Janataa24 NEWS DESK
Gubbi: ತಿಗಳ ಸಮಾಜವು ಶೈಕ್ಷಣಿಕವಾಗಿ ರಾಜಕೀಯ ವಾಗಿ ಪ್ರಗತಿಯಾಗಬೇಕು : ಶಾಸಕ ಎಸ್ ಆರ್ ಶ್ರೀನಿವಾಸ್.
ಗುಬ್ಬಿ : ತಿಗಳ ಸಮಾಜ ಶೈಕ್ಷಣಿಕವಾಗಿ, ರಾಜಕೀಯವಾಗಿ ಅಭಿವೃದ್ಧಿ ಹೊಂದುವ ಮೂಲಕ ರಾಜಕೀಯವಾಗಿ ಪ್ರಗತಿ ಹೊಂದಬೇಕು ಎಂದು ಶಾಸಕ ಎಸ್ ಆರ್ ಶ್ರೀನಿವಾಸ್ ತಿಳಿಸಿದರು.
ಪಟ್ಟಣದ ಎವಿಕೆ ಸಮುದಾಯ ಭವನದಲ್ಲಿ ಅಗ್ನಿವಂಶ ಕ್ಷತ್ರಿಯ ತಿಗಳ ಸಮಾಜದ ಅಗ್ನಿ ಬನ್ನಿರಾಯ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು
ತಿಗಳ ಸಮಾಜ ತಮ್ಮನ್ನು ಹೆಚ್ಚಾಗಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು ಶ್ರಮಿಕ ವರ್ಗವಾಗಿದೆ. ಸಂಕಲ್ಪ ಮಾಡಿದ ಕೆಲಸವನ್ನು ಪಟ್ಟುಬಿಡದೆ ಶ್ರದ್ಧೆಯಿಂದ ಮಾಡುತ್ತಾರೆ. ತಿಗಳ ಸಮಾಜ ಸಮುದಾಯವನ್ನು ಸಂಘಟಿಸುವುದರ ಜೊತೆಗೆ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಶೈಕ್ಷಣಿಕ ಪ್ರಗತಿಗೆ ಕಾರಣರಾಗಬೇಕು. ಇನ್ನೂ ತಿಗಳ ಸಮಾಜದ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ 25 ಲಕ್ಷ ರೂಪಾಯಿಗಳ ಅನುದಾನವನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಜೆಡಿಎಸ್ ಮುಖಂಡ ಬಿ ಎಸ್ ನಾಗರಾಜು ಮಾತನಾಡಿ ತಿಗಳ ಸಮಾಜ ಸಮಾಜದ ಮುನ್ನಲೆಗೆ ಬಂದು ರಾಜಕೀಯವಾಗಿ ಹಾಗೂ ಸರ್ಕಾರಿ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದರು.
ಬಿಜೆಪಿ ಮುಖಂಡ ಎಸ್ ಡಿ ದಿಲೀಪ್ ಕುಮಾರ್ ಮಾತನಾಡಿ ಜನರು ತಮ್ಮ ಸಿದ್ಧಾಂತಗಳಿಗೆ ಅನುಗುಣವಾಗಿ ಬೇರೆ ಬೇರೆ ರಾಜಕೀಯ ಪಕ್ಷಗಳಲ್ಲಿ ಕೆಲಸ ಮಾಡುತ್ತಾರೆ. ಆದರೆ ಸಮಾಜ ಎಂದು ಬಂದಾಗ ಒಗ್ಗಟ್ಟಾಗಿ, ಸಂಘಟಿತರಾಗಿ ಕೆಲಸ ಮಾಡುವ ಯಾವುದಾದರೂ ಒಂದು ಸಮುದಾಯವಿದ್ದರೆ ಅದು ತಿಗಳ ಸಮುದಾಯ ಎಂದು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಅಧ್ಯಕ್ಷೆ ಮಮತ, ಉಂಡೆ ರಾಮಣ್ಣ, ನಂಜೇಗೌಡ, ಜಿ ಎನ್ ಬೆಟ್ಟಸ್ವಾಮಿ, ಬಿ ಎಸ್ ನಾಗರಾಜು, ಕಳ್ಳಿಪಾಳ್ಯ ಲೋಕೇಶ್ ಹೊನ್ನಗಿರಿಗೌಡ, ಲೋಕೇಶ್ ಬಾಬು, ಯೋಗಾನಂದ ಕುಮಾರ್ ಇತರರು ಉಪಸ್ಥಿತರಿದ್ದರು.
ವರದಿ: ಶ್ರೀಕಾಂತ್ ಗುಬ್ಬಿ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/iasipskas-who-stood-as-the-godfather-of-the/
https://www.janataa24.com/miscreants-uprooted-40-coconut-trees-turuvekere/
Mandya: ಪತ್ನಿ ನೇಣಿಗೆ ಶರಣಾದದನ್ನು ಕಂಡು ಕೆರೆಗೆ ಹಾರಿ ಪ್ರಾಣ ಬಿಟ್ಟ ಪತಿ.