Document

Gubbi: ಹೇಮೆ ನೀರು ಹರಿಸುವಂತೆ ಬಿಜೆಪಿ ಮುಖಂಡರ ಒತ್ತಾಯ.

JANATAA24 NEWS DESK 

 

 

Gubbi: ಹೇಮೆ ನೀರು ಹರಿಸುವಂತೆ ಬಿಜೆಪಿ ಮುಖಂಡರ ಒತ್ತಾಯ.

 

Gubbi

ಗುಬ್ಬಿ : ತಾಲೂಕಿನಲ್ಲಿ ಕುಡಿಯುವ ನೀರಿಗೆ ತೀವ್ರ ಹಾಹಾಕಾರ ಎದುರಾಗಿದ್ದು ಕೂಡಲೇ ಸರ್ಕಾರ ಎಚ್ಚೆತ್ತು ಜಿಲ್ಲೆಗೆ ಹೇಮೆ ನೀರು ಹರಿಸುವಂತೆ ಬಿಜೆಪಿ ಮುಖಂಡರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಒತ್ತಾಯಿಸಿದರು.

 

ಬಿಜೆಪಿ ಮುಖಂಡ ಎಸ್ ಡಿ ದಿಲೀಪ್ ಕುಮಾರ್ ಮಾತನಾಡಿ ಜಿಲ್ಲೆಯಲ್ಲಿ ಭೀಕರ ಬರಗಾಲ ಎದುರಾಗಿದ್ದು ಕುಡಿಯುವ ನೀರಿಗೂ ತತ್ವಾರ ಉಂಟಾಗಿದೆ. ಪ್ರತಿ ವರ್ಷವೂ ಜೂನ್ ಒಂದರ ಒಳಗೆ ಗೋರೂರು ಜಲಾಶಯದಿಂದ ಹೇಮಾವತಿ ನೀರನ್ನು ಜಿಲ್ಲೆಗೆ ಹರಿಸಲಾಗುತ್ತಿತ್ತು. ಆದರೆ ಈ ಬಾರಿ ಮಳೆಯ ಅಭಾವ ಉಂಟಾಗಿದ್ದು ಹೇಮೆ ನೀರು ತಡ ಮಾಡಿರುವುದರಿಂದ ಕುಡಿಯುವ ನೀರಿಗೆ ತೀವ್ರ ಸಮಸ್ಯೆ ಎದುರಾಗಿದೆ ಮಾನ್ಯ ಮುಖ್ಯಮಂತ್ರಿಗಳು ಸಚಿವ ಸಂಪುಟ ವಿಸ್ತರಣೆಯಲ್ಲಿ ನಿರತರಾಗಿದ್ದು ಜಿಲ್ಲೆಯ ಹಿತ ಕಾಪಾಡುವಲ್ಲಿ ವಿಫಲರಾಗಿದ್ದಾರೆ. ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಜನರ ಹಿತ ಕಾಯಬೇಕು ಹಾಗೂ ಕೂಡಲೇ ಹೇಮಾವತಿ ನೀರನ್ನು ಹರಿಸಬೇಕು ಕುಡಿಯುವ ನೀರಿಗೆ ಅನುಕೂಲ ಮಾಡಿಕೊಡಬೇಕು ಇಲ್ಲದೆ ಹೋದಲ್ಲಿ ಜಿಲ್ಲಾ ಮತ್ತು ತಾಲ್ಲೂಕಿನಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

 

ಬಿಜೆಪಿ ತಾಲ್ಲೂಕು ಅಧ್ಯಕ್ಷ ಬಲರಾಮ್ ಮಾತನಾಡಿ ಈ ವರ್ಷ ಬರದ ಛಾಯೆ ಆವರಿಸಿರುವುದರಿಂದ ಕುಡಿಯುವ ನೀರಿಗೂ ಸಮಸ್ಯೆಯಾಗುತ್ತಿದೆ. ಜನ ಜಾನುವಾರುಗಳಿಗೂ ಇದರ ಬಿಸಿ ತಟ್ಟಿದೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಶಾಸಕರು ತಾಲೂಕಿನ ಎಲ್ಲಾ ಕೆರೆಗಳಿಗೂ ನೀರು ತುಂಬಿಸುವ ಮೂಲಕ ಕುಡಿಯುವ ನೀರಿಗೆ ಅನುಕೂಲ ಮಾಡಿಕೊಡಬೇಕು ಎಂದರು.

