Janataa24 NEWS DESK

ಗುಬ್ಬಿ: ಡಾ ಬಿ ಆರ್ ಅಂಬೇಡ್ಕರ್ ರವರು ಬರೆದಿರುವ ಸಂವಿಧಾನದಲ್ಲಿ ಸರ್ವರಿಗೂ ಸಮಪಾಲು ಸರ್ವರಿಗೂ ಸಮ ಬಾಳು ಎಂದು ಶಾಸಕ ಎಸ್ ಆರ್ ಶ್ರೀನಿವಾಸ್ ತಿಳಿಸಿದರು.
ಪಟ್ಟಣದಲ್ಲಿ ಜಿಲ್ಲಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ಸಂವಿಧಾನ ಜಾಗೃತಿ ಜಾಥಾ ಗೆ ಚಾಲನೆ ನೀಡಿ ಮಾತನಾಡಿದ ಅವರು

ಭಾರತ ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಿದ್ದು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಒದಗಿಸಲಾಗಿದೆ ಪ್ರತಿಯೊಬ್ಬರಿಗೂ ಸಂವಿಧಾನದ ಅರಿವು ಮತ್ತು ಜಾಗೃತಿ ಇರಬೇಕು.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು ಸಂವಿಧಾನ ಜಾಗೃತಿ ಜಾತಾಗೆ ಅದ್ದೂರಿ ಚಾಲನೆ ದೊರೆತಿದೆ. ಪಟ್ಟಣ ಸೇರಿದಂತೆ ತಾಲೂಕಿನ 34 ಗ್ರಾಮ ಪಂಚಾಯಿತಿಗಳಲ್ಲೂ ಸಾಂವಿಧಾನ ಜಾಗೃತಿ ಜಾಥಾ ತೆರಳಲಿದೆ.

ಎಲ್ಲರೂ ಸಂವಿಧಾನ ಜಾಗೃತಿ ಜಾಥಾದಲ್ಲಿ ಭಾಗವಹಿಸಿ ಸಂವಿಧಾನದ ಅರಿವು ಬೆಳೆಸಿಕೊಳ್ಳಬೇಕು ಎಂದರು. ಶೋಷಿತ ಸಮುದಾಯಗಳು ಶೈಕ್ಷಣಿಕವಾಗಿ, ಆರ್ಥಿಕವಾಗಿ. ರಾಜಕೀಯವಾಗಿ ಸಬಲರಾಗಲು ಅಂಬೇಡ್ಕರ್ ಬರೆದ ಸಂವಿಧಾನದಿಂದ ಸಾಧ್ಯವಾಗಿದೆ ಎಂದರು. ಹಾಗೂ ಎಲ್ಲರಿಗೂ ಸಂವಿಧಾನ ಪೀಠಿಕೆಯನ್ನು ಬೋಧಿಸಲಾಯಿತು ಮಹಿಳೆಯರ ಕುಂಭ ಮತ್ತು ಸಾಂಸ್ಕೃತಿಕ ಕಲಾ ತಂಡದೊಂದಿಗೆ ಪಟ್ಟಣ ಸೇರಿದಂತೆ ಜಿ ಹೊಸಹಳ್ಳಿ, ಗ್ರಾಮಕ್ಕೆ ಸಂವಿಧಾನ ಜಾಗೃತಿ ರಥವು ಸಾಗಿತು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಬಿ ಆರತಿ ,ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ವೀಣಾ, ತಾಪಂ ಕಾರ್ಯನಿರ್ವಣಾಧಿಕಾರಿ ಪರಮೇಶ್ ಕುಮಾರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಪಟ್ಟಣ ಪಂಚಾಯತಿ ಸದಸ್ಯರು, ಗ್ರಾಪಂ ಸದಸ್ಯರು,ವಿವಿಧ ಸಂಘಟನೆಗಳ ಮುಖಂಡರು ಹಾರಿದ್ದರು.
ಪಟ್ಟಣದಿಂದ ಹೊರಟ ಸಂವಿಧಾನ ಜಾಗೃತಿ ಜಾಥ ರಥವನ್ನು ಜಿ ಹೊಸಳ್ಳಿ ಗ್ರಾಮ ಪಂಚಾಯಿತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಭಾಗ್ಯಮ್ಮ ನರಸಿಂಹರಾಜು,ಉಪಾಧ್ಯಕ್ಷರು ಮಹಾಲಕ್ಷ್ಮಿ ರವೀಶ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಭಾನುಮತಿ ರೇಣುಕಾ ಪ್ರಸಾದ್ ವಿದ್ಯಾಸಾಗರ, ಹರ್ಷನ್, ವೆಂಕಟೇಶ್ ಮಂಜಣ್ಣ, ನರಸಿಂಹಮೂರ್ತಿ,ಬಸವರಾಜು, ಪರಮೇಶ್, ಮೋಹನ್, ಶ್ರೀಧರ್, ಶ್ರೀನಿವಾಸ್, ಕೃಷ್ಣಮೂರ್ತಿ,ಚಿಕ್ಕಮ್ಮ ಆಟೋ ರಾಮಕೃಷ್ಣಪ್ಪ ಮುಂತಾದವರಿದ್ದರು.

ವರದಿ
ಗುಬ್ಬಿ: ಶ್ರೀಕಾಂತ್