Janataa24 NEWS DESK
Gubbi: ದೊಡ್ಡನೆಟ್ಟಕುಂಟೆ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಜಾತಿ ತಾರತಮ್ಯ– ಮಹಿಳೆಯರಿಂದ ನೇರ ಆರೋಪ.
ಗುಬ್ಬಿ: ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಜಾತಿ ತಾರತಮ್ಯ ಮಾಡುತ್ತಿದ್ದಾರೆ ಎಂದು ದೊಡ್ಡನೆಟ್ಟಕುಂಟೆ ಮಹಿಳಾ ಮಹಿಳಾ ಹಾಲು ಉತ್ಪಾದಕ ಸಹಕಾರ ಸಂಘದ ಸದಸ್ಯರು ನೇರ ಆರೋಪ ಎಸಗಿದ್ದರು.
ತಾಲೂಕಿನ ಕಸಬಾ ಹೋಬಳಿಯ ದೊಡ್ಡ ನಟ್ಟ ಕುಂಟೆ ಗ್ರಾಮದಲ್ಲಿ ಮಹಿಳಾ ಹಾಲು ಉತ್ಪಾದಕ ಸಹಕಾರ ಸಂಘದ ಕಾರ್ಯದರ್ಶಿ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಮಹಿಳಾ ಹಾಲು ಉತ್ಪಾದಕರ ಸಂಘದ ಕಚೇರಿಯಲ್ಲಿ ಅಧ್ಯಕ್ಷರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಇತರೆ ಸಮುದಾಯಗಳ ನಾಲ್ಕು ಅರ್ಜಿಗಳು ಬಂದಿದ್ದು ಸಂಘದ ಅಧ್ಯಕ್ಷರು ಹಾಲು ಪರೀಕ್ಷಿ ಹಾಗೂ,
ಕಾರ್ಯದರ್ಶಿಯನ್ನು ಒಂದೇ ಸಮುದಾಯದವರು ಆಯ್ಕೆ ಮಾಡಿಕೊಳ್ಳುವ ಮೂಲಕ ಹಿಂದುಳಿದ ಸಮುದಾಯಗಳಿಗೆ ಜಾತಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಶೈಲಜಾ ನೇರ ಆರೋಪ ಮಾಡಿದರು.
ಗ್ರಾಮದ ಜ್ಯೋತಿ ಮಾತನಾಡಿ ಎಸ್ ಟಿ ಸಮುದಾಯದಲ್ಲಿ ಉನ್ನತ ವ್ಯಾಸಂಗ ಮಾಡಿದವರು ಅನೇಕ ಜನರಿದ್ದು ಕಾರ್ಯದರ್ಶಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿರುತ್ತಾರೆ. ಆದರೆ ಜಾತಿ ಮತ್ತು ರಾಜಕೀಯ ತಾರತಮ್ಯವನ್ನು ಬೆರೆಸಿ ಅಧ್ಯಕ್ಷರು ಕಾರ್ಯದರ್ಶಿ ಹುದ್ದೆಗೆ ಮೇಲ್ಜಾತಿಯವರನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು .
ಈ ಸಂದರ್ಭದಲ್ಲಿ ಸೌಮ್ಯ, ಶೋಭಾ, ಗ್ರಾಮಸ್ಥರು ಹಾಜರಿದ್ದರು.
ವರದಿ :ಶ್ರೀಕಾಂತ್ ಗುಬ್ಬಿ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.