Janataa24 NEWS DESK
HD Kumaraswamy : ಕುಮಾರಸ್ವಾಮಿ ಆಸ್ವತ್ರೆಯಿಂದ ಡಿಸ್ಚಾರ್ಜ್ ಯಾವಾಗ..? ಪುತ್ರ ನಿಖಿಲ್ ಹೇಳಿದ್ದೇನು..?

ಬೆಂಗಳೂರು: ಹೃದಯ ಅನಾರೋಗ್ಯದಿಂದ ಆಸ್ವತ್ರೆಗೆ ಸೇರಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಆಸ್ವತ್ರೆಯಿಂದ ಅತೀ ಶೀಘ್ರದಲ್ಲಿಯೇ ಬಿಡುಗಡೆಯಾಗುತ್ತಾರೆ, ರಾಮನಗರ ಜಿಲ್ಲೆಯ ಚನ್ನಪಟ್ಟಣದ ರೆಸಾರ್ಟ್ನಲ್ಲಿ ನಡೆಯುತ್ತಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಹೆಚ್ಡಿ ಕುಮಾರಸ್ವಾಮಿಗೆ ನಿನ್ನೆ ಹೃದಯ ಶಸ್ತ್ರ ಚಿಕಿತ್ಸೆ ನಡೆದಿದೆ. ರಾಜ್ಯದ ಜನರ ಆಶೀರ್ವಾದರಿಂದ ಕುಮಾರಸ್ವಾಮಿ ಅವರು ಗುಣಮುಖರಾಗಿದ್ದಾರೆ. ಭಾನುವಾರ ಡಿಸ್ಚಾರ್ಜ್ ಆಗುತ್ತಾರೆ ಎಂದಿದ್ದಾರೆ.
ಮಾಚಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಗೆ ನಿನ್ನೆ ಲಘು ಹೃದಯ ಶಸ್ತ್ರ ಚಿಕಿತ್ಸೆ ನಡೆದಿದೆ. ವೈದ್ಯ ಡಾ.ಮಂಜುನಾಥ್ ಮತ್ತು ಸಾಯಿ ಸತೀಶ್ ನೇತೃತ್ವದಲ್ಲಿ ಮೂರುವರೆ ಗಂಟೆ ಕಾಲ ನಡೆದ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ರಾಜ್ಯದ ಜನರ ಆಶೀರ್ವಾದರಿಂದ ಕುಮಾರಸ್ವಾಮಿ ಅವರು ಗುಣಮುಖರಾಗಿ ಚೇತರಿಸಿಕೊಂಡಿದ್ದಾರೆ. ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)ಹೇಳಿದ್ದಾರೆ. ಜಿಲ್ಲೆಯ ಚನ್ನಪಟ್ಟಣದ ರೆಸಾರ್ಟ್ನಲ್ಲಿ ನಡೆಯುತ್ತಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾನುವಾರ ಆಸ್ಪತ್ರೆಯಿಂದ ಕುಮಾರಸ್ವಾಮಿ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಹೇಳಿದ್ದಾರೆ.
ಆಗಾಗ ಬಹುಕಾಲದಿಂದ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದ ಕುಮಾರಸ್ವಾಮಿ ಇತ್ತೀಚೆಗೆ ಚಿಕಿತ್ಸೆಗಾಗಿ ಚೆನ್ನೈಗೆ ತೆರಳಿದ್ದರು. ಪದ್ಮನಾಭ ನಗರದ ದೇವೇಗೌಡರ ನಿವಾಸದಲ್ಲಿ ತಂದೆ ಹೆಚ್ಡಿ ದೇವೇಗೌಡ ಹಾಗೂ ತಾಯಿ ಚೆನ್ನಮ್ಮ ಅವರಿಂದ ಆಶೀರ್ವಾದ ಪಡೆದ ಕುಮಾರಸ್ವಾಮಿ ನಂತರ ವಿಮಾನ ನಿಲ್ದಾಣಕ್ಕೆ ತೆರಳಿದ್ದರು.
ಬಳಿಕ ಚೆನ್ನೈನ ಅಪೋಲೊ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ಈ ಕುರಿತಾಗಿ ನಿಖಿಲ್ ಕುಮಾರಸ್ವಾಮಿ ಸಾಮಾಜಿಕ ಜಾಲತಾಣ ಎಕ್ಸ್(X)ನಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಮಾಜಿ ಮುಖ್ಯಮಂತ್ರಿಗಳು ಹಾಗೂ ನನ್ನ ಪೂಜ್ಯ ತಂದೆಯವರಾದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಮಾ.21 ರಂದು ಅತ್ಯಂತ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆ ನಡೆಯಿತು ಎಂಬ ಮಾಹಿತಿ ಅಭಿಮಾನಿಗಳಿಗೆ ಹಾಗೂ ಹಿತೈಶಿಗಳಿಗೆ ನೀಡಿದರು.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ
https://chat.whatsapp.com/Jf6jZ0gyQAEA5GBRpHnkrv
Subscribe YouTube
https://youtube.com/@janataa24?si=XsFcych2GMH0O6Gv
Japananda Swamy : ಬರಗಾಲದಲ್ಲಿ ಮೂಗು ಪ್ರಾಣಿಗಳ ರಕ್ಷಣೆಗೆ ನಿಂತ ಜಪಾನಂದ ಸ್ವಾಮಿ