Janataa24 NEWS DESK
Gubbi: ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ತಡೆದು ಪ್ರತಿಭಟನೆ.

ಗುಬ್ಬಿ: ಬೃಹತ್ ಪಾದಯಾತ್ರೆ ಮೂಲಕ ಸರ್ಕಾರದ ಗಮನ ಸೆಳೆದಿದ್ದ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ತುಮಕೂರು ಏನ್ ಡಿ ಎ ಶಾಸಕರು ಸಹ ಧನಿಯೆತ್ತಿದ್ದರು. ಸರ್ಕಾರವು ಇದರ ಬಗ್ಗೆ ಗಮನ ಹರಿಸಿದೆ ಸೋಮವಾರ ಕಾಮಗಾರಿಯನ್ನು ಆರಂಭಿಸಿದ್ದು ತುಮಕೂರು ಜಿಲ್ಲೆಯ ಪ್ರತಿಭಟನಕಾರರನ್ನು ಮತ್ತಷ್ಟು ಕೆರಳಿಸಿ ಹೋರಾಟದ ಬಿಸಿ ಮತ್ತಷ್ಟು ಹೆಚ್ಚಾಗಿದೆ.
ತಾಲೂಕಿನ ಸುಂಕಾಪುರದ ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧದ ನಡುವೆಯೂ ಆರಂಬಿಸಿದ ಹಿನ್ನಲೆಯಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ನೇತೃತ್ವದಲ್ಲಿ ಕೆಲಸ ಮಾಡುತ್ತಿರುವ ಜೆಸಿಬಿ, ಹಿಟಾಚಿಗಳನ್ನು ಹೊರತೆಗೆಸುವ ಮೂಲಕ ಯಾವುದೇ ಕಾರಣಕ್ಕೂ ಕಾಮಗಾರಿ ಮಾಡಲು ಬಿಡುವುದಿಲ್ಲ ಎಂದು ಏನ್ ಡಿ ಎ ಮುಖಂಡರು ಪಟ್ಟು ಹಿಡಿದರು.
ಮಾಜಿ ಸಚಿವ ಸೊಗಡು ಶಿವಣ್ಣ ಮಾತನಾಡಿ ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕಾಮಗಾರಿಯನ್ನು ನಡೆಸಲು ಸಂಬಂಧಪಟ್ಟ ಯಾವುದೇ ಇಲಾಖೆ ಅನುಮತಿ ಪಡೆಯದೆ ಕಾಮಗಾರಿಯನ್ನು ನಡೆಸುತ್ತಿರು ವುದು ಅಕ್ಷಮ್ಯ ಅಪರಾಧ ನೀರಾವರಿ ಸಚಿವರು ಪೊಲೀಸರನ್ನು ಮುಂದಿಟ್ಟುಕೊಂಡು ಕಾಮಗಾರಿಯನ್ನು ಮುಂದುವರಿಸಲು ಪ್ರಯತ್ನಿಸುತ್ತಿದ್ದು ತುಮಕೂರು ಜಿಲ್ಲೆಗೆ ಮರಣ ಶಾಸನವಾದ ಎಕ್ಸ್ಪ್ರೆಸ್ ಲಿಂಕ್ ಕಾಮಗಾರಿಯನ್ನು ಯಾವುದೇ ಕಾರಣಕ್ಕೂಕಾಮಗಾರಿ ನಡೆಸಲು ಬಿಡುವುದಿಲ್ಲ ಎಂದು ಕಿಡಿ ಕಾರಿದರು.
ಬಿಜೆಪಿ ಮುಖಂಡ ಎಸ್ ಡಿ ದಿಲೀಪ್ ಕುಮಾರ್ ಮಾತನಾಡಿ ಸರ್ಕಾರವು ಪಿಡಬ್ಲ್ಯೂಡಿ ಇಲಾಖೆ ಮುಜರಾಯಿ ಇಲಾಖೆ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯಿತಿ ಇಲಾಖೆಗಳಿಂದ ರಸ್ತೆ ತೆರವಿಗೆ ಅನುಮತಿ ಪಡೆಯದೆ ಕಾನೂನು ಬಾಹಿರವಾಗಿ ಎಕ್ಸ್ಪ್ರೆಸ್ ಲಿಂಕ್ ಕಾಮಗಾರಿಯನ್ನು ನಡೆಸುತ್ತಿರುವುದು ಕಾನೂನಿನ ದೃಷ್ಟಿಯಲ್ಲಿ ಅಪರಾಧವಾಗಿದೆ.
ತುಮಕೂರು ಜಿಲ್ಲೆಗೆ ಮರಣ ಶಾಸನ ಬರೆಯಲು ಮಾನ್ಯ ನೀರಾವರಿ ಸಚಿವರಾದ ಡಿಕೆ ಶಿವಕುಮಾರ್ ರವರು ಈ ಕಾಮಗಾರಿಯನ್ನು ನಡೆಸಲು ಸರ್ಕಾರದಲ್ಲಿ ಉನಾರ ಮಾಡುತ್ತಿದ್ದಾರೆ.ಕಾಮಗಾರಿಯನ್ನು ಪ್ರಾರಂಭಿಸಿದರೆ ಹೋರಾಟವು ತೀವ್ರ ಸ್ವರೂಪ ಪಡೆದುಕೊಳ್ಳುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ನೂರಕ್ಕೂ ಹೆಚ್ಚು ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿದ್ದರು.
ಪ್ರತಿಭಟನೆಯಲ್ಲಿ ಪಂಚಾಕ್ಷರಿ, ಸಾಗರನಹಳ್ಳಿ ವಿಜಯ್ ಕುಮಾರ್, ಎನ್ ಸಿ ಪ್ರಕಾಶ್,ಚಂದ್ರಶೇಖರ್ ಬಾಬು, ಲೊಕೇಶ್, ಯತೀಶ್, ವಿದ್ಯಾ ಸಾಗರ್, ಶಿವ ಶಂಕರ ಬಾಬು,ಸೇರಿದಂತೆ ನೂರಾರು ರೈತರುಭಾಗಿಯಾಗಿದ್ದರು.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/iasipskas-who-stood-as-the-godfather-of-the/
https://www.janataa24.com/miscreants-uprooted-40-coconut-trees-turuvekere/
Mandya: ಪತ್ನಿ ನೇಣಿಗೆ ಶರಣಾದದನ್ನು ಕಂಡು ಕೆರೆಗೆ ಹಾರಿ ಪ್ರಾಣ ಬಿಟ್ಟ ಪತಿ.