Janataa24 NEWS DESK
Gubbi: ಗುಬ್ಬಿ ತಾಲೂಕಿನ ರೋಲ್-ಕಾಲ್ ಪತ್ರಕರ್ತರ ಮೇಲೆ ಶಾಸಕ ಎಸ್ ಆರ್ ಶ್ರೀನಿವಾಸ್ ತೀವ್ರ ಕಿಡಿ.

ಗುಬ್ಬಿ: ತಾಲೂಕಿನಲ್ಲಿ ರೋಲ್ ಕಾಲ್ ಪತ್ರಕರ್ತರ ಹಾವಳಿ ಹೆಚ್ಚಾಗಿದ್ದು ಇದರಿಂದ ಸಮಾಜದ ಸ್ವಾಸ್ಥ್ಯ ಹದಗೇಡುತ್ತಿದೆ. ಅಧಿಕಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗುತ್ತಿದ್ದು ಪತ್ರಕರ್ತರ ಸಂಘ ರೋಲ್ ಕಾಲ್ ಪತ್ರಕರ್ತರಿಗೆ ಕಡಿವಾಣ ಹಾಕಬೇಕೆಂದು ಶಾಸಕ ಎಸ್ ಆರ್ ಶ್ರೀನಿವಾಸ್ ಹರಿಹಾಯ್ದರು.
ಪಟ್ಟಣದ ಶ್ರೀ ಚನ್ನಬಸವೇಶ್ವರ ದೇವಸ್ಥಾನದ ಆವರಣದಲ್ಲಿ 3.47 ಕೋಟಿ ರೂಗಳ ವಿವಿಧ ಅನುದಾನದಲ್ಲಿ ಪಟ್ಟಣದ ವಿವಿಧ ವಾರ್ಡ್ ಗಳಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು
ಪತ್ರಕರ್ತರ ಹೆಸರಿನಲ್ಲಿ ಅಧಿಕಾರಿಗಳು ಮತ್ತು ಸಾರ್ವಜನಿಕರಿಗೆ ವಿನಾಕಾರಣ ತೊಂದರೆ ನೀಡಿದರೆ ಅಂಥವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದ ಅವರು ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಏರಿಕೆ ಮಾಡಲಾಗಿದ್ದು ಇದರಿಂದ ಸಾರ್ವಜನಿಕರಿಗೆ ಯಾವುದೇ ರೀತಿಯಿಂದಲೂ ಹೊರೆಯಾಗುವುದಿಲ್ಲ.
ಈ ಹಿಂದೆಯೂ ಸಹ ಆರ್ ಅಶೋಕ್ ಅವರ ಬಿಜೆಪಿ ಸರ್ಕಾರದಲ್ಲಿ ಬಿಜೆಪಿ ಸರ್ಕಾರವು ಟಿಕೆಟ್ ದರ ಹೆಚ್ಚಿಸಲಾಗಿತ್ತು. ಪೆಟ್ರೋಲ್ ದರ ಬಸ್ಸಿನ ಬಿಡಿ ಭಾಗಗಳು ದರ ಹಾಗೂ ನೌಕರರ ವೇತನ ನೀಡಬೇಕಾಗಿರುವುದರಿಂದ ಬಸ್ ಟಿಕೆಟ್ ದರವನ್ನು ಹೆಚ್ಚಿಸಲಾಗಿದೆ. ವಿರೋಧ ಪಕ್ಷದವರು ವಿನಾಕಾರಣ ಇದನ್ನು ರಾಜಕೀಯವಾಗಿ ಎಳೆದ ತರುತ್ತಿದ್ದಾರೆ ಎಂದು ಎನ್ ಡಿ ಎ ಸರ್ಕಾರ ವಿರುದ್ಧ ಹರಿಹಾಯ್ದರು. ಹಾಗೂ ದಲಿತ ಯುವಕನ ಮೇಲೆ ಹಲ್ಲೆ ನಡೆದಿರುವುದು ಖಂಡನೀಯ ಆರೋಪಿಗಳ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.
ಇದರಿಂದಾಚೆಗೆ ಶಾಸಕ ಶ್ರೀನಿವಾಸ್ ರನ್ನು ಈ ಮಟ್ಟಕ್ಕೆ ರೋಸಿದ ರೋಲ್ ಕಾಲ್ ಪತ್ರಕರ್ತ ಯಾರು.? ಶಾಸಕರು ಹೆಸರು ಹೇಳದೆ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು ಸಾಮಾಜಿಕ ವಲಯಗಳಲ್ಲಿ ಚರ್ಚೆ ಆಗುತ್ತಿದೆ.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುಳಾದೇವಿ, ಜಿಪಂ ಮಾಜಿ ಸದಸ್ಯ ಜಿ ಎಚ್ ಜಗನ್ನಾಥ್, ಪಪಂ ಅಧ್ಯಕ್ಷೆ ಮಂಗಳಮ್ಮ, ಉಪಾಧ್ಯಕ್ಷೆ ಮಮತ, ಪಪಂ ಸದಸ್ಯರು ಸೇರಿದಂತೆ ಮುಖಂಡರು ಹಾಜರಿದ್ದರು.
ವರದಿ: ಶ್ರೀಕಾಂತ್ ಗುಬ್ಬಿ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/iasipskas-who-stood-as-the-godfather-of-the/
https://www.janataa24.com/miscreants-uprooted-40-coconut-trees-turuvekere/
Mandya: ಪತ್ನಿ ನೇಣಿಗೆ ಶರಣಾದದನ್ನು ಕಂಡು ಕೆರೆಗೆ ಹಾರಿ ಪ್ರಾಣ ಬಿಟ್ಟ ಪತಿ.