 

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪಂಚಾಕ್ಷರಿ ಮಾತನಾಡಿ ಜೂನ್ ಮೊದಲ ವಾರದಲ್ಲಿಯೇ ಗೋರೂರು ಜಲಾಶಯದಿಂದ ತುಮಕೂರಿಗೆ ಹೇಮಾವತಿ ನೀರು ಬಿಡಲಾಗುತ್ತಿತ್ತು ಆದರೆ ಈ ಬಾರಿ ಆಗಸ್ಟ್ ಮೊದಲ ವಾರ ಆದರೂ ಇನ್ನೂ ನೀರು ಬಿಟ್ಟಿಲ್ಲ ಈಗಾಗಲೇ ಹೇಮಾವತಿ ಜಲಾಶಯದ ನೀರಿನ ಮಟ್ಟ ಅಧಿಕವಾಗಿದ್ದು ತುಮಕೂರು ಜಿಲ್ಲೆಗೆ ಮೀಸಲಾಗಿರುವ 24.5 ಟಿಎಂಸಿ ನೀರನ್ನು ಕುಡಿಯುವ ನೀರನ್ನು ಸರ್ಕಾರ ಕೂಡಲೇ ಜಿಲ್ಲೆಗೆ ಹರಿಸಬೇಕು ಎಂದು ಒತ್ತಾಯಿಸಿದರು.

 

ಬಿಜೆಪಿ ಮುಖಂಡ ಎಚ್ ಡಿ ಭೈರಪ್ಪ ಮಾತನಾಡಿ ಪಟ್ಟಣಕ್ಕೆ ಕುಡಿಯುವ ನೀರಿಗೆ ಪೂರಕವಾಗಿರುವ ಹೇರೂರು ಕೆರೆಯ ಒಡಲಾಳ ಬತ್ತಿ ಹೋಗಿದ್ದು ತಕ್ಷಣದಿಂದಲೇ ಕೆರೆಗೆ ನೀರನ್ನು ತುಂಬಿಸಬೇಕು ಹಾಗೂ ಸುತ್ತಮುತ್ತಲ ಕೆರೆಗಳಿಗೂ ನೀರು ತುಂಬಿಸಿ ಕೃಷಿ ಚಟುವಟಿಕೆಗಳಿಗೆ ನೀರು ಕೊಡಬೇಕು ಎಂದು ಆಗ್ರಹಿಸಿದರು.

 

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಸಾಗರನಹಳ್ಳಿ ನಂಜೇಗೌಡ, ಶಿವಕುಮಾರ್, ಬಿಕ್ಕೆಗುಡ್ಡ ವಿದ್ಯಾಸಾಗರ್, ಲೋಕೇಶ್, ತಿರುಮಲೇಶ್, ನಂದಿಕೋಲ್ ರವಿ, ಜಿ ಎನ್ ಅಣ್ಣಪ್ಪಸ್ವಾಮಿ ಸೇರಿದಂತೆ ಇತರರು ಹಾಜರಿದ್ದರು.

 

ವರದಿ :ಶ್ರೀಕಾಂತ್ ಗುಬ್ಬಿ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

https://www.janataa24.com/iasipskas-who-stood-as-the-godfather-of-the/

 

 

https://www.janataa24.com/miscreants-uprooted-40-coconut-trees-turuvekere/

 

 

https://www.janataa24.com/operation-sindor-pok-9-terrorist/

 

Document

Leave a Reply

Your email address will not be published. Required fields are marked *