Janataa24 NEWS DESK
Gubbi: ಗ್ರಾಮಗಳಲ್ಲಿ ಗ್ರಂಥಾಲಯ ತೆರೆದರೆ ಪ್ರತಿ ಮನೆಗಳಲ್ಲಿಯೂ ಅಂಬೇಡ್ಕರ್ ಜನಿಸುತ್ತಾರೆ.


ಗುಬ್ಬಿ : ಪ್ರತಿಯೊಂದು ಗ್ರಾಮದಲ್ಲೂ ಗ್ರಂಥಾಲಯಗಳನ್ನು ತೆರೆದಾಗ ವಿದ್ಯಾವಂತರ ಸಂಖ್ಯೆ ಹೆಚ್ಚುತ್ತದೆ, ಮನೆಗೊಬ್ಬ ಅಂಬೇಡ್ಕರ್ ಹುಟ್ಟುತ್ತಾರೆ ಎಂದು ತುಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್ ತಿಳಿಸಿದರು
ತಾಲೂಕಿನ ಚೇಳುರು ಹೋಬಳಿಯ ಕೊಡಿಯಾಲ ಗ್ರಾಮದಲ್ಲಿ ಡಾ. ಬಿ ಆರ್ ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಹಾಗೂ ನಾಮಫಲಕವನ್ನು ಉದ್ಘಾಟಿಸಿ ಮಾತನಾಡಿದ ಅವರು
ಗ್ರಾಮೀಣ ಪ್ರದೇಶದಲ್ಲಿ ಶೋಷಿತ ಸಮುದಾಯಗಳು ಮೌಢ್ಯತೆಯಿಂದ ಹೊರ ಬಂದು ದೇವಾಲಯಗಳನ್ನು ಕಟ್ಟುವ ಬದಲು ಗ್ರಂಥಾಲಯಗಳನ್ನು ಸ್ಥಾಪನೆ ಮಾಡಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದರೆ ನವ ಸಮಾಜ ನಿರ್ಮಾಣವಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿದ್ದು ಇದರಿಂದ ಹೊರಬಂದು ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಬೇಕು ಶಿಕ್ಷಣದಿಂದ ಸದೃಢ ಗ್ರಾಮ ಹಾಗೂ ಸದೃಢ ರಾಷ್ಟ್ರ ಹಾಗೂ ಸಮಸಮಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಉಪನ್ಯಾಸಕ ಡಾ ಕೆಂಪರಾಜು ಮಾತನಾಡಿ ನೂರಾರು ವರ್ಷಗಳಿಂದ ತುಳಿತಕ್ಕೆ ಒಳಗಾದ ಶೋಷಿತ ಸಮುದಾಯವು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಬುದ್ಧ, ಬಸವ, ಅಂಬೇಡ್ಕರ್, ಜ್ಯೋತಿಬಾಪುಲೆ ವಿಚಾರಧಾರೆಗಳನ್ನು ಓದುವ ಮೂಲಕ ಆರೋಗ್ಯವಂತ ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಡಿಎಸ್ಎಸ್ ತಾಲೂಕು ಸಂಚಾಲಕ ಚೇಳೂರು ಶಿವನಂಜಪ್ಪ, ದಲಿತ ಮುಖಂಡ ಕೊಡಿಯಾಲ ಮಾದೇವ, ದೊಡ್ಡಗುಣಿ ಕೀರ್ತಿರಾಜ್, ಬಸವರಾಜು, ಮುಖಂಡರಾದ ಅರೇಹಳ್ಳಿ ಮಂಜುನಾಥ್, ಪದ್ಮ, ರಾಮಕೃಷ್ಣಯ್ಯ, ರಮೇಶ್, ನರಸಿಂಹಮೂರ್ತಿ ಸೇರಿದಂತೆ ಇತರರು ಹಾಜರಿದ್ದರು.
ವರದಿ :ಶ್ರೀಕಾಂತ್ ಗುಬ್ಬಿ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.