JANATAA24 NEWS DESK
BOSS: ರೇಣುಕಾಸ್ವಾಮಿ ಕೊಲೆಯನ್ನ ಸಿನಿಮಾ ಮಾಡಲು ಹೋದವರಿಗೆ ಶಾಕ್ ಕೊಟ್ಟ ವಿಜಯಲಕ್ಷ್ಮಿ.

ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣ ಆಧರಿತ ಚಲನಚಿತ್ರ ‘ಬಾಸ್’ (Boss Movie) ಬಿಡುಗಡೆ ಮಾಡದಂತೆ ಕೋರ್ಟ್ ತಡೆಯಾಜ್ಞೆ ನೀಡಿದೆ.
ಬಾಸ್ ಎಂಬ ಚಿತ್ರ ನಿರ್ಮಾಣ ಮಾಡಿದ್ದು, ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಟೀಸರ್ ಅನ್ನು ಚಲನಚಿತ್ರ ತಂಡ ಬಿಡುಗಡೆ ಮಾಡಿತ್ತು. ಬಿಡುಗಡೆ ಮಾಡಿದ್ದ ತುಣುಕಿನಲ್ಲಿ ರೇಣುಕಾಸ್ವಾಮಿ ಕೊಲೆಯನ್ನು ಆಧರಿಸಿಯೇ ಚಲನಚಿತ್ರ ನಿರ್ಮಾಣ ಮಾಡಲಾಗಿದೆ ಎಂದು ಸ್ಪಷ್ಟವಾಗುತ್ತಾ ಇತ್ತು. ನಟ ದರ್ಶನ್ ಹಾವಾ ಬಾವಾ, ರೇಣುಕಾಸ್ವಾಮಿ ಅಪಹರಣ ಹತ್ಯೆ ಎಲ್ಲವೂ ಘಟನೆಗೆ ಹೋಲುವಂತಿತ್ತು.
ಈ ಕಾರಣ ದರ್ಶನ್ ಪತ್ನಿ ವಿಜಯಲಕ್ಷ್ಮಿ ಚಲನಚಿತ್ರಕ್ಕೆ ತಡೆ ನೀಡಬೇಕು ಎಂದು ಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಚಲನಚಿತ್ರ ಬಿಡುಗಡೆಗೆ ತಡೆ ನೀಡಿದೆ.
ಏಪ್ರಿಲ್ 14 ಕ್ಕೆ ಚಿತ್ರ ಬಿಡುಗಡೆ ಮಾಡುವುದಾಗಿ ದಿನಾಂಕವನ್ನು ಚಲನಚಿತ್ರ ತಂಡ ಘೋಷಿಸಿಕೊಂಡಿತ್ತು. ಈಗ ಕೋರ್ಟ್ ತಡೆಯಾಜ್ಞೆಯಿಂದ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.