Janataa24 NEWS DESK
Gubbi: ಏತ ನೀರಾವರಿ ಯೋಜನೆಗೆ DCM ಡಿಕೆ.ಶಿವಕುಮಾರ್ ಭೂಮಿ ಪೂಜೆ.
ಗುಬ್ಬಿ : ರೈತರು ಆತಂಕ ಪಡಬೇಡಿ ಎತ್ತಿನಹೊಳೆ ಯೋಜನೆಯಿಂದ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಜನರಿಗೆ ಕುಡಿಯುವ ನೀರಿಗೆ ಹಾಗೂ ರೈತರಿಗೆ ಅನುಕೂಲವಾಗಲಿದೆ ನನ್ನ ಕ್ಷೇತ್ರ ಬೇರೆ ಅಲ್ಲ ಶಾಸಕ ಎಸ್ ಆರ್ ಶ್ರೀನಿವಾಸ್ ಕ್ಷೇತ್ರ ಬೇರೆ ಅಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ತಿಳಿಸಿದರು.
ಗುಬ್ಬಿ ಹಾಗೂ ಶಿರಾ ಭಾಗದ 42 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಮಠದ ಹಳ್ಳ ಏತ ನೀರಾವರಿಗೆ 50 ಕೋಟಿ ರೂಗಳ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆದೇಶದಂತೆ ಕೋಲಾರ, ಚಿಕ್ಕಬಳ್ಳಾಪುರ ಜನತೆಗೆ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಎತ್ತಿನಹೊಳೆ ಯೋಜನೆಯನ್ನು ರೂಪಿಸಲಾಗಿದೆ. ಸರ್ಕಾರ ನಿರಂತರವಾಗಿ ರೈತರ ಹಿತ ಕಾಯಲು ಬದ್ಧವಾಗಿದ್ದು ಸಾರ್ವಜನಿಕರಿಗೆ ಅನುಕೂಲವಾಗುವ ಯೋಜನೆಗಳನ್ನು ರೂಪಿಸುತ್ತದೆ. ಇನ್ನೂ ಈ ಭಾಗದಲ್ಲಿ ಹಾಗಲವಾಡಿ, ಚೇಳೂರು ಭಾಗದ ಜನರಿಗೆ ಮಠದ ಹಳ್ಳ ಏತ ನೀರಾವರಿ ಅನುಕೂಲವಾಗಿದೆ. ದಶಕಗಳ ಹಿಂದೆ ಈ ಯೋಜನೆಯನ್ನು ರೂಪಿಸಿದ್ದರು. ಅವರ ದೂರ ದೃಷ್ಟಿಯಿಂದ ಈ ಯೋಜನೆಯ ಸಕಾರಗೊಂಡಿದ್ದು. ಈ ಭಾಗದ ರೈತರು ಇದರ ಸದುಪಯೋಗ ಪಡೆಯುತ್ತಾರೆ. ಇನ್ನೂ ಜನರು ಯಾವುದಕ್ಕೂ ಕಿವಿಗೊಡದೆ ಪಕ್ಷಾತೀತವಾಗಿ ಶಾಸಕ ಎಸ್ ಆರ್ ಶ್ರೀನಿವಾಸ್ ಅವರನ್ನು ಬೆಂಬಲಿಸುವ ಕೆಲಸ ಮಾಡಬೇಕು ನಾವು ನಿಮ್ಮ ಜೊತೆ ಇರುತ್ತೇವೆ ಎಂದು ತಿಳಿಸಿದರು.
ದೆಹಲಿಯ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ ಮಾತನಾಡಿ ಹೇಮಾವತಿ ನೀರಿನಿಂದ ತುಮಕೂರು ಜಿಲ್ಲೆಗೆ ಹಂಚಿಕೆಯಾಗಿರುವ 25 ಟಿಎಂಸಿ ನೀರನ್ನು ಹಿಂದಿನವರೆಗೂ ಪರಿಪೂರ್ಣವಾಗಿ ಹರಿಸಿಲ್ಲ. ಮಾನ್ಯ ಮುಖ್ಯಮಂತ್ರಿಗಳು 600 ಕೋಟಿ ವೆಚ್ಚದಲ್ಲಿ ಹೇಮಾವತಿ ನಾಲೆಯನ್ನು ನವೀಕರಣಗೊಳಿಸಿದ್ದು ಪೂರ್ಣ 25 ಟಿಎಂಸಿ ನೀರನ್ನು ಜಿಲ್ಲೆಗೆ ಬಿಡುವ ಮೂಲಕ ರೈತರ ಹಿತ ಕಾಯಬೇಕೆಂದು ಮನವಿ ಮಾಡಿದರು.
ಶಾಸಕ ಎಸ್ ಆರ್ ಶ್ರೀನಿವಾಸ್ ಮಾತನಾಡಿ ಈ ಭಾಗದ ರೈತರ ಸತತ 20 ವರ್ಷಗಳ ಹೋರಾಟದ ಫಲವಾಗಿ ಈ ಯೋಜನೆ ಸಾಕಾರಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಈ ಯೋಜನೆಯನ್ನು ಅನುಷ್ಠಾನ ಮಾಡುವ ಮೂಲಕ ಈ ಭಾಗದ ಜನರಿಗೆ ರೈತರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ನಾವು ಸರ್ಕಾರಕ್ಕೆ ಚಿರಋಣಿ ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕಿರಣ್ ಕುಮಾರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಶೇಖರ ಗೌಡ, ತಾಲ್ಲೂಕು ಅಧ್ಯಕ್ಷ ಕೆ ಆರ್ ವೆಂಕಟೇಶ್, ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.
ವರದಿ: ಶ್ರೀಕಾಂತ್ ಗುಬ್ಬಿ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.