Janataa24 NEWS DESK
HDK :ಎನ್ ಡಿ ಎ ಜೊತೆಗಿನ ಜೆಡಿಎಸ್ ಮೈತ್ರಿನಲ್ಲಿ ಅಪಸ್ವರ ಕುಮಾರಸ್ವಾಮಿ ಮುನಿಸು.

ಬೆಂಗಳೂರು: ಆರಂಭದಿಂದಲೂ ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡು ಎದುರಾಳಿ ಪಕ್ಷವಾದ ಕಾಂಗ್ರೆಸ್ ಅನ್ನು ಕಟ್ಟಿ ಹಾಕಲು ಮೈತ್ರಿ ಪಕ್ಷಗಳು ಬಲೆ ಬೀಸಿದ್ದವೂ. ಈಗ ರಾಜಕೀಯ ವಿದ್ಯಮಾನಗಳ ಬದಲಾವಣೆ.
ರಾಜಕೀಯ ಒಳಬೇಗುದಿ ದೋರಣೆ ಕುರಿತು ಇದೀಗ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರ ಸ್ವಾಮಿ ಅಪಸ್ವರ ಎತ್ತಿರುವುದು ರಾಜಕೀಯ ವಲಯದಲ್ಲಿ ಅಪಸ್ವರದ ಗಾಳಿ ಬೀಸುತ್ತಿದೆ.
ಎನ್ ಡಿ ಎ ನಲ್ಲಿ ಮೈತ್ರಿ ಪಕ್ಷವಾಗಿ ಇರುವ ಜಾತ್ಯತೀತ ಜನತಾ ದಳ ಬಿಜೆಪಿ ನಡುವೆ ಅಪಸ್ವರ ಎದ್ದಿದೆ ಎಂಬ ವರದಿಗಳ ಬೆನ್ನಲ್ಲೇ ಆ ವಿಚಾರವಾಗಿ ಬಿಜೆಪಿ ಹೈಕಮಾಂಡ್ ಮಧ್ಯ ಪ್ರವೇಶಿಸಿದೆ. ಜೆಡಿಎಸ್ ಮುನಿಸು ಶಮನಗೊಳಿಸಲು ಬಿಜೆಪಿ ಹೈಕಮಾಂಡ್ ನಾಯಕರು ಹೆಚ್ ಡಿ ಕುಮಾರಸ್ವಾಮಿ ಅವರ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತುಕತೆ ನಡೆಸಿ, ಮೈತ್ರಿ ವಿಚಾರದಲ್ಲಿ ಯಾವುದೇ ಗೊಂದಲ ಬೇಡ ಎಂದು ಕುಮಾರಸ್ವಾಮಿಗೆ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಮೈತ್ರಿ ವಿಚಾರವಾಗಿ ಯಾವುದೇ ಗೊಂದಲ ಬೇಡ. ಎಲ್ಲವನ್ನೂ ಕುಳಿತು ಮಾತನಾಡಿ ಬಗೆಹರಿಸೋಣ. ಅನಗತ್ಯ ಗೊಂದಲಕ್ಕೆ ಅವಕಾಶ ಮಾಡಿಕೊಡುವುದು ಬೇಡ. ನಿಮ್ಮ ಹೃದಯದ ಚಿಕಿತ್ಸೆ ಸುಸೂತ್ರವಾಗಿ ನೆರವೇರಲಿ. ನಿಮ್ಮ ಆರೋಗ್ಯ ಸುಧಾರಿಸಿದ ನಂತರ ಮಾತುಕತೆ ನಡೆಸೋಣ. ಸದ್ಯದ ಮಟ್ಟಿಗೆ ನಿಮ್ಮ ಆರೋಗ್ಯವೇ ಮೊದಲ ಆದ್ಯತೆ ಆಗಿರಲಿ. ನೀವು ಗುಣಮುಖರಾದ ಬಳಿಕ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಪ್ರಧಾನಿ ಮೋದಿ(Modi) ಅವರನ್ನು ಒಂದೇ ವೇದಿಕೆಯಲ್ಲಿ ಬರುವಂತೆ ಮಾಡಿ ಕಾರ್ಯಕ್ರಮ ಮಾಡೋಣ ಎಂದು ಬಿಜೆಪಿ ಹೈಕಮಾಂಡ್ ಕುಮಾರಸ್ವಾಮಿಗೆ ಭರವಸೆ ನೀಡಿದೆ.
ಸೋಮವಾರ ಪಕ್ಷದ ಸಭೆ ನಡೆಸಿದ್ದ ಕುಮಾರಸ್ವಾಮಿ, ರಾಜ್ಯ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದ ಬಿಜೆಪಿ ನಾಯಕರು ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಕಲಬುರಗಿ ಹಾಗೂ ಶಿವಮೊಗ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ಪ್ರಚಾರ ಅಭಿಯಾನ ನಡೆದರೂ ಆ ಜಿಲ್ಲೆಗಳ ಜೆಡಿಎಸ್ ನಾಯಕರ ಬಳಿ ಸೌಜನ್ಯಕ್ಕೂ ಮಾತುಕತೆ ನಡೆಸಿಲ್ಲ. ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೂ ಆಹ್ವಾನ ನೀಡಿಲ್ಲ. ಅಲ್ಲದೆ ಕೇವಲ ಎರಡು ಸೀಟಿಗಾಗಿ ಬಿಜೆಪಿ ಜೊತೆ ಇಷ್ಟೆಲ್ಲ ಹೊಂದಾಣಿಕೆ ಮಾಡುವ ಅಗತ್ಯವಿದೆಯೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದರು. ಇದರ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಶಾಕ್ ಆಗಿ ಅಲರ್ಟ್ ಆಗಿ ಕುಮಾರ ಸ್ವಾಮಿ ಹೇಳಿಕೆ ಬಿಜೆಪಿಯಲ್ಲಿ ಆತಂಕ ಮನೆ ಮಾಡಿದೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ
https://chat.whatsapp.com/Jf6jZ0gyQAEA5GBRpHnkrv
Subscribe YouTube
https://youtube.com/@janataa24?si=XsFcych2GMH0O6Gv
Bangalore Rural: ವಂಚನೆ ಮಾಡಿದವನ ಮನೆ ಮುಂದೆ ಕುಳಿತು ಮಹಿಳೆ ಮತ್ತು ಕುಟುಂಬಸ್ಥರು ಧರಣಿ