Janataa24 NEWS DESK
Gubbi:ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು-ಚಂದ್ರಶೇಖರ ಶ್ರೀ.
ಗುಬ್ಬಿ: ವಿದ್ಯಾರ್ಥಿಗಳು ಸಂಸ್ಕಾರವಂತ ಶಿಕ್ಷಣ ಪಡೆಯುವ ಮೂಲಕ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಉತ್ತಮಸಮಾಜದ ಏಳಿಗೆಗೆ ಶ್ರಮಿಸಬೇಕು ಎಂದು ಚಂದ್ರಶೇಖರ ಮಹಾಸ್ವಾಮೀಜಿ ತಿಳಿಸಿದರು.
ತಾಲ್ಲೂಕಿನ ಹೇರೂರು ಸಿದ್ಥರಾಮೇಶ್ವರ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಶಿವಬಸವ ನೌಕರರ ಸೌಹಾರ್ದ ಸಹಕಾರ ಸಂಘ ವತಿಯಿಂದ ಆಯೋಜಿಸಿದ್ದ ತಾಲ್ಲೂಕು ವೀರಶೈವ ಲಿಂಗಾಯತ ನೌಕರರ ಸಮಾವೇಶ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಕಾರ್ಯಕ್ರಮ ಉದ್ಘಾಟಿಸಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು.
ಜನರು ಶಾಂತಿ ಸೌಹಾರ್ದತೆಯಿಂದ ಇದ್ದಾಗ ಸಮಾಜ, ಈ ದೇಶ ಸೌಕ್ಯವಾಗಿರುತ್ತದೆ. ರಾಷ್ಟ್ರದ ಉನ್ನತಿ ಸಾಧ್ಯವಾಗುತ್ತದೆ. ವೀರಶೈವ ಲಿಂಗಾಯತ ಸಮುದಾಯ ವಿಶ್ವಮಾನ್ಯ ಧರ್ಮವಾಗಿದ್ದು ದಾಸೋಹಕ್ಕೆ ಹೆಸರುವಾಸಿಯಾಗಿದೆ. ಇನ್ನೂ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣವನ್ನು ಪಡೆಯಬೇಕಾದರೆ ಸರ್ಕಾರ ಶಾಲೆಗಳಿಗೆ ಶಿಕ್ಷಕರನ್ನು ಒದಗಿಸಬೇಕು. ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ತಿಳಿಸಿದರು.
ಶ್ರೀ ವಿಭವ ವಿದ್ಯಾಶಂಕರ ಸ್ವಾಮೀಜಿ ಆಶೀರ್ವಚನ ನೀಡಿ ಪೋಷಕರು ತಮ್ಮ ಮಕ್ಕಳ ಮೇಲೆ ವ್ಯಾಮೋಹವನ್ನು ಬೆಳೆಸಿಕೊಳ್ಳದೆ ಪ್ರೀತಿಯನ್ನು ಬೆಳೆಸಿಕೊಂಡು ಮಕ್ಕಳನ್ನು ದೂರ ಇಟ್ಟು ವಿದ್ಯಾಭ್ಯಾಸ ಮಾಡಿಸಿದಾಗ ಮಕ್ಕಳು ವಿದ್ಯಾಭ್ಯಾಸ ಮಾಡುವ ಜೊತೆ ಜೊತೆಗೆ ಉತ್ತಮ ಸಂಸ್ಕಾರ, ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳುತ್ತಾರೆ. ವಿದ್ಯಾರ್ಥಿಗಳು ವ್ಯಾಮೋಹಕ್ಕೆ ಒಳಗಾಗದೆ ಶೈಕ್ಷಣಿಕವಾಗಿ ಹೆಚ್ಚಿನ ಪ್ರಗತಿ ಹೊಂದಬೇಕು ಎಂದು ತಿಳಿಸಿದರು.
ಬಿಜೆಪಿ ಮುಖಂಡ ಎಸ್ ಡಿ ದಿಲೀಪ್ ಕುಮಾರ್ ಮಾತನಾಡಿ ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಒಳಗಾಗಿ ಸಂಬಂಧಗಳ ಮೌಲ್ಯಗಳನ್ನು ಮರೆಯುತ್ತಿದ್ದಾರೆ. ಸಂಬಂಧಗಳ ಮೌಲ್ಯಗಳನ್ನು ಬೆಳೆಸಿಕೊಳ್ಳುವ ಮೂಲಕ ಸಮಾಜದ ಉನ್ನತಿಗೆ ಪೂರಕವಾಗಿರಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಕೆ ಎಸ್ ಸಿದ್ದಲಿಂಗಪ್ಪ, ಪ್ರಾಂಶುಪಾಲ ಪ್ರಸನ್ನ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಪಂಚಾಕ್ಷರಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಪ್ರಭಾಕರ್, ಸೋಮಶೇರ್, ಕೆ ಎಂ ರವೀಶ್, ಎಸ್ ಯೋಗಾನಂದ ಸೇರಿದಂತೆ ವೀರಶೈವ ಲಿಂಗಾಯತ ಸಮುದಾಯ ಬಂಧುಗಳು ಉಪಸ್ಥಿತರಿದ್ದರು.
ವರದಿ: ಶ್ರೀಕಾಂತ್ ಗುಬ್ಬಿ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.instagram.com/janataa24?igsh=aXM0Ym9zb2Y2YTRn
https://www.janataa24.com/pavagada-nss-students-can-learn-rural-values/