Janataa24 NEWS DESK
Gubbi: ಬೆಲವತ್ತ ಗ್ರಾ,ಪಂ, ನೂತನ ಅಧ್ಯಕ್ಷರಾಗಿ ಲತಾದಯಾನಂದ್ ಉಪಾಧ್ಯಕ್ಷರಾಗಿ ಆನಂದ್ ಕುಮಾರ್ ಅವಿರೋಧ ಆಯ್ಕೆ.


ಗುಬ್ಬಿ: ತಾಲ್ಲೂಕಿನ ಕಡಬ ಹೋಬಳಿಯ ಬೆಲವತ್ತ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ
ಶಿವಗಂಗಮ್ಮ ರಾಜೀನಾಮೆ ನೀಡಿ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆದು
ನೂತನ ಅಧ್ಯಕ್ಷರಾಗಿ
ಲತಾದಯಾನಂದ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕೆಟಿಆರ್ ಸ್ವಾಮಿ ರಾಜಿನಾಮೆ ನೀಡಿ ತೆರವಾಗಿದ್ದ ಸ್ಥಾನಕ್ಕೆ ಆನಂದ್ ಕುಮಾರ್ ಅವಿರೋಧವಾಗಿ ಆಯ್ಕೆಯಾದರು.
ನೂತನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾದಯನಂದ್
ಮಾತನಾಡಿ ಸರ್ವ ಸದಸ್ಯರ ಸಹಕಾರದಿಂದ ಗ್ರಾಪಂ ಅಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದೇನೆ.
ಕುಡಿಯುವ ನೀರು, ಗ್ರಾಮ ನೈರ್ಮಲ್ಯ, ಚರಂಡಿ ಸ್ವಚ್ಛತೆ, ಬೀದಿದೀಪ ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತೇನೆ ಎಂದ ಅವರು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತೇನೆ.
ಗ್ರಾಪಂ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸುತ್ತೇನೆ. ತಾಲೂಕಿನಲ್ಲಿ ಮಾದರಿ ಗ್ರಾಮ ಪಂಚಾಯತಿಯನ್ನಾಗಿ ಮಾಡುತ್ತೇನೆ
ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ನೂತನ ಉಪಾಧ್ಯಕ್ಷ ಆನಂದ್ ಕುಮಾರ್ ಮಾತನಾಡಿ ಗ್ರಾಮ ಪಂಚಾಯಿತಿಯ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಇನ್ನೂ ಉಳಿದಿರುವ ಜೆಜೆಎಂ ಕಾಮಗಾರಿಯನ್ನು ಪೂರ್ಣಗೊಳಿಸಿ ಗ್ರಾಮೀಣ ಭಾಗದ ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸಲಾಗುವುದು ಎಂದು ತಿಳಿಸಿದರು.
ಈ ವೇಳೆ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು. ಮುಖಂಡರು ಶುಭ ಕೋರಿದರು.
ಈ ಸಂದರ್ಭದಲ್ಲಿ ಪಿಡಿಒ ಸಿದ್ದರಾಜು, ಗ್ರಾಮ ಪಂಚಾಯಿತಿ ಸರ್ವ ಸದಸ್ಯರು, ಮುಖಂಡರಾದ ಚಂದ್ರಶೇಖರ್ ಬಾಬು, ಪ ಪಂ ಸದಸ್ಯ ಕೃಷ್ಣಮೂರ್ತಿ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.
ವರದಿ: ಶ್ರೀಕಾಂತ್ ಗುಬ್ಬಿ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/iasipskas-who-stood-as-the-godfather-of-the/
https://www.janataa24.com/miscreants-uprooted-40-coconut-trees-turuvekere/
Mandya: ಪತ್ನಿ ನೇಣಿಗೆ ಶರಣಾದದನ್ನು ಕಂಡು ಕೆರೆಗೆ ಹಾರಿ ಪ್ರಾಣ ಬಿಟ್ಟ ಪತಿ.