Janataa24 NEWS DESK
Gubbi: ಜುಲೈ 12 ರಂದು ರಾಷ್ಟ್ರೀಯ ಲೋಕಅದಲಾತ್.
ಗುಬ್ಬಿ : ಸಾರ್ವಜನಿಕರು ಲೋಕಅದಾಲತ್(Lok Adalat) ನಲ್ಲಿ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳುವುದರಿಂದ ಸಮಯ,ಹಣ,ಉಳಿಯುವ ಜೊತೆಗೆ ನೆಮ್ಮದಿ ಪಡೆಯಲು ಸಾಧ್ಯವಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಅನುಪಮ ಡಿ ತಿಳಿಸಿದರು.
ಅವರು ಬುಧವಾರ ನ್ಯಾಯಾಲಯದ ಅವರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಸಾರ್ವಜನಿಕರಲ್ಲಿ ಅರಿವು(Awareness)ಮೂಡಿಸದ ಹೊರತು ಕಾನೂನುಗಳ ಸಮರ್ಪಕ ಪಾಲನೆ ಸಾಧ್ಯವಾಗುವುದಿಲ್ಲ. ಕಾನೂನುಗಳ ಬಗ್ಗೆ ಸಮರ್ಪಕ ಅರಿವು ಮೂಡಿಸುವ ಮೂಲಕ ಸುಸ್ಥಿರ ಸಮಾಜ ನಿರ್ಮಾಣಕ್ಕೆ ಎಲ್ಲರೂ ಮುಂದಾಗ ಬೇಕಿದೆ ಎಂದು ತಿಳಿಸಿದರು.
ಅಪರಾಧ ಪ್ರಕರಣಗಳನ್ನು ಬೇರು ಸಮೇತ ಕಿತ್ತುಹಾಕಲು ಎಷ್ಟೇ ಪ್ರಯತ್ನ ಪಡುತ್ತಿದ್ದರೂ ಪ್ರಕರಣಗಳು ನಡೆಯುತ್ತಾ ಇರುವುದು ದುರಾದೃಷ್ಟಕರ. ಎಲ್ಲರಲ್ಲಿಯೂ ಜಾಗೃತಿ ಮೂಡಿಸುವ ಮೂಲಕ ಅಪರಾಧಗಳನ್ನು ತಡೆಗಟ್ಟಲು ಮುಂದಾಗ ಬೇಕಿದೆ ಎಂದು ತಿಳಿಸಿದರು.
ಮೋಟಾರು ವಾಹನ ಅಪಘಾತಗಳ ಬಗ್ಗೆ ಅರಿವು ಮೂಡಿಸಲು ಜಾಗೃತಿ ಕಾರ್ಯಕ್ರಮಗಳನ್ನು (Programe) ಹಮ್ಮಿಕೊಳ್ಳಲಾಗುತ್ತಿರುವ ಜೊತೆಗೆ ಪೊಲೀಸ್ (Police) ಅಧಿಕಾರಿಗಳಿಗೂ ಕಟ್ಟುನಿಟ್ಟಿನ ಸೂಚನೆ ಕ್ರಮಗಳನ್ನು ಕೈಕೊಳ್ಳುವಂತೆ ಸೂಚಿಸಲಾಗಿದೆ ಎಂದು ಹೇಳಿದರು.
ಅಧಿಕ ಹಿರಿಯ ಸಿವಿಲ್ ನ್ಯಾಯಾಧೀಶರದ ಪೂರ್ಣಿಮಾ ಕೆ ಯಾದವ್ ಮಾತನಾಡಿ ಕಾನೂನು ವ್ಯಾಪ್ತಿಯಲ್ಲಿ ಸಾಧ್ಯವಿರುವ ಎಲ್ಲಾ ಪ್ರಕರಣಗಳನ್ನು ರಾಜಿಯ ಮೂಲಕ ಲೋಕದಾಲತ್ ನಲ್ಲಿ ಬಗೆಹರಿಸಲಾಗುವುದು.ಎರಡು ಕಡೆಯ ಪಕ್ಷಗಾರರಿಗೂ ಕಾನೂನು ತಿಳುವಳಿಕೆ ನೀಡುವ ಮೂಲಕ ರಾಜಿ ಸಂಧಾನ ಮಾಡಲಾಗುವುದು. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ಅನುಕೂಲವಾಗುವುದರಿಂದ ವ್ಯಾಜ್ಯಗಳನ್ನು ಲೋಕ್ ಅದಾಲತ್ ನಲ್ಲಿ ಬಗೆಹರಿಸಿಕೊಳ್ಳುವಂತೆ ಕರೆ ನೀಡಿದರು.
