
ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಅಧಿಕೃತವಾಗಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷ ಸೇರ್ಪಡೆ ಬೆನ್ನಲ್ಲೇ ಜಗದೀಶ್ ಶೆಟ್ಟರ್ ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿ ಫಾರಂ ನೀಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿರುವ ಜಗದೀಶ್ ಶೆಟ್ಟರ್ ಗೆ ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್ ಅವರು ಬಿ ಫಾರಂ ಪಡೆದಿದ್ದಾರೆ.
ಬೆಂಗಳೂರಿನ ಕೆಪಿಸಿಸಿ (KPCC) ಕಚೇರಿಯಲ್ಲಿ ಇಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್ ನ ಬಾವುಟ ನೀಡಿ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಗೆ ಬರ ಮಾಡಿಕೊಂಡರು.
ಈ ವೇಳೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜಗದೀಶ್ ಶೆಟ್ಟರ್ ಜೊತೆ ಹಲವು ನಾಯಕರು ಬರುತ್ತಿದ್ದಾರೆ. ನಮ್ಮ ಪಕ್ಷದ ನೀತಿ ಒಪ್ಪಿಕೊಂಡು ಬರುತ್ತಿದ್ದಾರೆ. ಜಗದೀಶ್ ಶೆಟ್ಟರ್ ಸೇರ್ಪಡೆಯಿಂದ ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಗೆ ಶಕ್ತಿ ಬರಲಿದೆ. ಅವರು ಸರಳ ಸಜ್ಜನೀಯ ರಾಜಕಾರಣಿಯಾಗಿದ್ದಾರೆ.ಹೀಗಾಗಿ ಅವರನ್ನು ಪಕ್ಷಕ್ಕೆ ಸ್ವಾಗತ ಕೋರುತ್ತೇನೆ ಎಂದು ಹೇಳಿದ್ದಾರೆ.
ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ,ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಎಂ.ಬಿ.ಪಾಟೀಲ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು
ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಶಿರಸಿಗೆ ತೆರಳಿ ಸಭಾಧ್ಯಕ್ಷ ವಿಶ್ವೇಶ್ವರ್ ಹೆಗಡೆ ಕಾಗೇರಿ ಅವರಿಗೆ ಖುದ್ದಾಗಿ ಭೇಟಿ ಮಾಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಂಜೆ ಬೆಂಗಳೂರಿಗೆ ಆಗಮಿಸಿದ ಜಗದೀಶ್ ಶೆಟ್ಟರ್, ಅವರ ಬೀಗರಾದ ಗಣೇಶ್ ಶಾಮನೂರು ಅವರ ನಿವಾಸದಲ್ಲಿ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್ ಅವರೊಂದಿಗೆ ಮಹತ್ವದ ಸಭೆ ನಡೆಯಿತು. ಸಭೆ ಬಳಿಕ ಕಾಂಗ್ರೆಸ್ ಸೇರ್ಪಡೆಯಾಗುವ ನಿರ್ಧಾರ ಮಾಡಿದ್ದರು.
jsbte7