Janataa24 NEWS DESK
HDK ಗೆ ಶಾಕ್ ಕೊಟ್ಟ ಡಿಕೆ ಶಿವಕುಮಾರ್: ಕೈ ಗೆ ಜೈ ಎಂದ ಚನ್ನಪಟ್ಟಣದ 9 ಜೆಡಿಎಸ್ ನಗರಸಭೆ ಸದಸ್ಯರು.
ರಾಮನಗರ: ಚನ್ನಪಟ್ಟಣದಲ್ಲಿ ರಾತ್ರೋ ರಾತ್ರಿ ಜೆಡಿಎಸ್ ಗೆ ಆಪರೇಷನ್ ಮಾಡುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಅನಿರೀಕ್ಷಿತ ಶಾಕ್ ಕೊಟ್ಟಿದ್ದಾರೆ
.
ಇನ್ನಿಲ್ಲದೆ ರಂಗೇರಿರುವ ಲೋಕಸಭಾ(Lokasabha 2024) ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಚನ್ನಪಟ್ಟಣದಲ್ಲಿ ಜೆಡಿಎಸ್(JDS) ಪಕ್ಷದಿಂದ ಆಯ್ಕೆಯಾದ ನಗರಸಭೆ ಅಧ್ಯಕ್ಷ ಸೇರಿದಂತೆ ಒಂಬತ್ತು ಮಂದಿ ಸದಸ್ಯರನ್ನು ಡಿಕೆ ಶಿವಕುಮಾರ್ ನೇತೃತ್ವದಲ್ಲಿ ತಡರಾತ್ರಿ ಕಾಂಗ್ರೆಸ್(Congress) ಸೇರ್ಪಡೆಯಾಗಿರುತ್ತಾರೆ.
ಚನ್ನಪಟ್ಟಣ ನಗರಸಭೆಯ ಅಧ್ಯಕ್ಷ ಪ್ರಶಾಂತ್, ಸದಸ್ಯರಾದ ರೇವಣ್ಣ,ಸೈಯದ್ ರಫೀಕ್, ಅಭಿದಾಭಾನು, ಭಾನುಪ್ರಿಯಾ, ಸತೀಶ್ ಬಾಬು, ಶ್ರೀನಿವಾಸಮೂರ್ತಿ, ಲೋಕೇಶ್, ನಾಗೇಶ್, ಸೇರಿದಂತೆ ಪಕ್ಷೇತರ ಸದಸ್ಯೆಯಾದ ಉಮಾ ಎಂಬವರು ಬೆಂಗಳೂರಿನ ಡಿಸಿಎಂ ನಿವಾಸದಲ್ಲಿ ಕಾಂಗ್ರೆಸ್‍ಗೆ ಸೇರ್ಪಡೆಗೊಂಡಿದ್ದಾರೆ.
ಚನ್ನಪಟ್ಟಣ ನಗರಸಭೆಯ ಒಟ್ಟು ಜೆಡಿಎಸ್ ಸದಸ್ಯರ ಪೈಕಿ ಮೂರನೇ ಒಂದರಷ್ಟು ಮಂದಿ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ. ತಮ್ಮನ್ನು ಕಾಂಗ್ರೆಸ್ ಸದಸ್ಯರೆಂದು ಪರಿಗಣಿಸಿ ನಗರಸಭೆಯಲ್ಲಿ ತಮಗೆ ಕಾಂಗ್ರೆಸ್ ಸದಸ್ಯರ ಜೊತೆ ಕೂರಲು ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಮನವಿಯನ್ನೂ ಮಾಡಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ(Amith Shah) ಸೇರಿದಂತೆ ರಾಜ್ಯದ ಘಟಾನುಘಟಿಗಳೆಲ್ಲ ಸೇರಿ ಶಕ್ತಿ ಪ್ರದರ್ಶನ ಮಾಡಿದ್ದ ಮೈತ್ರಿ ನಾಯಕರಿಗೆ ಇದೀಗ ಡಿಕೆ ಬ್ರದರ್ಸ್ ಅನಿರೀಕ್ಷಿತ ಶಾಕ್ ಕೊಟ್ಟಿದ್ದಾರೆ.
ಎಚ್ ಡಿ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಅಖಾಡಕ್ಕೆ ಕಾಲಿಟ್ಟ ಬೆನ್ನಲ್ಲೇ ಚನ್ನಪಟ್ಟಣದ ಜೆಡಿಎಸ್ ಸದಸ್ಯರನ್ನು ಕಾಂಗ್ರೆಸ್ ತನ್ನ ತೆಕ್ಕೆಗೆ ಎಳೆದುಕೊಂಡಿದೆ.
https://www.janataa24.com/fake-police-seized-foreign-currency-worth-21-lak/
https://www.janataa24.com/bmcri-47-sick-hostel-students-admitted-to-victor/
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
Subscribe YouTube