Janataa24 NEWS DESK
Gubbi: ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ–ಕೆ ಆರ್ ವೆಂಕಟೇಶ್.

ಗುಬ್ಬಿ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸದುಪಯೋಗವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕೆಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಕೆ ಆರ್ ವೆಂಕಟೇಶ್ ತಿಳಿಸಿದರು.
ಪಟ್ಟಣದ ಸಾಮರ್ಥ್ಯ ಸೌಧದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು
ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹ ಜ್ಯೋತಿ, ಶಕ್ತಿಯೋಜನೆ, ಯುವನಿಧಿ, ಅನ್ನಭಾಗ್ಯ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜಾರಿಗೊಳಿಸಿದ್ದರು. ಬಡವರು ಶೋಷಿತರು ಕಾರ್ಮಿಕರು ಮಹಿಳೆಯರು ಎಲ್ಲರಿಗೂ ಈ ಸೌಲಭ್ಯವನ್ನು ತಲುಪಿಸಲಾಗುತ್ತಿದೆ. ಈ ಯೋಜನೆಯ ಸದುಪಯೋಗದಿಂದಾಗಿ ಕರ್ನಾಟಕದ ಜನತೆಯು ಪ್ರಗತಿಯತ್ತ ಸಾಗುತ್ತಿದ್ದಾರೆ. ಈ ಯೋಜನೆಯಿಂದ ಸ್ಪೂರ್ತಿಗೊಂಡ ಬೇರೆ ರಾಜ್ಯಗಳ ಸರ್ಕಾರಗಳು ಈ ಮಹತ್ವಕಾಂಕ್ಷಿ ಯೋಜನೆಗಳನ್ನು ಎಲ್ಲಾ ರಾಜ್ಯಗಳಲ್ಲೂ ಅನುಷ್ಠಾನಗೊಳಿಸುತ್ತಿರುವುದು ರಾಜ್ಯ ಸರ್ಕಾರಕ್ಕೆ ಹೆಮ್ಮೆಯ ವಿಷಯವಾಗಿದೆ. ತಾಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಇದ್ದು ಯಾರು ಗ್ಯಾರೆಂಟಿ ಯೋಜನೆಗಳ ಉಪಯೋಗ ಪಡೆದಿಲ್ಲ, ಅಂತವರನ್ನು ಹುಡುಕಿ ಗ್ಯಾರಂಟಿ ಯೋಜನೆಗಳ ಸದುಪಯೋಗವನ್ನು ತಲುಪಿಸುವುದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು. ಈ ನಿಟ್ಟಿನಲ್ಲಿ ಅನುಷ್ಠಾನ ಸಮಿತಿಯ ಸದಸ್ಯರು ಕಾರ್ಯಕರ್ತರಾಗಿ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ಕೆಲಸ ಮಾಡಬೇಕು ಹಾಗೂ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಕಾರ್ಯನಿರ್ವಹಣಾಧಿಕಾರಿ ಯುವ ಶಿವಪ್ರಕಾಶ್ ಸದಸ್ಯರಾದ ಶಾಂತಕುಮಾರ್, ರಾಜಣ್ಣ, ಶರ್ಪುದ್ದೀನ್, ಕೆ ಎಸ್ ರಮೇಶ್, ಚೇತನ್ ಕುಮಾರ್, ಗೋಪಾಲ್, ವತ್ಸಲ ಕುಮಾರ್, ಮಲ್ಲಿಕಾರ್ಜುನಸ್ವಾಮಿ, ಮಂಜುನಾಥ್, ಯತೀಶ್ ಸೇರಿದಂತೆ ಸಮಿತಿಯ ಸದಸ್ಯರು ಹಾಗೂ ಮುಖಂಡರು ಹಾಜರಿದ್ದರು.
ವರದಿ: ಶ್ರೀಕಾಂತ್ ಗುಬ್ಬಿ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/iasipskas-who-stood-as-the-godfather-of-the/
https://www.janataa24.com/miscreants-uprooted-40-coconut-trees-turuvekere/
Mandya: ಪತ್ನಿ ನೇಣಿಗೆ ಶರಣಾದದನ್ನು ಕಂಡು ಕೆರೆಗೆ ಹಾರಿ ಪ್ರಾಣ ಬಿಟ್ಟ ಪತಿ.