Gubbi: ಶಕ್ತಿ ಯೋಜನೆಗೆ 2 ವರ್ಷ–ಕೇಕ್ ಕತ್ತರಿಸಿ ಸಂಭ್ರಮ ಆಚರಿಸಿದ ಭಾರತಿ ಶ್ರೀನಿವಾಸ್.

Janataa24 NEWS DESK 

 

Gubbi: ಶಕ್ತಿ ಯೋಜನೆಗೆ 2 ವರ್ಷ–ಕೇಕ್ ಕತ್ತರಿಸಿ ಸಂಭ್ರಮ ಆಚರಿಸಿದ ಭಾರತಿ ಶ್ರೀನಿವಾಸ್.
Gubbi
ಗುಬ್ಬಿ : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯದ ಶಕ್ತಿ ಯೋಜನೆಗೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆಯ ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಜೀವನ ನಡೆಸಲು ಸಹಕಾರಿಯಾಗಿದೆ ಎಂದು ತುಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್ ತಿಳಿಸಿದರು.

 

ಪಟ್ಟಣದ ಕೆ,ಎಸ್,ಆರ್‌,ಟಿ,ಸಿ ಬಸ್ ನಿಲ್ದಾಣದಲ್ಲಿ ಕೇಕ್ ಕತ್ತರಿಸಿ ಉಚಿತ ದರದ ಬಸ್ ಟಿಕೆಟ್ ಪಡೆದು ನಗರ ಸಂಚಾರ ಮಾಡಿ ಮಾತನಾಡಿದ ಅವರು ಕೆ ಎಸ್ ಆರ್ ಟಿ ಸಿ ಮತ್ತು ಬಿಎಂಟಿಸಿ ಸೇರಿದಂತೆ ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವ ಶಕ್ತಿ ಯೋಜನೆ ಪ್ರಯಣ ಮಾಡಿದ ಮಹಿಳೆಯರ ಸಂಖ್ಯೆ 500 ಕೋಟಿಗೆ ತಲುಪಿದೆ ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದ ಸರ್ಕಾರವಾಗಿದ್ದು ಶಕ್ತಿ ಯೋಜನೆಯಲ್ಲಿ ಬಡವರು ಸೇರಿದಂತೆ ಎಲ್ಲಾ ವರ್ಗದ ಮಹಿಳೆಯರು ಉಚಿತ ಟಿಕೆಟ್ ಪಡೆದು ಪ್ರಯಾಣಿಸುತ್ತಿದ್ದಾರೆ ದುಡಿಯುವ ಮಹಿಳೆಯರು , ವಿದ್ಯಾರ್ಥಿನಿಯರು, ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ ಶಕ್ತಿ ಯೋಜನೆಯಿಂದಾಗಿ ರಾಜ್ಯದ ಪ್ರವಾಸಿ ತಾಣಗಳು ಮತ್ತು ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಾಗಿದೆ ಈ ಯೋಜನೆ ರಾಷ್ಟ್ರಕ್ಕೆ ಮಾದರಿಯಾಗಿದೆ ಎಂದರು

 

ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೋಕು ಅಧ್ಯಕ್ಷ ಕೆ. ಆರ್. ವೆಂಕಟೇಶ್ ಮಾತನಾಡಿ ಕಾಂಗ್ರೆಸ್ ಸರ್ಕಾರವು 2023ರಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ

ಆ ಪೈಕಿ ಶಕ್ತಿ ಯೋಜನೆಯ ಒಂದಾಗಿದ್ದು ಸರ್ಕಾರ ಅಧಿಕಾರಕ್ಕೆ ಬಂದ ಒಂದುವರೆ ತಿಂಗಳಿನಲ್ಲಿ ಈ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದು ಈ ಯೋಜನೆಯಿಂದಾಗಿ ಮಹಿಳೆಯರು ಆರ್ಥಿಕ ಪ್ರಗತಿಯತ್ತ ಸಾಗಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

 

ಈ ಸಂದರ್ಭದಲ್ಲಿ ತಹಶೀಲ್ದಾರ್ ಆರತಿ ಬಿ,ಪ, ಪಂ,ಅಧ್ಯಕ್ಷೆ ಆಯಿಷ ತಾಸಿನ್, ಉಪಾಧ್ಯಕ್ಷೇ ಶ್ವೇತಾ , ಪ,ಪಂ,ಮುಖ್ಯ ಅಧಿಕಾರಿ ಮಂಜುಳಾದೇವಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಜಗನ್ನಾಥ್, ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರು, ಸೇರಿದಂತೆ ಸಾರ್ವಜನಿಕರು ಪ್ರಯಾಣಿಕರು ಹಾಜರಿದ್ದರು.

 

ವರದಿ :ಶ್ರೀಕಾಂತ್ ಗುಬ್ಬಿ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Leave a Reply

Your email address will not be published. Required fields are marked *