JANATAA24 NEWS DESK
Gold Theft: ಸತ್ತವರ ಮೈ ಮೇಲಿದ್ದ ಒಡವೆಯನ್ನು ಬಿಡದೆ ದೋಚಿದ ದರೋಡೆಕೋರರು.

ಕೊಲ್ಲೂರು: ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಶ*ವದ ಮೈಮೇಲಿದ್ದ ಚಿನ್ನಾಭರಣಗಳನ್ನು ಕಿಡಿಗೇಡಿಗಳು ಲಪಟಾಯಿಸಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ.
ಕಳೆದ ಮೇ 17 ರಂದು ಕೇರಳ ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಜೀಪಿಗೆ, ಕೊಲ್ಲೂರಿನ ದಳಿ ಎಂಬಲ್ಲಿ ಮೀನು ಸಾಗಾಟದ ಇನ್ಸುಲೇಟರ್ ವಾಹನ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಜೀಪಿನಲ್ಲಿದ್ದ ಎಂಟು ಮಂದಿ ಗಾಯಗೊಂಡಿದ್ದು, ಕೇರಳ ಮೂಲದ ಜ್ಯೋತಿ ಮತ್ತು ಅರಿಯಾ ಅನೂಫ್ ಎಂಬಿಬ್ಬರು ಮೃತಪಟ್ಟಿದ್ದರು.
ಅಪಘಾತ ಸಂಭವಿಸಿದ ವೇಳೆ ಸ್ಥಳದಲ್ಲಿ ಉಂಟಾಗಿದ್ದ ಗೊಂದಲ ಮತ್ತು ಆಕ್ರಂದನವನ್ನೇ ಬಂಡವಾಳ ಮಾಡಿಕೊಂಡ ಕಳ್ಳರು, ಮೃತ ಮಹಿಳೆ ಜ್ಯೋತಿ ಅವರ ಮೈಮೇಲಿದ್ದ ಸುಮಾರು 18 ಗ್ರಾಂ ತೂಕದ ಚಿನ್ನದ ಆಭರಣ ಕಳ್ಳತನ ಮಾಡಿದ್ದಾರೆ. ಅಪಘಾತ ನಡೆದ ಸ್ಥಳದಿಂದ ಶವವನ್ನು ಸಾಗಿಸುವ ಸಂದರ್ಭದಲ್ಲೇ ಈ ಕೃತ್ಯ ನಡೆದಿದೆ.
ಘಟನೆ ನಡೆದು ಒಂದು ವಾರ ಕಳೆದ ಬಳಿಕ, ಮೃತ ಜ್ಯೋತಿ ಅವರ ಕುಟುಂಬಸ್ಥರು ಮೈಮೇಲಿದ್ದ ಒಡವೆಗಳು ಕಾಣೆಯಾಗಿರುವುದನ್ನು ಗಮನಿಸಿದ್ದಾರೆ. ಈ ಸಂಬಂಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೃತದೇಹದ ಮೇಲಿದ್ದ ಆಭರಣಗಳನ್ನು ಕಳವು ಮಾಡಿರುವ ಈ ಅಮಾನವೀಯ ಕೃತ್ಯದ ಬಗ್ಗೆ ಸ್ಥಳೀಯರು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ಮತ್ತು ಬೇಸರ ವ್ಯಕ್ತಪಡಿಸಿದ್ದಾರೆ. ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡಬೇಕಾದ ಸಮಯದಲ್ಲಿ ಮೃತದೇಹದಿಂದಲೇ ಒಡವೆ ಕದ್ದಿರುವ ಕಿಡಿಗೇಡಿಗಳನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.