Document

Gubbi: ಕೊಂಡ್ಲಿ ಗ್ರಾ, ಪಂ,ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಬಿಜೆಪಿ ತೆಕ್ಕೆಗೆ.

Janataa24 NEWS DESK 

 

Gubbi: ಕೊಂಡ್ಲಿ ಗ್ರಾ, ಪಂ,ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಬಿಜೆಪಿ ತೆಕ್ಕೆಗೆ.

Gubbi: ಕೊಂಡ್ಲಿ ಗ್ರಾ, ಪಂ,ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಬಿಜೆಪಿ ತೆಕ್ಕೆಗೆ.

 

ಗುಬ್ಬಿ: ತಾಲ್ಲೂಕಿನ ನಿಟ್ಟೂರು ಹೋಬಳಿಯ ಕೊಂಡ್ಲಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಅಧ್ಯಕ್ಷರ, ಉಪಾಧ್ಯಕ್ಷಸ್ಥಾನಕ್ಕೆನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಅಧ್ಯಕ್ಷರಾಗಿ ಯಶೋಧಮ್ಮ, ಉಪಾಧ್ಯಕ್ಷರಾಗಿ ಸೋಮಶೇಖರಯ್ಯ ಅವಿರೋಧವಾಗಿ ಆಯ್ಕೆಯಾದರು.

 

ನೂತನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋಧಮ್ಮ ಮಾತನಾಡಿ ಸರ್ವ ಸದಸ್ಯರ ಸಹಕಾರದಿಂದ ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ಎಲ್ಲಾ ಸದಸ್ಯರ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಹಳ್ಳಿಗಳಿಗೆ ಕುಡಿಯುವ ನೀರು, ಚರಂಡಿ ಸ್ವಚ್ಛತೆ, ರಸ್ತೆ ನಿರ್ಮಾಣ, ಬೀದಿದೀಪ ಸೇರಿದಂತೆ ಗ್ರಾಮ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತೇನೆ. ಇನ್ನೂ ಬೇಸಿಗೆ ಇರುವುದರಿಂದ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುವುದು. ಮ ನರೇಗಾ ಕಾಮಗಾರಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ತಾಲ್ಲೂಕಿನಲ್ಲಿ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ಮಾಡುತ್ತೇನೆ ಎಂದರು‌.

 

ನೂತನ ಉಪಾಧ್ಯಕ್ಷ ಸೋಮಶೇಖರಯ್ಯ ಮಾತನಾಡಿ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಿದೆ. ಜೆಜೆಎಂ ಕಾಮಗಾರಿ ಅಪೂರ್ಣಗೊಂಡಿದ್ದು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸುವ ಮೂಲಕ ಜೆಜೆಎಂ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ತಿಳಿಸಿದರು.

 

ಇದೇ ಸಂದರ್ಭದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಚುನಾವಣಾ ಅಧಿಕಾರಿಯಾಗಿ ಇಓ ಶಿವಪ್ರಕಾಶ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.

 

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಸೋಮೇಗೌಡ, ಲೋಕೇಶ್, ಭಾಗ್ಯ, ಮೀನಾಕ್ಷಿ, ದೀಲಿಪ್ ಕುಮಾರ್, ನಿಂಗಯ್ಯ, ಲಕ್ಷ್ಮೀದೇವಮ್ಮ, ಜ್ಞಾನಾಂಬಿಕ, ಶ್ರೀಪತಿ, ರತ್ನಮ್ಮ ಬಸವರಾಜು, ಲೋಕೇಶ್, ವೀಣಾ, ಮುಖಂಡರಾದ ಕಾರೇಕುರ್ಚಿ ಸತೀಶ್, ಸುಧಾಕರ್, ತಮ್ಮೇಗೌಡ, ವೆಂಕಟೇಶ್, ಯೋಗೇಶ್, ಸದಾಶಿವು, ಸೀಗಯ್ಯ ಮಂಜುನಾಥ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

 

ವರದಿ :ಶ್ರೀಕಾಂತ್ ಗುಬ್ಬಿ.

 

 

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *