು ಈ ಯೋಜನೆಯನ್ನು ಜಾರಿಗೊಳಿಸುತ್ತಿದ್ದು, ದೇಶದಲ್ಲೇ ಇದೊಂದು ಮಾದರಿ ಯೋಜನೆಯಾಗಲಿದೆ ಎಂದು ಹೇಳಿದ್ದಾರೆ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *