Janataa24 NEWS DESK
Dalit_CM: ದಲಿತರಿಗೆ ಸಿಎಂ ಸ್ಥಾನ ಸಿಗಲಿಲ್ಲ ನೋವು ಹೊರಹಾಕಿದ ಸಚಿವ ಹೆಚ್ ಸಿ ಮಹದೇವಪ್ಪ

ಬೆಂಗಳೂರು: ಲೋಕಸಭಾ ಚುನಾವಣೆ (Lok sabha Election 2024) ಕಾವು ಹೆಚ್ಚಾಗುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ (Karnataka Politics) ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಈ ನಡುವೆ ಸಚಿವ ಹೆಚ್ ಸಿ ಮಹಾದೇವಪ್ಪ (HC Mahadevappa) ಅವರು ದಲಿತ ಸಿಎಂ ಕೂಗು ಎತ್ತಿದ್ದು, ಪರೋಕ್ಷವಾಗಿ ಅಸಮಾಧಾನದ ನುಡಿಗಳನ್ನು ಹೇಳಿದ್ದಾರೆ.
ಸಿಎಂ ಸ್ಥಾನ ಕೊಡಿ ಎಂದು ಕೇಳುವ ಪರಿಸ್ಥಿತಿ
ರಾಜ್ಯ ಮಟ್ಟದ ಎಸ್ಟಿ, ಎಸ್ಸಿ ನೌಕರರ ಸಮಾವೇಶದಲ್ಲಿ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಮಹದೇವಪ್ಪ, ದಲಿತರಿಗೆ ಸಿಎಂ ಆಗುವ ಅವಕಾಶ ಸಿಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಹೇಗೆ ಸಿಎಂ ಆದರೂ ಎಂದು ವಿವರಿಸಿದ ಮಹಾದೇವಪ್ಪ ಅವರು, ನಾನು, ಪ್ರಿಯಾಂಕ್ ಖರ್ಗೆ, ಮಲ್ಲಿಕಾರ್ಜುನ ಖರ್ಗೆ ಫಾಲಿಸಿ ಮೇಕ್ ಸ್ಥಾನದಲ್ಲಿ ಇಲ್ಲ. ನೀವು ನಾಯಕರನ್ನ ಫಾಲೋ ಮಾಡುತ್ತಿಲ್ಲ. ಸಿದ್ದರಾಮಯ್ಯ, ಯಡಿಯೂರಪ್ಪ, ದೇವೇಗೌಡರು ಯಾಕೆ ಸಿಎಂ ಆದರೂ? ರಾಜ್ಯದಲ್ಲಿ ಒಗ್ಗಟಾಗಿ ಪಕ್ಷಕ್ಕೆ ಮತ ನೀಡಿದ ಬಳಿಕವೂ ಪುನಃ ಸಿಎಂ ಸ್ಥಾನ ಕೊಡಿ ಎಂದು ಕೇಳುವ ಪರಿಸ್ಥಿತಿ ಇದೆ ಎಂದು ಬೇಸರ ಹೊರ ಹಾಕಿದರು.
ಮತ ನಮ್ಮದಿದೆ ಆದರೆ ನಾಯಕತ್ವ ಇನ್ಯಾರ ಬಳಿಯೋ ಇದೆ. ಇದಕ್ಕೆ ನಾವು ನಮ್ಮ ನಾಯಕತ್ವ ಬೆಳೆಸದಿರುವುದೇ ಕಾರಣ, ಡಾ.ಜಿ ಪರಮೇಶ್ವರ್, ಖರ್ಗೆ ಅವರಾಗಲಿ, ನಾನಾಗಲಿ ನೀತಿ ರೂಪಿಸುವ ಜಾಗದಲ್ಲಿ ಇಲ್ಲ. ನಾವು ಸಿಎಂ ಆಗಲಿಲ್ಲ, ಅಂಬೇಡ್ಕರ್ ಬಳಿಕ ಮತ್ತೊಬ್ಬ ದಲಿತ ನಾಯಕ ಸಿಗಲಿಲ್ಲ. ಕರ್ನಾಟಕದಲ್ಲಿ ಪ್ರಭಾವಿ ದಲಿತ ನಾಯಕರಿದ್ದರೂ ಸಿಎಂ ಸ್ಥಾನ ಸಿಗಲಿಲ್ಲ. ಆದರೂ ನಮ್ಮ ಪ್ರಭಾವ ಬಳಸಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಹಾಗೂ ಮುಂಬಡ್ತಿ ಮೀಸಲಾತಿ ಸೇರಿದಂತೆ ಕೆಲ ಐತಿಹಾಸಿಕ ತೀರ್ಮಾನ ಮಾಡಿಸಿದ್ದೇವೆ. ಇದು ಇವತ್ತಿನ ದೇಶದ ರಾಜಕೀಯ ಸನ್ನಿವೇಶ ಮಹಾದೇವಪ್ಪ ಹೇಳಿದ್ದಾರೆ.
ಸಚಿವ ಹೆಚ್.ಸಿ ಮಹಾದೇವಪ್ಪ ಹೇಳಿಕೆಗೆ ಗದಗದಲ್ಲಿ ಸಚಿವ ಪ್ರೀಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಸದ್ಯಕ್ಕೆ ಅವೆಲ್ಲ ಅಪ್ರಸ್ತುತ ಚರ್ಚೆ. ಸಿದ್ದರಾಮಯ್ಯ ನಮ್ಮ ಸಿಎಂ. ಸಿಎಂ, ಡಿಸಿಎಂ ನೇತೃತ್ವದಲ್ಲಿ ನಮ್ಮ ಸರ್ಕಾರ ನಡೆಯುತ್ತಿದೆ. ಗ್ಯಾರಂಟಿ ಜನರಿಗೆ ಕೊಟ್ಟಿದ್ದೇವೆ. 4 ಕೋಟಿ ಜನ ಸವಲತ್ತು ಪಡೀತಿದ್ದಾರೆ. 136 ಶಾಸಕರು ಆಯ್ಕೆಯಾಗಿ ಬಂದಿದ್ದೇವೆ ಎಂದಿದ್ದಾರೆ.
https://www.janataa24.com/bjp_ticket-activ…omanna-in-tumkur/