JANATAA24 NEWS DESK
CN Halli: ಶಿಡ್ಲಕಟ್ಟೆ ಗ್ರಾಮದಲ್ಲಿ ಜೆಜೆಎಂ ಕಾಮಗಾರಿಯಲ್ಲಿ ಅಕ್ರಮದ ಆರೋಪ.

ಚಿಕ್ಕನಾಯಕನಹಳ್ಳಿ: ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿಯ ಶಿಡ್ಲಕಟ್ಟೆ ಗ್ರಾಮದಲ್ಲಿ ಜಲ್ ಜೀವನ್ ಮಿಷನ್ (JJM) ಯೋಜನೆಯಡಿ ಸುಮಾರು ₹60 ಲಕ್ಷ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಆದರೆ ಗ್ರಾಮದಲ್ಲಿರುವ 2013-14ರ ಅವಧಿಯಲ್ಲಿ ನಿರ್ಮಾಣಗೊಂಡು ಪ್ರಸ್ತುತ ಶಿಥಿಲಾವಸ್ಥೆಯಲ್ಲಿರುವ ಓವರ್ ಹೆಡ್ ಟ್ಯಾಂಕ್‌ಗೆ ಕೇವಲ ಸಿಮೆಂಟ್ ಲೇಪನ ಮತ್ತು ಬಣ್ಣ ಬಳಿದು ಅದನ್ನು ಹೊಸ ಕಾಮಗಾರಿಯಂತೆ ತೋರಿಸಿ ಬಿಲ್ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.
ಗ್ರಾಮಸ್ಥರ ಪ್ರಕಾರ, ಸುರಕ್ಷತಾ ದೃಷ್ಟಿಯಿಂದ ಬಳಕೆಗೆ ಅಯೋಗ್ಯವಾಗಿರುವ ಹಳೆಯ ಟ್ಯಾಂಕ್ ಅನ್ನು ತೆರವುಗೊಳಿಸಿ ಹೊಸ ಟ್ಯಾಂಕ್ ನಿರ್ಮಿಸಬೇಕಾದ ಅಗತ್ಯವಿದ್ದರೂ, ಕೇವಲ ಮೇಲ್ಮೈ ದುರಸ್ತಿ ಮಾಡಿ ಹೊಸ ಕಾಮಗಾರಿಯಂತೆ ದಾಖಲೆ ಸೃಷ್ಟಿಸಲು ಯತ್ನಿಸಲಾಗುತ್ತಿದೆ ಎನ್ನಲಾಗಿದೆ.
ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಕಾಮಗಾರಿಯ ಗುಣಮಟ್ಟ, ಅಂದಾಜು ಪತ್ರಿಕೆ ಹಾಗೂ ವೆಚ್ಚದ ವಿವರಗಳನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
“ಸಾರ್ವಜನಿಕರ ಹಣವನ್ನು ಸಮರ್ಪಕವಾಗಿ ಬಳಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಹಳೆಯ ಕಾಮಗಾರಿಯನ್ನು ಹೊಸದಾಗಿ ತೋರಿಸಿ ಬಿಲ್ ಸೃಷ್ಟಿಸುವ ಯಾವುದೇ ಪ್ರಯತ್ನ ನಡೆದಿದ್ದರೆ ಅದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕು” ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ವರದಿ: ಆರ್ ದೇವರಾಜ್ ಚಿಕ್ಕನಾಯಕನಹಳ್ಳಿ
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.