ಕೌಟುಂಬಿಕ ಪ್ರಕರಣ,ಸಿವಿಲ್ ವ್ಯಾಜ್ಯಗಳು,ಅಮಲ್ದಾರಿ ದಾವೆಗಳು,ವಿಚ್ಛೇದನ ಪ್ರಕರಣಗಳು ಒಳಗೊಂಡಂತೆ ಬಗೆಹರಿಸಬಹುದಾದ ಎಲ್ಲಾ ವ್ಯಾಜ್ಯಗಳನ್ನು ರಾಜಿ ಮಾಡಿಕೊಳ್ಳಲು ಉತ್ತಮ ಅವಕಾಶ ದೊರೆತಿರುವುದರಿಂದ ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.
ಪ್ರಧಾನ ಕಿರಿಯ ಸಿವಿಲ್ ನ್ಯಾಯಾಧೀಶರಾದ ಕಿರಣ್ ಎಸ್ ಪಿ ಮಾತನಾಡಿ ಸಣ್ಣಪುಟ್ಟ ವ್ಯತ್ಯಾಸದಿಂದ ನ್ಯಾಯಾಲಯಕ್ಕೆ ಅಲೆದಾಡುವಂತೆ ಮಾಡಿಕೊಳ್ಳುವ ಮೂಲಕ ಸಾರ್ವಜನಿಕರು ಸಾಕಷ್ಟು ತೊಂದರೆಗೆ ಸಿಲುಕುತ್ತಿದ್ದಾರೆ.
ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಲೋಕ್ ಅದಾಲತ್ ಅಯೋಜಿಸಲಾಗುತ್ತಿದೆ ಎಂದು ಹೇಳಿದರು. ನ್ಯಾಯಾಲಯಗಳಲ್ಲಿ ಅನೇಕ ವರ್ಷಗಳವರೆಗೆ ವ್ಯಾಜ್ಯ ಆಡಬೇಕಾದ ಸಂದರ್ಭ ಬರುವುದರಿಂದ ಪ್ರತಿ ಮೂರು ತಿಂಗಳಿಗೊಮ್ಮೆ ಲೋಕ್ ಅದಾಲತ್ ಗಳನ್ನು ಏರ್ಪಡಿಸಿ ರಾಜಿ ಸಂಧಾನದ ಮೂಲಕ ವ್ಯಾಜ್ಯಗಳನ್ನು ಪರಿಹರಿಸಲಾಗುವುದು. ಆಗುವುದು ಇದರಿಂದ ಸರ್ವಜನಿಕರಿಗೆ ಸಾಕಷ್ಟು ಅನುಕೂಲವಾಗುವುದರಿಂದ ಸಹಕರಿಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಎಂ ಪಿ ಮೋಹನ್, ಉಪಾಧ್ಯಕ್ಷ ಸಿ ಕೆ ರವೀಂದ್ರ, ಕಾರ್ಯದರ್ಶಿ ಎಂ ಪಿ ರವೀಶ್, ಜಂಟಿ ಕಾರ್ಯದರ್ಶಿ ರಂಗಸ್ವಾಮಯ್ಯ, ಖಜಾಂಚಿ ಪುಷ್ಪಾವತಿ, ಸರ್ಕಾರಿ ವಕೀಲರಾದ ಶೋಭಾ, ನಿರಂಜನ್ ಕುಮಾರ್, ಅಕ್ಷತಾ, ನ್ಯಾಯಾಲಯದ ಸಿಬ್ಬಂದಿ ಹಾಜರಿದ್ದರು.
ವರದಿ : ಶ್ರೀಕಾಂತ್ ಗುಬ್ಬಿ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.