Jetlag Party: ಜೆಟ್ಲಾಗ್ ಪಾರ್ಟಿ ಪ್ರಕರಣ– ನಟ ದರ್ಶನ್ ಗೆ ಬಿಗ್ ರಿಲೀಫ್.

ಬೆಂಗಳೂರು: ಇತ್ತೀಚೆಗಷ್ಟೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ 8 ಮಂದಿ ಜೆಟ್ ಲಾಗ್(JetLag) ಪಬ್‌ನಲ್ಲಿ ಪಾರ್ಟಿ ಮಾಡಿದ ಘಟನೆಗೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಎಲ್ಲರಿಗೂ ಇದೀಗ ಬಿಗ್ ರಿಲೀಫ್ ಸಿಕ್ಕಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಧಿ ಮೀರಿ ಪಾರ್ಟಿ ಮಾಡಲಾಗಿದೆ ಎಂದು ಆರೋಪವನ್ನು ದರ್ಶನ್(Darshan) ರವರು ಎದುರಿಸುತ್ತಿದ್ದರು. ಈ ಪ್ರಕರಣದ ವಿಚಾರಣೆಗೆ ಹಾಜರಾದ ಸಮಯದಲ್ಲಿ ದರ್ಶನ್ ಮಾಡಿದ್ದ ಹಾಸ್ಯ ಎಲ್ಲರಿಗೂ ಗೊತ್ತಿರುವಂತದ್ದೇ.
ಜೆಟ್ಲಾಗ್ ಪಬ್‌ನಲ್ಲಿ ತಡರಾತ್ರಿ ಪಾರ್ಟಿ ಮಾಡಿದ್ದು ಅಪರಾಧವೆಂದು ಆರೋಪಿಸಿ ಸುಬ್ರಹ್ಮಣ್ಯ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೀಗ ಸುಧೀರ್ಘ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಅನ್ನು ಸಲ್ಲಿಕೆ ಮಾಡಿರುತ್ತಾರೆ.
ಆರೋಪಿಗಳು ಎಣ್ಣೆ ಪಾರ್ಟಿ ಮಾಡಿಲ್ಲ ಬದಲಾಗಿ ಊಟ ಮಾಡಿರುತ್ತಾರೆ ಎಂದು ಪೊಲೀಸರು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿರುತ್ತಾರೆ.
ಅವಧಿ ಮೀರಿ ಪಾರ್ಟಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಟ್‌ಲ್ಯಾಗ್ ಪಬ್ ಮಾಲೀಕ, ಮ್ಯಾನೇಜರ್ ಮೇಲೆ ಕೇಸ್ ದಾಖಲಾಗಿತ್ತು. ಈ ಸಂಬಂಧ ನಟ ದರ್ಶನ್, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಸೇರಿ 8 ಮಂದಿಗೆ ನೋಟಿಸ್ ಜಾರಿಯಾಗಿತ್ತು.8 ಜನರು ವಿಚಾರಣೆಗೆ ಹಾಜರಾಗಿ ನಾವು ಪಾರ್ಟಿ ಮಾಡಿಲ್ಲ. ಕೇವಲ ಊಟ ಮಾತ್ರ ಮಾಡಿದ್ದೇವೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಆಧಾರಿಸಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ
https://janataa24.com/ballari-everyone-pays-money-in-election-only-give-us/
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
Subscribe YouTube